ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಶಾಸಕರ ಮನವಿ

ಉಡುಪಿ, ಜನವರಿ 02: ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ದಿನವನ್ನು ಐತಿಹಾಸಿಕ ಕ್ಷಣವನ್ನು ಆಚರಿಸುವ ಸಲುವಾಗಿ ಜನವರಿ 22ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಮನವಿ ಮಾಡಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಶಾಸಕ ಯಶ್ ಪಾಲ್ ಸುವರ್ಣ, ಅಂದು ಕೋಟ್ಯಾಂತರ ಭಕ್ತರ ಭಾವನಾತ್ಮಕ, ಐತಿಹಾಸಿಕ ದಿನವಾಗಲಿದೆ.ದೇಶದಾದ್ಯಂತ ಪೂಜೆ ಭಜನೆ ಸಂಕೀರ್ತನೆ ನಡೆಯಲಿದೆ. ಕೋಟ್ಯಾಂತರ ಭಕ್ತರು ಸಂಭ್ರಮಾಚರಣೆ ಮಾಡಲು ನಿರ್ಧರಿಸಿದ್ದಾರೆ. ಎಲ್ಲರಿಗೂ ಶ್ರೀರಾಮ ದೇವರ ಸೇವೆಯಲ್ಲಿ ಜನ ಪಾಲ್ಗೊಳ್ಳಲು ಅವಕಾಶ ಸಿಗಬೇಕು ಎಂದು ಮನವಿ ಮಾಡಿದ್ದಾರೆ.

MLA Yashpal Suvarna Request To CM For Declare General Holiday On January 22

ಅಲ್ಲದೇ ಅಯೋಧ್ಯೆ ಶ್ರೀ ರಾಮ ಮಂದಿರದ ಲೋಕಾರ್ಪಣೆ ದಿನ ರಾಜ್ಯದ ಎಲ್ಲಾ ಶಾಲಾ-ಕಾಲೇಜು, ಸರಕಾರಿ ಸಂಸ್ಥೆ ಹಾಗೂ ಬ್ಯಾಂಕ್ ಮತ್ತಿತರ ಸಂಸ್ಥೆಗಳಿಗೆ ಸೇರಿದಂತೆ ಸಾರ್ವತ್ರಿಕ ರಜೆ ಘೋಷಣೆ ಮಾಡಬೇಕು ಎಂದು ಶಾಸಕ ಯಶ್ ಪಾಲ್ ಸುವರ್ಣ ಒತ್ತಾಯ ಮಾಡಿದ್ದಾರೆ.

ಶಾಸಕರು ಬರೆದ ಪತ್ರದಲ್ಲೇನಿದೆ..?

'ಕೋಟ್ಯಾಂತರ ಭಾರತೀಯರ ಶತಮಾನಗಳ ಕನಸು ಜನವರಿ 22 ರಂದು ನನಸಾಗುತ್ತಿದೆ. ಹಿಂದೂಗಳ ಶ್ರದ್ಧಾ ಭಕ್ತಿ ಕೇಂದ್ರವಾದ ಅಯೋಧ್ಯೆಯಲ್ಲಿ ಜನವರಿ 22 ರಂದು ಶ್ರೀರಾಮ ದೇವರ ಪ್ರಾಣ ಪ್ರತಿಷ್ಠೆಯೊಂದಿಗೆ ಭವ್ಯ ರಾಮ ಮಂದಿರವು ಉದ್ಘಾಟನೆಗೊಳ್ಳುತ್ತಿದೆ.

MLA Yashpal Suvarna Request To CM For Declare General Holiday On January 22

ಶ್ರೀರಾಮ ಮಂದಿರದ ಭಕ್ತರ ಭಾವನಾತ್ಮಕ ಮತ್ತು ಧಾರ್ಮಿಕತೆಯ ಐತಿಹಾಸಿಕ ಕ್ಷಣವಾಗಿ ಇತಿಹಾಸದ ಪುಟಗಳಲ್ಲಿ ದಾಖಲಾಗಲಿದೆ . ಈ ಪೂಜ್ಯ ದಿನವನ್ನು ದೇಶಾದ್ಯಂತ ದೇವಸ್ಥಾನ, ಮಂದಿರ, ಸಂಘ ಸಂಸ್ಥೆಗಳು ಮತ್ತು ಮನೆ ಮನೆಗಳಲ್ಲಿ ರಾಮ ಜ್ಯೋತಿ ಬೆಳಗಿಸುವುದರೊಂದಿಗೆ ವಿಶೇಷ ಪೂಜೆಗಳು, ಭಜನಾ ಹಾಗೂ ಅನ್ನ ಸಂತರ್ಪಣೆಗಳ ಮೂಲಕ ಅತ್ಯಂತ ಸಂಭ್ರಮ ಸಡಗರದಿಂದ ದೀಪಾವಳಿಯ ಹಬ್ಬದಂತೆ ಆಚರಿಸಲು ಕೋಟ್ಯಾಂತರ ಶ್ರೀರಾಮ ಭಕ್ತರು ಇಚ್ಛಿಸಿರುತ್ತಾರೆ.

ಸದ್ರಿ ರಾಮ ಮಂದಿರದ ದಿನದದಂದು ಶ್ರೀರಾಮ ದೇವರ ಸೇವೆಯಲ್ಲಿ ಪಾಲ್ಗೊಂಡು ಮತ್ತು ದೇವರ ಕೃಪೆಗೆ ಪಾತ್ರರಾಗಲು ಅಯೋಧ್ಯೆ ರಾಮ ಮಂದಿರದ ಉದ್ಘಾಟನಾ ಕಾರ್ಯಕ್ರಮಕ್ಕೆ ದಿನಾಂಕ: 22/01/2024ರ ಶಾಲಾ ಕಾಲೇಜು, ಸರಕಾರಿ ಕಛೇರಿ ಹಾಗೂ ಬ್ಯಾಂಕ್ ಮತ್ತಿತರ ಸಂಸ್ಥೆಗಳಿಗೆ ಸಾರ್ವತ್ರಿಕ ರಜೆ ಘೋಷಿಸುವಂತೆ ಈ ಮೂಲಕ ಕೋರುತ್ತೇನೆ' ಎಂದು ಶಾಸಕರು ಪತ್ರದಲ್ಲಿ ಮನವಿ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+