ಭಾಸ್ಕರ ಶೆಟ್ಟಿ ಹತ್ಯೆ : ಜ್ಯೋತಿಷಿ ನಿರಂಜನ್ ಭಟ್ ಆತ್ಮಹತ್ಯೆಗೆ ಯತ್ನ

Posted By:
Subscribe to Oneindia Kannada

ಉಡುಪಿ, ಆಗಸ್ಟ್ 09 : ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ 3 ನೇ ಆರೋಪಿ ಜ್ಯೋತಿಷಿ ನಿರಂಜನ್ ಭಟ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಪೊಲೀಸರ ವಶದಲ್ಲಿರುವಾಗ ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಮಣಿಪಾಲ ಪೊಲೀಸರ ವಶದಲ್ಲಿರುವ ನಿರಂಜನ್ ಭಟ್ ವಜ್ರದ ಉಂಗುರ ನುಂಗಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಅವರನ್ನು ಉಡುಪಿಯ ಅಜ್ಜರಕಾಡುವಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.[ಪತಿಯನ್ನು ಯಜ್ಞಕುಂಡದಲ್ಲಿ ಹಾಕಿ ಸುಟ್ಟಳೇ ಪತ್ನಿ]

Niranjan Bhat attempts suicide in Manipal police station

ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕಣದಲ್ಲಿ ಜ್ಯೋತಿಷಿ ನಿರಂಜನ್ ಭಟ್ 3ನೇ ಆರೋಪಿಯಾಗಿದ್ದು, ಸೋಮವಾರ ರಾತ್ರಿ ಮಣಿಪಾಲ ಪೊಲೀಸರು ಭಟ್ಕಳ ಸಮೀಪ ಅವರನ್ನು ಬಂಧಿಸಿದ್ದರು. ಮಣಿಪಾಲ ಠಾಣೆಗೆ ಕರೆತಂದು ಅವರ ವಿಚಾರಣೆ ನಡೆಸಲಾಗುತ್ತಿತ್ತು. [ಭಾಸ್ಕರ್ ಶೆಟ್ಟಿ ಹತ್ಯೆ: ಪೊಲೀಸ್ ವಶದಲ್ಲಿ ಜ್ಯೋತಿಷಿ ನಿರಂಜನ್ ಭಟ್]

ಭಾಸ್ಕರ ಶೆಟ್ಟಿ ಹತ್ಯೆ : ಜುಲೈ 28ರಂದು ನಾಪತ್ತೆಯಾಗಿದ್ದ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆಯಾದ ವಿಚಾರ ಆಗಸ್ಟ್ 6 ರಂದು ಬೆಳಕಿಗೆ ಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಸ್ಕರ ಶೆಟ್ಟಿ ಅವರ ಪತ್ನಿ ರಾಜೇಶ್ವರಿ ಮತ್ತು ಪುತ್ರ ನವನೀತ್‌ನನ್ನು ಬಂಧಿಸಲಾಗಿದೆ.

ಈ ಪ್ರಕರಣದಲ್ಲಿ 3ನೇ ಆರೋಪಿಯಾದ ಜ್ಯೋತಿಷಿ ನಿರಂಜನ್ ಭಟ್ ಅವರನ್ನು ಸೋಮವಾರ ರಾತ್ರಿ ಬಂಧಿಸಲಾಗಿತ್ತು. ಪೊಲೀಸರ ವಶದಲ್ಲಿರುವಾಗಲೇ ಅವರು ಆತ್ಮಹತ್ಯೆಗೆ ಯತ್ನಿಸಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Niranjan Bhat the accused in the murder of businessman Bhaskar Shetty, has attempted suicide in Manipal police station. Niranjan Bhat arrested on August 8th night near Bhatkal.
Please Wait while comments are loading...