ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿಯ ಮಣಿಪಾಲ ಕೆಎಂಸಿಯಲ್ಲಿ ಒಪಿಡಿ ಸೇವೆ ಸ್ಥಗಿತ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಮಾರ್ಚ್ 26: ಉಡುಪಿಯ ಮಣಿಪಾಲ ಕೆಎಂಸಿ ಆಸ್ಪತ್ರೆಯ ಒಪಿಡಿ ಸೇವೆ ಸಂಪೂರ್ಣ ಸ್ಥಗಿತಗೊಳಿಸಿದ್ದು, ತುರ್ತು ಚಿಕಿತ್ಸೆಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.

ಕೊರೋನಾ ರೋಗಿಗೆ ಕೆಎಂಸಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿದ್ದು, ಆಸ್ಪತ್ರೆಯ ಒಪಿಡಿಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ. ಏಪ್ರಿಲ್ 15 ರವರೆಗೆ ಒಪಿಡಿ ಸೇವೆ ಸ್ಥಗಿತಗೊಳಿಸಲಾಗಿದೆ.

ಕೊರೊನಾ ರೋಗಿಗಳಿಗಾಗಿ ಒಡಿಶಾದಲ್ಲಿ ಅತಿ ದೊಡ್ಡ ಆಸ್ಪತ್ರೆ ಸಜ್ಜುಕೊರೊನಾ ರೋಗಿಗಳಿಗಾಗಿ ಒಡಿಶಾದಲ್ಲಿ ಅತಿ ದೊಡ್ಡ ಆಸ್ಪತ್ರೆ ಸಜ್ಜು

ಕೊರೋನಾ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಎಂಸಿಯಲ್ಲಿ 10 ಬೆಡ್ ಗಳ ವ್ಯವಸ್ಥೆ ಮಾಡಲಾಗಿದೆ. ಹೊರಾಂಗಣದಲ್ಲಿ ತಾತ್ಕಾಲಿಕ ಆರೋಗ್ಯ ಪರೀಕ್ಷಾ ಕೇಂದ್ರ ಇದ್ದು, ವೈದ್ಯಕೀಯ ಪರೀಕ್ಷೆ ನಡೆಸದೆ ಕೆಎಂಸಿಗೆ ಪ್ರವೇಶ ಇಲ್ಲ.

OPD Service Closed In KMC Udupi Due To Corona

ಕಿಮೋ- ರೆಡಿಯೋಥೆರಪಿ ರೋಗಿಗಳಿಗೆ ಶಿರಡಿ ಸಾಯಿಬಾಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಗರ್ಭಿಣಿಯರಿಗೆ ಒಪಿಡಿಗೆ ಪ್ರವೇಶವಿಲ್ಲ. ಮಕ್ಕಳ ಲಸಿಕೆಗೆ ಏಪ್ರಿಲ್15 ರ ನಂತರ ಬನ್ನಿ ಎಂದು ಮಣಿಪಾಲ ಕೆಎಂಸಿ ವೈದ್ಯಕೀಯ ಅಧೀಕ್ಷಕರು ಮಾಹಿತಿ ನೀಡಿದ್ದು, ಕೆಎಂಸಿಗೆ ಬರುವ ರೋಗಿಗಳು ಸಹಕರಿಸುವಂತೆ ಮನವಿ ಮಾಡಿದ್ದಾರೆ.

English summary
opd service closed in kmc manipal hospital udupi till april 15,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X