ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ ಬೀಚ್‌ಗಳಿಗೆ ಪ್ರವಾಸಿಗರ ಲಗ್ಗೆ: ಸಂಭ್ರಮಾಚರಣೆಗೆ ಅವಕಾಶವಿಲ್ಲ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಡಿಸೆಂಬರ್ 28; ಹೊಸ ವರ್ಷದ ಹೊಸ್ತಿಲಲ್ಲಿ ಜನರು ಕರಾವಳಿ ಜಿಲ್ಲೆಗಳತ್ತ ಆಗಮಿಸುತ್ತಿದ್ದಾರೆ. ಉಡುಪಿಯ ಪ್ರವಾಸಿ ಕೇಂದ್ರಗಳಲ್ಲಿ ಪ್ರವಾಸಿಗರು ತುಂಬಿ ತುಳುಕುತ್ತಿದ್ದಾರೆ. ಮಲ್ಪೆ ಸಮುದ್ರ ತೀರಕ್ಕೆ ಈಗಾಗಲೇ ಸಾವಿರಾರು ಪ್ರವಾಸಿಗರು ಆಗಮಿಸಿದ್ದಾರೆ.

ಬೆಂಗಳೂರು ಸೇರಿದಂತೆ ಹೊರ ರಾಜ್ಯ, ಜಿಲ್ಲೆಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಿಲ್ಲೆಯ ಹೋಂ ಸ್ಟೇ, ಹೋಟೆಲ್‌ಗಳಲ್ಲಿ ಉಳಿದುಕೊಳ್ಳುತ್ತಿದ್ದಾರೆ. ಕಾಪು ಬೀಚ್, ಮಲ್ಪೆ ಬೀಚ್, ತ್ರಾಸಿ ಬೀಚ್ ಸೇರಿದಂತೆ ಹಲವು ಕಡೆ ಹೊಸ ವರ್ಷವನ್ನು ಸ್ವಾಗತಿಸಲು ಜನರು ಸಜ್ಜಾಗುತ್ತಿದ್ದಾರೆ.

ಕ್ರಿಸ್‌ಮಸ್ ಹಾಗೂ ಹೊಸ ವರ್ಷಕ್ಕೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ ಕ್ರಿಸ್‌ಮಸ್ ಹಾಗೂ ಹೊಸ ವರ್ಷಕ್ಕೆ ಮಾರ್ಗಸೂಚಿ ಪ್ರಕಟಿಸಿದ ಕರ್ನಾಟಕ ಸರ್ಕಾರ

ಹೊಸ ವರ್ಷಕ್ಕೆ ಚಿಯರ್ಸ್ ಹೇಳಲು ರೆಸಾರ್ಟ್‌ಗಳಲ್ಲಿ ಮುಂಚಿತವಾಗಿ ಪ್ರವಾಸಿಗರು ರೂಂ ಬುಕ್ ಮಾಡುತ್ತಿದ್ದಾರೆ. ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಉಡುಪಿ ಜಿಲ್ಲಾಡಳಿತ ಸಹ ಹಲವಾರು ಸೂಚನೆಗಳನ್ನು ನೀಡಿದೆ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ.

ಉಡುಪಿ; ಕ್ರಿಸ್ಮಸ್ ಸಂಭ್ರಮಕ್ಕೆ ತಣ್ಣೀರೆರಚಿದ ಕೋವಿಡ್ ಉಡುಪಿ; ಕ್ರಿಸ್ಮಸ್ ಸಂಭ್ರಮಕ್ಕೆ ತಣ್ಣೀರೆರಚಿದ ಕೋವಿಡ್

New Year Celebration Not Allowed Says Udupi DC

ಸಂಭ್ರಮಾಚರಣೆಗೆ ಅವಕಾಶ ಇಲ್ಲ: "ಹೊಸ ವರ್ಷದ ಸಂಭ್ರಮಾಚರಣೆಯ ಹಿನ್ನಲೆಯಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್‌ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆ ಮಾಡಲು ಅವಕಾಶವಿಲ್ಲ" ಎಂದು ಉಡುಪಿ ಜಿಲ್ಲಾಧಿಕಾರಿ ಡಿ. ಸಿ. ಜಗದೀಶ್ ಹೇಳಿದ್ದಾರೆ.

ಉಡುಪಿ: ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಅನಮಯ ಉಡುಪಿ: ಕೌನ್ ಬನೇಗಾ ಕರೋಡ್‌ಪತಿಯಲ್ಲಿ 50 ಲಕ್ಷ ಗೆದ್ದ ಅನಮಯ

Recommended Video

Virat Kohli ಈ ದಶಕದ ಶ್ರೇಷ್ಠ ಕ್ರಿಕೆಟಿಗ | Oneindia Kannada

"ಸರ್ಕಾರದ ನಿಯಮಾವಳಿಗಳನ್ನು ಪಾಲಿಸಿ. ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಿ" ಎಂದು ಜಿ. ಜಗದೀಶ್ ಮನವಿ ಮಾಡಿದ್ದಾರೆ.

English summary
Udupi district administration said that not allowed for new year celebration in public. Thousands of tourists visited Udupi in the end of the year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X