ಕರ್ನಾಟಕದಲ್ಲಿ ಮತ್ತೊಂದು ವಿಮಾನ ನಿಲ್ದಾಣ: ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ

ಉಡುಪಿ, ಏಪ್ರಿಲ್ 21: ಕರ್ನಾಟಕದಲ್ಲಿ ಬೆಂಗಳೂರು 2ನೇ ವಿಮಾನ ನಿಲ್ದಾಣ ನಿರ್ಮಾಣ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿಯೇ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿಮಾನ ನಿಲ್ದಾಣದ ಕುರಿತು ಚರ್ಚೆಗಳು ಪ್ರಾರಂಭವಾಗಿದೆ. ಈಗಾಗಲೇ ಶಿವಮೊಗ್ಗ ನಗರದ ಹೊರವಲಯದಲ್ಲಿ ವಿಮಾನ ನಿಲ್ದಾಣವಿದ್ದು, ಬೆಂಗಳೂರು, ಹೈದರಾಬಾದ್, ಗೋವಾ, ತಿರುಪತಿಗೆ ವಿಮಾನ ಸೇವೆ ಇದೆ.

ಉಡುಪಿ ಜಿಲ್ಲೆಯಲ್ಲಿರುವ ಬೈಂದೂರು ಶಿವಮೊಗ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುತ್ತದೆ. ಬೈಂದೂರಿನಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಕುರಿತು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಶಿವಮೊಗ್ಗ ಸಂಸದ ಬಿ. ವೈ. ರಾಘವೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ ಮಾಡಿದ್ದಾರೆ.

Mookambika Airport At Byndoor Memorandum For CM Siddaramaiah

ಕೇಂದ್ರ ನಾಗರಿಕ ವಿಮಾನಯಾನ ಸಚಿವ ಕಿಂಜರಾಪು ರಾಮಮೋಹನ್ ನಾಯ್ಡು ಅವರಿಗೆ ಈಗಾಗಲೇ ಮೂಕಾಂಬಿಕಾ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಸಂಸದರು ಮನವಿ ಸಲ್ಲಿಕೆ ಮಾಡಿದ್ದಾರೆ. ವಿಮಾನ ನಿಲ್ದಾಣದ ಜಮೀನು, ವಿಮಾನ ನಿಲ್ದಾಣ ನಿರ್ಮಾಣದ ಕುರಿತು ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಬೇಕು ಎಂದು ಬಿ. ವೈ. ರಾಘವೇಂದ್ರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಏಕೆ ಬೇಕು ವಿಮಾನ ನಿಲ್ದಾಣ?; ಉಡುಪಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಒಂದಾಗಿದೆ. ಬೈಂದೂರು ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಒಳಪಡುತ್ತದೆ. ಬೈಂದೂರಿನಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯವಿದೆ. ಕರ್ನಾಟಕ ಮಾತ್ರವಲ್ಲ ಅಕ್ಕಪಕ್ಕದ ರಾಜ್ಯಗಳ ಸಾವಿರಾರು ಭಕ್ತರು ಈ ದೇವಾಲಯಕ್ಕೆ ಆಗಮಿಸುತ್ತಾರೆ.

ದಕ್ಷಿಣ ಭಾರತದ ಪ್ರಸಿದ್ಧ ಮತ್ತು ರಾಜ್ಯದ ಶ್ರೀಮಂತ ದೇವಾಲಯಗಳ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ ಮೂಕಾಂಬಿಕಾ ದೇವಾಲಯವಿದೆ. ಆದ್ದರಿಂದ ಬೈಂದೂರಿನಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಸಂಸದ ಬಿ. ವೈ. ರಾಘವೇಂದ್ರ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮನವಿ ಸಲ್ಲಿಕೆ ಮಾಡಿದ್ದಾರೆ.

ಕೇಂದ್ರ ಸಚಿವರು ಕರ್ನಾಟಕ ರಾಜ್ಯ ಸರ್ಕಾರ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಅಗತ್ಯ ಜಮೀನು ನೀಡುವ ಕುರಿತು ಭರವಸೆ ಕೊಟ್ಟು, ಪ್ರಸ್ತಾವನೆ ಸಲ್ಲಿಕೆ ಮಾಡಿದರೆ ಬೈಂದೂರು ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಚಿಂತನೆ ನಡೆಸುತ್ತೇವೆ ಎಂದು ಸಂಸದರಿಗೆ ಭರವಸೆಯನ್ನು ಕೊಟ್ಟಿದ್ದರು.

ಈ ಹಿನ್ನಲೆಯಲ್ಲಿ ಬಿ. ವೈ. ರಾಘವೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಸಲ್ಲಿಕೆ ಮಾಡಿದ್ದಾರೆ. ಒತ್ತಿನೆಣೆಯಲ್ಲಿರುವ 500 ಎಕರೆಗೂ ಅಧಿಕ ಅರಣ್ಯ ಇಲಾಖೆಯ ವಿಸ್ತರಣಾ ಬ್ಲಾಕ್‌ನ ಸ್ಥಳ ಲಭ್ಯವಿದೆ. ಕೆಎಸ್‌ಐಐಡಿಸಿ ವತಿಯಿಂದ ಸಮೀಕ್ಷೆ ನಡೆಸಿ, ಉಡುಪಿ ಜಿಲ್ಲಾಧಿಕಾರಿಗಳಿಂದ ದಾಖಲೆಗಳನ್ನು ಪಡೆಯಲಾಗಿದೆ.

