ಪೌರತ್ವ ಮಸೂದೆ ವಿರೋಧಿಸಿ ಉಡುಪಿಯಲ್ಲಿ ಮುಸ್ಲಿಮರ ಪ್ರತಿಭಟನೆ
ಉಡುಪಿ, ಡಿಸೆಂಬರ್ 13: ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಉಡುಪಿಯ ಹಲವೆಡೆ ಪ್ರತಿಭಟನೆ ನಡೆಯಿತು. ಶುಕ್ರವಾರದ ಸಾಮೂಹಿಕ ನಮಾಜಿನ ಬಳಿಕ ಪ್ರತಿಭಟನೆ ನಡೆಸಿದ ಮುಸ್ಲಿಮರು ಮಸೂದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಉಡುಪಿ ಜಾಮಿಯಾ ಮಸೀದಿ, ದೊಡ್ಡಣಗುಡ್ಡೆ, ನೇಜಾರು ಮತ್ತಿತರೆಡೆ ನಮಾಜಿನ ಬಳಿಕ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ಮಸೂದೆ ದೇಶದ ಹಿತಾಸಕ್ತಿ ಮತ್ತು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿದೆ. ದೇಶದ ಜಾತ್ಯತೀತ ಹಂದರವನ್ನು ನಾಶ ಮಾಡುವ ಮಸೂದೆಯನ್ನು ಯಾವುದೇ ಮುಸ್ಲಿಮರೂ ಬೆಂಬಲಿಸುವುದಿಲ್ಲ. ಪ್ರಜೆಗಳನ್ನು ಧರ್ಮ, ನಂಬಿಕೆಗಳ ನೆಲೆಯಲ್ಲಿ ವಿಭಜಿಸುವ ಮಸೂದೆಗೆ ನಮ್ಮ ವಿರೋಧ ಇದೆ. ಇಂದು ಸಾಂಕೇತಿಕ ಪ್ರತಿಭಟನೆಯಷ್ಟೇ ಮಾಡುತ್ತಿದ್ದೇವೆ. ಈ ವಿವಾದಾತ್ಮಕ ಮಸೂದೆ ವಾಪಸ್ ಪಡೆಯದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ಕೈಗೊಳ್ಳುತ್ತೇವೆ" ಎಂಬ ಎಚ್ಚರಿಕೆಯನ್ನು ನೀಡಿದರು.












Click it and Unblock the Notifications