50 ಕ್ಕೂ ಹೆಚ್ಚು ಬಿಜೆಪಿ, ಜೆಡಿಎಸ್ ಮುಖಂಡರು ಕಾಂಗ್ರೆಸ್ ಗೆ
Recommended Video

ಉಡುಪಿ, ಏಪ್ರಿಲ್ 13 : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಚ್ಚಿಲ ಭಾಗದ ಬಿಜೆಪಿ ಮತ್ತು ಜೆಡಿಎಸ್ ನ 50 ಕ್ಕೂ ಹೆಚ್ಚು ಜಿಲ್ಲಾ ಮತ್ತು ರಾಜ್ಯ ಮುಖಂಡರು ಗುರುವಾರ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ಕಾಪು ರಾಜೀವ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ವಿನಯ್ ಕುಮಾರ್ ಸೊರಕೆ, ಕಾಂಗ್ರೆಸ್ ಸೇರ್ಪಡೆ ಗೊಂಡ ಬಿಜೆಪಿ ಮತ್ತು ಜೆಡಿಎಸ್ ಮುಖಂಡರನ್ನು ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು.
ಬಿಜೆಪಿ ಮುಖಂಡರಾದ ದುಮಣಿ ಭಟ್, ನಾರಾಯಣ ಬೆಳ್ಚಡ, ಹಾಗೂ ಜೆಡಿಎಸ್ ಮುಖಂಡರಾದ ಅಬ್ದುಲ್ ಅತೀಫ್ ದಾವೂದ್ ನೇತೃತ್ವದಲ್ಲಿ ಶಾಬಾನ್ ಉಚ್ಛಿಲ, ಗುರುಪ್ರಸಾದ್ ಭಟ್ ಉಚ್ಛಿಲ, ಅಬ್ದುಲ್ ಹಮೀದ್ ಸಹಿತ ಅನೇಕ ಮುಖಂಡರು ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.

ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಮುಖಂಡರ ಜೊತೆ ಮಾತನಾಡಿದ ಶಾಸಕ ವಿನಯ್ ಕುಮಾರ್ ಸೊರಕೆ, ಜಾತ್ಯಾತೀತ ನಿಲುವು ಹೊಂದಿದ ಕಾಂಗ್ರೆಸ್ ನಲ್ಲಿ ಮುಂದಿನ ದಿನಗಳಲ್ಲಿ ಎಲ್ಲರಿಗೂ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದರು. ಮತ್ತಷ್ಟು ಬಿಜೆಪಿ ಕಾರ್ಯಕರ್ತರು ಪಕ್ಷಾಂತರ ಮಾಡುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು.












Click it and Unblock the Notifications