ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಿಂದ ನೆರೆ ಸಂತ್ರಸ್ತರಿಗೆ ಒಂದು ಕೋಟಿ ದೇಣಿಗೆ
ಉಡುಪಿ, ಆಗಸ್ಟ್ 16: ನೆರೆಯಿಂದ ಉತ್ತರ ಕರ್ನಾಟಕ ತತ್ತರಿಸಿದೆ. ಹಲವು ಸಂಘ ಸಂಸ್ಥೆಗಳು, ದಾನಿಗಳು ನೆರೆ ಸಂತ್ರಸ್ತರಿಗೆ ಹಣಕಾಸಿನ ನೆರವು ನೀಡುತ್ತಿದ್ದಾರೆ. ಉಡುಪಿ ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಕೊಲ್ಲೂರು ಮೂಕಾಂಬಿಕಾ ದೇಗುಲದ ಆಡಳಿತ ಮಂಡಳಿ ಕೂಡ ನೆರೆ ಸಂತ್ರಸ್ತರಿಗೆ ಮಿಡಿದಿದೆ.
ಕರ್ನಾಟಕ ಪ್ರವಾಹ: ಸಂತ್ರಸ್ತರಿಗೆ ನೆರವು ನೀಡುವುದು ಹೇಗೆ?
ಕೊಲ್ಲೂರು ಮೂಕಾಂಬಿಕಾ ದೇಗುಲದಿಂದ ಪರಿಹಾರ ದೇಣಿಗೆಯಾಗಿ ಒಂದು ಕೋಟಿ ರೂಪಾಯಿ ನೀಡಲು ನಿರ್ಣಯ ತೆಗೆದುಕೊಳ್ಳಲಾಗಿದೆ.
ಕೊಲ್ಲೂರು ದೇಗುಲದ ವ್ಯವಸ್ಥಾಪನಾ ಸಮಿತಿಯು ಈ ತೀರ್ಮಾನ ಮಾಡಿದೆ. ಈ ದೇಣಿಗೆಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುತ್ತದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ಮೂಕಾಂಬಿಕಾ ದೇವಸ್ಥಾನ ಇದ್ದು, ರಾಜ್ಯ ಮತ್ತು ಪರ ರಾಜ್ಯಗಳಿಂದ ಸಾವಿರಾರು ಭಕ್ತರು ಇದ್ದಾರೆ. ಮಾತ್ರವಲ್ಲ, ಕೋಟ್ಯಂತರ ರೂಪಾಯಿ ಆದಾಯವಿರುವ ದೇವಸ್ಥಾನವೂ ಇದಾಗಿದೆ.