• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ನೆರೆ ಸಂತ್ರಸ್ತರಿಗೆ ಒಂದು ಕೋಟಿ ದೇಣಿಗೆ

By ಉಡುಪಿ ಪ್ರತಿನಿಧಿ
|

ಉಡುಪಿ, ಆಗಸ್ಟ್ 16: ನೆರೆಯಿಂದ ಉತ್ತರ ಕರ್ನಾಟಕ ತತ್ತರಿಸಿದೆ. ಹಲವು ಸಂಘ ಸಂಸ್ಥೆಗಳು, ದಾನಿಗಳು ನೆರೆ ಸಂತ್ರಸ್ತರಿಗೆ ಹಣಕಾಸಿನ ನೆರವು ನೀಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇಗುಲದ ಆಡಳಿತ ಮಂಡಳಿ ಕೂಡ ನೆರೆ ಸಂತ್ರಸ್ತರಿಗೆ ಮಿಡಿದಿದೆ.

ಕರ್ನಾಟಕ ಪ್ರವಾಹ: ಸಂತ್ರಸ್ತರಿಗೆ ನೆರವು ನೀಡುವುದು ಹೇಗೆ?

ಕೊಲ್ಲೂರು ಮೂಕಾಂಬಿಕಾ ದೇಗುಲದಿಂದ ಪರಿಹಾರ ದೇಣಿಗೆಯಾಗಿ ಒಂದು ಕೋಟಿ ರೂಪಾಯಿ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ.

ಕೊಲ್ಲೂರು ದೇಗುಲದ ವ್ಯವಸ್ಥಾಪನಾ ಸಮಿತಿಯು ಈ ತೀರ್ಮಾನ ಮಾಡಿದೆ. ಈ ದೇಣಿಗೆಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುತ್ತದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ಮೂಕಾಂಬಿಕಾ ದೇವಸ್ಥಾನ ಇದ್ದು, ರಾಜ್ಯ ಮತ್ತು ಪರ ರಾಜ್ಯಗಳಿಂದ ಸಾವಿರಾರು ಭಕ್ತರು ಇದ್ದಾರೆ. ಮಾತ್ರವಲ್ಲ‌, ಕೋಟ್ಯಂತರ ರೂಪಾಯಿ ಆದಾಯವಿರುವ ದೇವಸ್ಥಾನವೂ ಇದಾಗಿದೆ.

English summary
The famous temple of the Udupi district, the Kollur Mookambika temple trust is donating one crore rupees to flood victims.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X