ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಇತರೆ ರಾಜ್ಯಗಳಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ: ಬಿ. ಶ್ರೀರಾಮುಲು

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 9: ರಾಜ್ಯದಲ್ಲಿ ಕೊರೊನಾ ವೈರಸ್ ಮಹಾಮಾರಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದರೂ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ ಇನ್ನು ಮುಂದೆ ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಇರುವುದಿಲ್ಲ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.

Recommended Video

Celebrities we lost during the Lockdown | Oneindia Kannada

ಸಾಂಸ್ಥಿಕ ಕ್ವಾರಂಟೈನ್ ಬದಲಾಗಿ ಅನ್ಯರಾಜ್ಯಗಳಿಂದ ಬರುವವರಿಗೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ವಿಧಿಸಲು ರಾಜ್ಯ ಸರಕಾರ ತೀರ್ಮಾನ ತೆಗೆದುಕೊಂಡಿದೆ ಎಂದು ಹೇಳಿದರು.

.ತಮಿಳುನಾಡಿನಲ್ಲಿ sslc ಪರೀಕ್ಷೆ ರದ್ದು; ಸುರೇಶ್ ಕುಮಾರ್ ಹೇಳಿದ್ದೇನು?.ತಮಿಳುನಾಡಿನಲ್ಲಿ sslc ಪರೀಕ್ಷೆ ರದ್ದು; ಸುರೇಶ್ ಕುಮಾರ್ ಹೇಳಿದ್ದೇನು?

ಉಡುಪಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ಬಳಿಕ ಮಾತನಾಡಿದ ಸಚಿವರು, ಹೋಮ್ ಕ್ವಾರಂಟೈನ್ ಆದ ಮನೆಗಳನ್ನು ಸೀಲ್ ಡೌನ್ ಮಾಡಲಾಗುತ್ತದೆ. ಒಂದು ವೇಳೆ ಹೋಮ್ ಕ್ವಾರಂಟೈನ್ ನಲ್ಲಿರುವವರು ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಹೇಳಿದರು.

There Is No Corporate Quarantine For Those From Other States: Minister Sriramulu

ಉಡುಪಿ ಜಿಲ್ಲೆಯಲ್ಲಿ 947 ಕೊರೊನಾ ವೈರಸ್ ಪ್ರಕರಣಗಳು ಕಂಡುಬಂದರೂ ಸಮುದಾಯದಲ್ಲಿ ಸೋಂಕು ಹರಡಿಲ್ಲ ಎಂದು ಇದೇ ವೇಳೆ ಆರೋಗ್ಯ ಸಚಿವರು ಸ್ಪಷ್ಟಪಡಿಸಿದರು.

English summary
Health Minister B Sriramulu said that those who come to Karnataka from other states, including Maharashtra, will no longer have corporate quarantine for seven days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X