ರಾಜ್ಯ ಸರ್ಕಾರ ಆದಷ್ಟು ಬೇಗ ಬೈಂದೂರು ವಿಮಾನ ನಿಲ್ದಾಣಕ್ಕೆ ಜಮೀನು ಮಂಜೂರು ಮಾಡಿ, ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ಅಗತ್ಯ ಪ್ರಸ್ತಾವನೆಯನ್ನು ಸಲ್ಲಿಸಬೇಕು ಎಂದು ಬಿ. ವೈ. ರಾಘವೇಂದ್ರ ಮನವಿ ಸಲ್ಲಿಕೆ ಮಾಡಿದ್ದಾರೆ.

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ಮೂಲ ಸೌಲಭ್ಯವನ್ನು ಕಲ್ಪಿಸಲು 'ಕೊಲ್ಲೂರು ಮೂಕಾಂಬಿಕಾ ಕಾರಿಡಾರ್' ಯೋಜನೆ ತಯಾರು ಮಾಡಲಾಗಿದೆ. ಇದರಲ್ಲಿ ಬೈಂದೂರು ವಿಮಾನ ನಿಲ್ದಾಣ ಸೇರಿದಂತೆ ವಿವಿಧ ಯೋಜನೆಗಳು ಸೇರಿವೆ.

2024ರ ಆಗಸ್ಟ್‌ನಲ್ಲಿ ಬಿ. ವೈ. ರಾಘವೇಂದ್ರ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್‌ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್, ಕೇಂದ್ರ ವಿಮಾನಯಾನ ಸಚಿವ ಕಿಂಜರಾಪು ರಾಮ ಮೋಹನ ನಾಯ್ಡು ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಆಗ ಬೈಂದೂರಿನಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಪ್ರಸ್ತಾವನೆಯನ್ನು ಸಲ್ಲಿಸಿದ್ದರು.

ಉಭಯ ಕೇಂದ್ರ ಸಚಿವರು ಸಹ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣದ ಬಗ್ಗೆ ಸಕರಾತ್ಮಕವಾಗಿ ಸ್ಪಂದಿಸಿದ್ದರು. ಆದಷ್ಟು ಶೀಘ್ರವಾಗಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಈ ಕಾರಿಡಾರ್‌ ಅಡಿ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಮನವಿ ಸಲ್ಲಿಸಲಾಗಿತ್ತು. ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ವಿವಿಧ ರಾಜ್ಯಗಳಿಂದ ಹಾಗೂ ಹೊರದೇಶಗಳಿಂದ ಪ್ರತಿದಿನ 10,000ಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡುತ್ತಾರೆ.

ಬೈಂದೂರು ಮೂಕಾಂಬಿಕಾ ರೋಡ್ ರೈಲ್ವೆ ನಿಲ್ದಾಣ ಹಾಗೂ ಬಸ್ ನಿಲ್ದಾಣದ ಅತೀ ಸಮೀಪವಿರುವ ಒತ್ತಿನೆಣೆಯಲ್ಲಿ ಸುಮಾರು 500 ಎಕರೆಗೂ ಅಧಿಕ ಸ್ಥಳ ಲಭ್ಯವಿದೆ. ಅಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಭಕ್ತಾದಿಗಳಿಗೆ ಅನುಕೂಲವಾಗಲಿದೆ. ಆದ್ದರಿಂದ ಮೂಕಾಂಬಿಕಾ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು.

ಉಳಿದಂತೆ ಮೂಕಾಂಬಿಕಾ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಸೌಪರ್ಣಿಕಾ ನದಿ ಸ್ವಚ್ಛತೆ, ಶಂಕರಾಚಾರ್ಯ ಥೀಮ್ ಪಾರ್ಕ್, ಮಲ್ಟಿಲೆವೆಲ್ ಪಾರ್ಕಿಂಗ್, ವಿಮಾನ, ರೈಲ್ವೆ, ಬಸ್ ಹಾಗೂ ಬಂದರು ಸಂಪರ್ಕ, ಕೇಬಲ್ ಕಾರ್, ಬೈಂದೂರಿನ ಇತಿಹಾಸ ಪ್ರಸಿದ್ಧ ದೇವಾಲಯಗಳಿಗೆ ರಸ್ತೆ ಸಂಪರ್ಕ, ಕಡಲ ತೀರ ಹಾಗೂ ಜಲಪಾತಗಳ ಅಭಿವೃದ್ಧಿ, ಪಂಚಗಂಗಾವಳಿ ನದಿ ಅಭಿವೃದ್ಧಿ ಸಹಿತ ಹಲವು ಯೋಜನೆಗಳ ಕುರಿತು ಮನವಿ ಸಲ್ಲಿಕೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+