ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಯ ಒಪಿಡಿ ತಾತ್ಕಾಲಿಕ ಸ್ಥಗಿತ

ಬೆಂಗಳೂರು, ಜುಲೈ 20:ಮಣಿಪಾಲದ ಕಸ್ತೂರ ಬಾ ಆಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

Recommended Video

      Indiaದಲ್ಲಿ Corona ಕಾಟ ಆಗಸ್ಟ್ ತಿಂಗಳಲ್ಲಿ ತಾರಕಕ್ಕೇರಲಿದೆ! | Oneindia Kannada

      ಜುಲೈ 21ರ ಮಂಗಳವಾರದಿಂದ ಜುಲೈ 26ರ ಭಾನುವಾರದವರೆಗೂ ಎಲ್ಲಾ ಹೊರರೋಗಿ ಸೇವಾ ಸೌಲಭ್ಯಗಳನ್ನು ಸ್ಥಗಿತಗೊಳಿಸಲಾಗಿದೆ. 27 ಜುಲೈ 2020ರ ಸೋಮವಾರ ಹೊರರೋಗಿ ವಿಭಾಗವು ಎಂದಿನಂತೆ ಸೇವೆ ಸಲ್ಲಿಸಲಿದೆ.

      ಉಡುಪಿ ಜಿಲ್ಲೆಯಲ್ಲಿ ಕೊರೊನಾ ವೈರಸ್ (ಕೊವಿಡ್ 19) ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿರುವುದು ಮತ್ತು ಕಳೆದ ಕೆಲವು ದಿನಗಳಿಂದ ನಮ್ಮ ಅನೇಕ ಆರೋಗ್ಯ ಕಾರ್ಯಕರ್ತರು ಕೊವಿಡ್ ಸೋಂಕಿಗೆ ತುತ್ತಾಗುತ್ತಿರುವುದನ್ನು ನಾವು ಗಮನಿಸಿದ್ದೇವೆ.

      No OPD Service In Kasturba Manipal Hospital

      ಆಸ್ಪತ್ರೆಯು ಇಡೀ ಆಸ್ಪತ್ರೆಯನ್ನು ಸ್ವಚ್ಛಗೊಳಿಸಲಿದೆ ಮತ್ತು 200 ಕೋವಿಡ್ 19 ಹಾಸಿಗೆಯನ್ನು ಸಿದ್ಧಪಡಿಸುತ್ತಿದೆ. ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಹೊರರೋಗಿ ವಿಭಾಗವನ್ನು ಮುಚ್ಚುವ ನಿರ್ಧಾರವನ್ನು ಕೈಗೊಂಡಿದೆ.

      ಆದಾಗ್ಯೂ ಆಸ್ಪತ್ರೆಯ ಆಡಳಿತ ಮಂಡಳಿಯು ಜನರಿಗೆ ವೈದ್ಯಕೀಯ ಸಮಾಲೋಚನೆಯನ್ನು ನೀಡುವ ಉದ್ದೇಶದಿಂದ 20ನೇ ಜುಲೈ 2020ರಿಂದ ವೀಡಿಯೊ ಸಮಾಲೋಚನಾ ಸೌಲಭ್ಯವನ್ನು ಆರಂಭಿಸಿದೆ.

      ಈ ಸೇವೆಯಡಿಯಲ್ಲಿ ಜನರು ತಮ್ಮ ಮನೆಯಲ್ಲಿ ಕುಳಿತು ವೈದ್ಯರನ್ನು ಸಂಪರ್ಕಿಸಬಹುದು. ವೈದ್ಯರು ದೂರವಾಣಿ ಮೂಲಕ ಅಥವಾ ವೀಡಿಯೋ ಕರೆ ಮೂಲಕ ಸಮಾಲೋಚನೆ ಮತ್ತು ವೈದ್ಯಕೀಯ ಸಲಹೆಯನ್ನು ನೀಡಲಿದ್ದಾರೆ.

      ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 9.00ರಿಂದ ಸಂಜೆ 4.00ರವರೆಗೆ ದೂರವಾಣಿ ಕರೆ ಮಾಡುವುದರ ಮೂಲಕ ಎಲ್ಲಾ ವಿಭಾಗದ ವೈದ್ಯರನ್ನು ವೀಡಿಯೊ ಸಮಾಲೋಚನೆ ಮೂಲಕ ಸಂಪರ್ಕಿಸಬಹುದಾಗಿದೆ. ಸಂಪರ್ಕಿಸಲು 080 47192235ಗೆ ಕರೆ ಮಾಡಬಹುದು.ಅಪಘಾತ ಮತ್ತು ತುರ್ತು ಚಿಕಿತ್ಸಾ ಸೇವೆಗಳು ಎಂದಿನಂತೆ 24X7 ಕಾರ್ಯನಿರ್ವಹಿಸಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+