ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೊಂದು ಮಹತ್ವದ ನಿರ್ಧಾರ ಘೋಷಿಸಿದ ಉಡುಪಿ ಜಿಲ್ಲಾಧಿಕಾರಿ

|
Google Oneindia Kannada News

ಉಡುಪಿ, ಜೂನ್ 06 : ಪರಿಸರ ಸಂರಕ್ಷಣೆಗಾಗಿ ಗುರುವಾರ ಸರ್ಕಾರಿ ಕಾರು ಬಿಟ್ಟು ಸಮೂಹ ಸಾರಿಗೆ ಬಳಕೆ ಮಾಡುತ್ತಿರುವ ಉಡುಪಿ ಜಿಲ್ಲಾಧಿಕಾರಿಗಳು ಮತ್ತೊಂದು ಮಹತ್ವದ ಘೋಷಣೆ ಮಾಡಿದರು. ಗುರುವಾರವಾದ ಇಂದು ಅವರು ಸಮೂಹ ಸಾರಿಗೆ ಮೂಲಕ ಕಚೇರಿಗೆ ತೆರಳಿದರು.

'ಪರಿಸರ ರಕ್ಷಣೆ ಹಾಗೂ ಜಾಗತಿಕ ಪರಿಸರ ತಾಪಮಾನವನ್ನು ತಗ್ಗಿಸುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳ ಎಸಿಗಳನ್ನು ಆಫ್ ಮಾಡಿ ಕಾರ್ಯ ನಿರ್ವಹಿಸಲು ನಿರ್ಧರಿಸಲಾಗಿದೆ' ಎಂದು ಹೆಪ್ಸಿಬಾ ರಾಣಿ ಕೊರ್ಲಪಾಟಿ ಹೇಳಿದರು.

ಎಸಿ ಕಾರು ಬಿಟ್ಟು ಬಸ್ ಏರಿ ಕಚೇರಿಗೆ ಬಂದ ಉಡುಪಿ ಜಿಲ್ಲಾಧಿಕಾರಿಎಸಿ ಕಾರು ಬಿಟ್ಟು ಬಸ್ ಏರಿ ಕಚೇರಿಗೆ ಬಂದ ಉಡುಪಿ ಜಿಲ್ಲಾಧಿಕಾರಿ

ಗುರುವಾರ ಸಮೂಹ ಸಾರಿಗೆ ಮೂಲಕ ಕಚೇರಿಗೆ ತೆರಳುವಾಗ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. 'ವಿಶ್ವ ಪರಿಸರ ದಿನದ ಅಂಗವಾಗಿ ಈ ವರ್ಷದ ಘೋಷವಾಕ್ಯ, ವಾಯು ಮಾಲಿನ್ಯ ನಿಯಂತ್ರಣ ಎಂಬುದಾಗಿದ್ದು, ಇದನ್ನು ಇದನ್ನು ಜಿಲ್ಲೆಯಲ್ಲಿ ಅನುಷ್ಠಾನಕ್ಕೆ ತರುತ್ತೇವೆ' ಎಂದು ತಿಳಿಸಿದರು.

ಮಂಗಳೂರನ್ನು ಹಸಿರಾಗಿಸುವ ಹಾದಿಯಲ್ಲಿ ಜೀತ್ ಮಿಲನ್‌ಮಂಗಳೂರನ್ನು ಹಸಿರಾಗಿಸುವ ಹಾದಿಯಲ್ಲಿ ಜೀತ್ ಮಿಲನ್‌

'ಜಿಲ್ಲಾಡಳಿತದ ವತಿಯಿಂದ ಪ್ರತಿ ಸೋಮವಾರ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಎಸಿ ಬಳಕೆ ಮಾಡದೇ ಕಾರ್ಯ ನಿರ್ವಹಿಸುವ ಕುರಿತಂತೆ ಎಲ್ಲಾ ಅಧಿಕಾರಿಗಳು ಒಮ್ಮತ ಸೂಚಿಸಿದ್ದಾರೆ. ಇದರಿಂದ ವಿದ್ಯುತ್ ಉಳಿತಾಯದ ಜೊತೆಗೆ ಪರಿಸರದಲ್ಲಿ ತಾಪಮಾನ ಕಡಿಮೆ ಮಾಡಲು ಪ್ರಯತ್ನ ಮಾಡಲಾಗುತ್ತದೆ' ಎಂದರು.

