ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸುಬ್ರಹ್ಮಣ್ಯ ವಿವಾದ; ಪೇಜಾವರ ಶ್ರೀ ಸಂಧಾನ ಸಭೆ ಮುಂದೂಡಿಕೆ

|
Google Oneindia Kannada News

ಉಡುಪಿ, ಜೂನ್ 11: ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ವಿವಾದದ ಕುರಿತು ಸಂಧಾನ ಸೂತ್ರ ಸಿದ್ಧವಾಗಿದೆ. ಉಡುಪಿ ಪೇಜಾವರ ಶ್ರೀಗಳ ನೇತೃತ್ವದಲ್ಲಿ ಸಂಧಾನ ಸೂತ್ರವನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಪೇಜಾವರ ಶ್ರೀಗಳು, ಶಾಂತಿ ಸಂಧಾನ ಪ್ರಗತಿಯಲಿದ್ದು ಸಂಧಾನ ಪ್ರಕ್ರಿಯೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.

 ಕುಕ್ಕೆ ಸುಬ್ರಹ್ಮಣ್ಯ ವಿವಾದ; ಪೇಜಾವರ ಶ್ರೀ ಸಂಧಾನ ವಿಫಲ ಕುಕ್ಕೆ ಸುಬ್ರಹ್ಮಣ್ಯ ವಿವಾದ; ಪೇಜಾವರ ಶ್ರೀ ಸಂಧಾನ ವಿಫಲ

ಸುಬ್ರಹ್ಮಣ್ಯ ವಿವಾದದ ಕುರಿತು ಶಾಂತಿ ಸಂಧಾನ ಪ್ರಯತ್ನ ಪ್ರಗತಿಯಲ್ಲಿದೆ. ಸಂಪುಟ ನರಸಿಂಹ ಮಠ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಎರಡೂ ಕಡೆಯ ಅಭಿಪ್ರಾಯ ಸಂಗ್ರಹಿಸಲಾಗಿದೆ. ಇಬ್ಬರಿಗೂ ಸಮ್ಮತವಾಗಬಹುದಾದ ಸಂಧಾನ ಸೂತ್ರವನ್ನು ಸಿದ್ಧಪಡಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇನ್ನೊಂದು ಸುತ್ತಿನ ಮಾತುಕತೆಯ ನಂತರ ಸಂಧಾನಕಾರ್ಯ ಪೂರ್ಣವಾಗಲಿದೆ ಎಂದು ತಿಳಿಸಿದ್ದಾರೆ.

Negotiation talk on Subramanya controversy postponed

ದೇವಸ್ಥಾನ ಸಮಿತಿ ಅಧ್ಯಕ್ಷರ ವೈಯಕ್ತಿಕ ಅನಾನುಕೂಲತೆಯಿಂದ ಜೂನ್ 10ರಂದು ನಿಗದಿಯಾಗಿದ್ದ ಸಭೆ ನಡೆದಿಲ್ಲ. ಈ ಹಿನ್ನೆಲೆಯಲ್ಲಿ ಮಾತುಕತೆಯನ್ನು ಮುಂದೂಡಲಾಗಿದೆ. ನನಗೆ ಪೂರ್ವ ನಿಯೋಜಿತ ಕಾರ್ಯಕ್ರಮಗಳಿವೆ. ಜೂನ್ 23ರ ನಂತರ ಸಂಧಾನ ಮಾತುಕತೆ ನಡೆಯಲಿದೆ ಎಂದು ಪೇಜಾವರ ಶ್ರೀ ತಿಳಿಸಿದ್ದಾರೆ.

English summary
Negotiation talk on Subramanya controversy postponed, Pejawara Shree stated that, because of some reason, negotiation talk on Subranamya controversy is postponed,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X