ಉಡುಪಿ ವಿಧಾನಸಭಾ ಕ್ಷೇತ್ರ: 4 ವರ್ಷಗಳಲ್ಲಿ ಸೇತುವೆಗೆ 80 ಕೋಟಿ ವೆಚ್ಚ

ಉಡುಪಿ, ಆಗಸ್ಟ್ 17: "ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 4 ವರ್ಷಗಳ ಅವಧಿಯಲ್ಲಿ ಸೇತುವೆಗಳ ನಿರ್ಮಾಣಕ್ಕಾಗಿ 80 ಕೋಟಿಗೂ ಹೆಚ್ಚು ವೆಚ್ಚ ಮಾಡಲಾಗಿದೆ," ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.

ಕೊಡಂಕೂರುನಲ್ಲಿ ಗುರುವಾರ 50 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾದ ಸೇತುವೆ ಕಾಮಗಾರಿ ಉದ್ಘಾಟಿಸಿ ಅವರು ಮಾತನಾಡಿದರು.

More than 80 crores has spent for the construction of bridges - Pramod Madhwaraj

ಚುನಾವಣಾ ಪೂರ್ವದಲ್ಲಿ ನೀಡಿದ ಭರವಸೆಗಳಂತೆ ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಜನರ ಅನುಕೂಲಕ್ಕಾಗಿ ಹಲವು ಸೇತುವೆಗಳ ನಿರ್ಮಾಣ ಕಾಮಗಾರಿ ಕೈಗೊಂಡಿರುವುದಾಗಿ ತಿಳಿಸಿದರು. 13 ಕೋಟಿ ರೂಪಾಯಿ ವೆಚ್ಚದಲ್ಲಿ ಮೀಯಾರು- ಆವರ್ಸೆ ಸೇತುವೆ ಕಾಮಗಾರಿಗೆ ಮಂಜೂರಾತಿ ದೊರೆತಿದ್ದು , ಉಡುಪಿಯ ಕಲ್ಸಂಕ ಸೇತುವೆಯನ್ನು 1.25 ಕೋಟಿ ವೆಚ್ಚದಲ್ಲಿ ಅಗಲೀಕರಣ ಮಾಡಲಾಗುತ್ತಿದೆ ಎಂದು ಹೇಳಿದರು.

More than 80 crores has spent for the construction of bridges - Pramod Madhwaraj

ಕಾರ್ಯಕ್ರಮದಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ಉಪಾಧ್ಯಕ್ಷೆ ಸಂಧ್ಯಾ, ನಗರಸಭೆ ಸದಸ್ಯರಾದ ಜಾನಕಿ ಶೆಟ್ಟಿಗಾರ್, ಯುವರಾಜ್, ಶಾಂತಾರಾಮ್ ಸಲ್ವಾಂಕರ್, ಗಣೇಶ್ ನೇರ್ಗಿ, ಜನಾರ್ಧನ್ ಭಂಡಾರ್ಕರ್ , ಪೌರಾಯುಕ್ತ ಮಂಜುನಾಥಯ್ಯ, ನಗರಸಭೆಯ ಇಂಜಿನಿಯರ್ ಗಣೇಶ್ , ಸೇತುವೆಗೆ ಜಾಗ ನೀಡಿದ ಗೋಪಾಲ ಶೆಟ್ಟಿಗಾರ್ ಮತ್ತಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+