ವಿಶ್ವದ 20 ಮಾಲಿನ್ಯಯುಕ್ತ ನಗರಗಳಲ್ಲಿ 15 ಭಾರತದ್ದುವಿಶ್ವದ 20 ಮಾಲಿನ್ಯಯುಕ್ತ ನಗರಗಳಲ್ಲಿ 15 ಭಾರತದ್ದು

ಸಮೂಹ ಸಾರಿಗೆ ಬಳಕೆ

ಸಮೂಹ ಸಾರಿಗೆ ಬಳಕೆ

ಉಡುಪಿ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಉದ್ದೇಶದಿಂದ ಈಗಾಗಲೇ ಪ್ರತಿ ಗುರುವಾರ ಜಿಲ್ಲಾಧಿಕಾರಿಗಳು ಕಚೇರಿಗೆ ಸಮೂಹ ಸಾರಿಗೆಯಲ್ಲಿ ಆಗಮಿಸುತ್ತಾರೆ. ವಿವಿಧ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಗುರುವಾರವಾದ ಇಂದು ಸಹ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಸಮೂಹ ಸಾರಿಗೆಯಲ್ಲಿ ಆಗಮಿಸಿದರು.

ಸಮೂಹ ಸಾರಿಗೆ ವ್ಯವಸ್ಥೆ ಮಾಡಿ

ಸಮೂಹ ಸಾರಿಗೆ ವ್ಯವಸ್ಥೆ ಮಾಡಿ

'ಉಡುಪಿ ಜಿಲ್ಲೆಯ ವಿವಿಧ ಖಾಸಗಿ ಸಂಸ್ಥೆಗಳು, ಬ್ಯಾಂಕ್‌ಗಳು, ಕಾರ್ಪೋರೇಟ್ ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ವಾರದಲ್ಲಿ ಒಂದು ದಿನ ಸಮೂಹ ಸಾರಿಗೆ ವ್ಯವಸ್ಥೆ ಕಲ್ಪಿಸುವುದರ ಮೂಲಕ ಪರಿಸರ ಸಂರಕ್ಷಣೆಗೆ ತಮ್ಮದೇ ಆದ ಕೊಡುಗೆ ನೀಡಬಹುದು' ಎಂದು ಹೆಪ್ಸಿಬಾ ರಾಣಿ ಕೊರ್ಲಪಾಟಿ ಸಲಹೆ ನೀಡಿದರು.

ಕರ್ತವ್ಯಕ್ಕೆ ಅಡ್ಡಿಯಾಗಬಾರದು

ಕರ್ತವ್ಯಕ್ಕೆ ಅಡ್ಡಿಯಾಗಬಾರದು

'ಪರಿಸರ ಸಂರಕ್ಷಣೆ ಉದ್ದೇಶದಿಂದ ಉಡುಪಿ ಜಿಲ್ಲಾಡಳಿತ ಕೈಗೊಂಡಿರುವ ವಿವಿಧ ರೀತಿಯ ಕ್ರಮಗಳನ್ನು ದಿನನಿತ್ಯದ ಸರಕಾರಿ ಕರ್ತವ್ಯಕ್ಕೆ ಯಾವುದೇ ಅಡಚಣೆಯಾಗದಂತೆ ಅನುಷ್ಠಾನಗೊಳಿಸಲಾಗುತ್ತಿದೆ' ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಬಸ್‌ನಲ್ಲಿ ಬಂದ ಅಧಿಕಾರಿಗಳು

ಬಸ್‌ನಲ್ಲಿ ಬಂದ ಅಧಿಕಾರಿಗಳು

ಗುರುವಾರ ಉಡುಪಿ ಅಪರ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಚಂದ್ರಶೇಖರ್ ನಾಯಕ್ ಹಾಗೂ ಇತರ ಜಿಲ್ಲಾಧಿಕಾರಿ ಕಚೇರಿಯ ಸಿಬ್ಬಂದಿಗಳು ಬಸ್‌ ಮೂಲಕ ಕರ್ತವ್ಯಕ್ಕೆ ಆಗಮಿಸಿದರು.

English summary
Air Conditions in the all government office will switch off on every Monday announced Udupi Deputy Commissioner Hephsiba Rani Korlapati. Deputy Commissioner using public transport to reach office on every Thursday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X