ಉಡುಪಿ ಜಿಲ್ಲಾಡಳಿತದ ಯೋಗ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳೇ ಗೈರು

ಉಡುಪಿ, ಜೂನ್ 21: ಉಡುಪಿಯಲ್ಲಿ ಜಿಲ್ಲಾಡಳಿತದ ವತಿಯಿಂದ ಕಾಟಾಚಾರಕ್ಕೆ ಯೋಗ ದಿನಾಚರಣೆ ಆಚರಿಸಿರುವುದು ಬೆಳಕಿಗೆ ಬಂದಿದೆ. ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಗೈರು ಹಾಜರಾಗಿದ್ದರು.

ಭಾರತದಲ್ಲಿ ಪರಿಚಿತಗೊಂಡ ಯೋಗ ಈಗ ವಿಶ್ವಮಾನ್ಯತೆ ಪಡೆದಿದೆ. ಇಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ದೇಶದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಗಳಲ್ಲೂ ಜಿಲ್ಲಾಡಳಿತ ಸಾಮೂಹಿಕ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

no proper response for international Yoga day in udupi

ಆದರೆ ಉಡುಪಿ ಜಿಲ್ಲೆಯಲ್ಲಿ ಮಾತ್ರ ಜಿಲ್ಲಾಡಳಿತ ಕಾಟಾಚಾರಕ್ಕೆ ಎಂಬಂತೆ ಯೋಗ ದಿನಾಚರಣೆಯನ್ನು ಆಚರಿಸಿದೆ. ಉಡುಪಿಯ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಯೋಗ ದಿನಾಚರಣೆಗೆ ಹಿರಿಯ ಅಧಿಕಾರಿಗಳು ನಿರ್ಲಕ್ಷ್ಯವಹಿಸಿದ್ದಾರೆ. ಜಿಲ್ಲಾಡಳಿತದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರೇ ಗೈರಾಗಿದ್ದರು. ಉಡುಪಿ ಜಿ.ಪಂ ಕಾರ್ಯ ನಿರ್ವಹಣಾಧಿಕಾರಿ ಸಿಂಧು ರೂಪೇಶ್, ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್ ಗೈರಾಗಿದ್ದರು. ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ಈ ನಿರ್ಲಕ್ಷ ಈಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+