ಮಸೀದಿ ಜಾಗ ವಾಪಸ್ ಪಡೆದ ಸರ್ಕಾರ: ಮುಸ್ಲಿಂ ಸಂಘಟನೆಗಳಿಂದ ತೀವ್ರ ವಿರೋಧ
ಉಡುಪಿ, ಜೂನ್ 28: ಉಡುಪಿ ಸಮೀಪದ ಕೊಡವೂರು ಎಂಬಲ್ಲಿ ಕಲ್ಮತ್ ಮಸೀದಿಗೆ ಈ ಹಿಂದೆ ಮಂಜೂರಾಗಿದ್ದ ಜಾಗವನ್ನು ಬಿಜೆಪಿ ಸರ್ಕಾರ ವಾಪಸ್ ಪಡೆದುಕೊಂಡಿದೆ. ಸ್ಥಳೀಯರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಜಾಗ ವಾಪಸ್ ಪಡೆಯಲಾಗಿದೆ ಎಂದು ಉಡುಪಿ ಶಾಸಕರು ಹೇಳುತ್ತಿದ್ದಾರೆ. ಸರಕಾರದ ಈ ನಿರ್ಧಾರದ ಬಗ್ಗೆ ಜಿಲ್ಲೆಯ ವಿವಿಧ ಮುಸ್ಲಿಂ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಸೋಮವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿದ್ದವು. "ಬಿಜೆಪಿ ಸರ್ಕಾರ ಒಂದು ಸಮುದಾಯವನ್ನು ಮೆಚ್ಚಿಸಲು ಮಸೀದಿ ಜಾಗವನ್ನು ವಾಪಸ್ ಪಡೆದಿದೆ. ಹಲವು ವರ್ಷಗಳಿಂದ ಈ ಸ್ಥಳದಲ್ಲಿ ಮಸೀದಿ ಕಾರ್ಯಾಚರಣೆ ಮಾಡುತ್ತಿದ್ದು, ಸರಕಾರ ಹಿಂಪಡೆದದ್ದು ಖಂಡನೀಯ. ಇದರ ವಿರುದ್ಧ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು,'' ಎಂದು ಪ್ರತಿಭಟನಾನಿರತ ಮುಸ್ಲಿಂ ಸಂಘಟನೆಗಳ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೊಂದೆಡೆ ಜಿಲ್ಲಾ ಮುಸ್ಲಿಂ ಒಕ್ಕೂಟ ಸುದ್ದಿಗೋಷ್ಠಿ ನಡೆಸಿ, "ಸರಕಾರದ ಕ್ರಮವನ್ನು ಖಂಡಿಸಿದೆ. ಉಡುಪಿ ತಾಲೂಕು ಕೊಡವೂರು ಗ್ರಾಮದ ಕಲ್ಮತ್ ಮಸೀದಿಯ ಸ್ಥಿರಾಸ್ತಿಯ ಪಹಣಿ ಪತ್ರದಲ್ಲಿ ಮಸೀದಿಯ ಹೆಸರು ಕಾನೂನು ಬದ್ಧವಾಗಿ ನೋಂದಣಿಗೊಂಡಿದೆ. ಅದನ್ನು ಕಾನೂನುಬಾಹಿರವಾಗಿ ಕಂದಾಯ ಸಚಿವ ಆರ್.ಅಶೋಕ್ ತೆರವುಗೊಳಿಸಿ ಆದೇಶ ಹೊರಡಿಸಿರುವುದು ಖಂಡನೀಯ,'' ಎಂದು ಮುಸ್ಲಿಂ ಒಕ್ಕೂಟ ಹೇಳಿದೆ.

ಸೋಮವಾರ ಉಡುಪಿಯ ಪ್ರೆಸ್‌ಕ್ಲಬ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಮುಸ್ಲಿಂ ಒಕ್ಕೂಟದ ಮುಖಂಡರು, ಜಿಲ್ಲಾಧಿಕಾರಿಗಳ ಪತ್ರದ ಆಧಾರದ ಮೇಲೆ ಯಾವುದೇ ರೀತಿಯ ನಿಯಮಗಳನ್ನು ಪಾಲಿಸದೆ ಏಕಾಏಕಿಯಾಗಿ ಕಂದಾಯ ಸಚಿವ ಆರ್. ಅಶೋಕ್ ಆದೇಶ ಹೊರಡಿಸಿದ್ದಾರೆ. ಸದರಿ ಮಸೀದಿಯ ಸ್ಥಿರಾಸ್ತಿಯ ಪಹಣಿ ಪತ್ರವನ್ನು ಯಾವುದೇ ಕಾನೂನು ಪ್ರಕ್ರಿಯೆ ಪೂರೈಸದೆ, ಮಸೀದಿಯ ಹೆಸರನ್ನು ತೆಗೆದು 'ಸರಕಾರ' ಎಂದು ನಮೂದಿಸಲಾಗಿದೆ,'' ಎಂದು ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.

"ವಕ್ಫ್ ಆಸ್ತಿಯನ್ನು ನೆಲದ ಕಾನೂನಿನ ಪ್ರಕಾರ ರಕ್ಷಿಸಬೇಕಾದ ಜಿಲ್ಲಾಧಿಕಾರಿ, ಶಾಸಕರು ಒಳಗೊಂಡಂತೆ ಉಡುಪಿ ಜಿಲ್ಲಾಡಳಿತವು ಪಕ್ಷಪಾತ ಪೂರ್ಣವಾಗಿ ವರ್ತಿಸಿ ಕಲ್ಮತ್ ಮಸೀದಿಯ ನ್ಯಾಯಬದ್ಧ ಹಕ್ಕಿಗೆ ವಿರುದ್ಧವಾದ ಪ್ರಕ್ರಿಯೆ ನಡೆಸಿದೆ. ಈ ಮೂಲಕ ಕಂದಾಯ ಸಚಿವರ ಮೇಲೆ ಪ್ರಭಾವ ಬೀರಿ ಅನ್ಯಾಯ ಪೂರ್ಣ ನಿರ್ಣಯ ಕೈಗೊಂಡಿದೆ.''

"ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಅನ್ಯಾಯ ಧೋರಣೆಯನ್ನು ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡಿಸುತ್ತದೆ ಮತ್ತು ಈ ಹಿಂದಿನಂತೆ ನ್ಯಾಯಪೂರ್ಣವಾಗಿ ಮಸೀದಿ ಮತ್ತು ಮಸೀದಿಯ ಶ್ರದ್ಧಾಳುಗಳ ನ್ಯಾಯಪೂರ್ಣ ಹಕ್ಕಿನ ಪುನರ್ ಸ್ಥಾಪನೆಗೆ ಒತ್ತಾಯಿಸುತ್ತದೆ,'' ಎಂದು ಮುಸ್ಲಿಂ ಮುಖಂಡರು ಆಗ್ರಹಿಸಿದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications