ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ನರೇಂದ್ರ ಮೋದಿ:ಶೋಭಾ ಕರಂದ್ಲಾಜೆ
ಉಡುಪಿ, ಮಾರ್ಚ್ 21: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಯಾರು ಎಂಬುದು ಹೈಕಮಾಂಡ್ ಸ್ಪಷ್ಟಪಡಿಸಿಲ್ಲ. ಆದರೆ ಈ ಬಾರಿಯ ಚುನಾವಣೆಯಲ್ಲಿ ಅಭ್ಯರ್ಥಿ ಯಾರೆನ್ನುವುದಕ್ಕಿಂತ ಮೋದಿಯೇ ಅಭ್ಯರ್ಥಿ ಎನ್ನುವ ಅಂಶವನ್ನು ಮತದಾರರಿಗೆ ತಿಳಿಸುವ ಕೆಲಸ ಆಗಬೇಕು ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.
ಕುಂದಾಪುರದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ದೇಶದಾದ್ಯಂತ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಯಾರೇ ಅಭ್ಯರ್ಥಿಯಾಗಿದ್ದರೂ ಅದು ಲೆಕ್ಕಕ್ಕಿಲ್ಲ. ನಮ್ಮ ಅಭ್ಯರ್ಥಿ ನರೇಂದ್ರ ಮೋದಿ ಅಷ್ಟೇ ಎಂದು ಹೇಳಿದರು.

ಮೋದಿಯವರ ಕೈ ಬಲಪಡಿಸುವ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವುದಷ್ಟೇ ನಮ್ಮ ಗುರಿಯಾಗಬೇಕು ಆ ಮೂಲಕ ನಮ್ಮ ಅಭ್ಯರ್ಥಿಯನ್ನು ಅಧಿಕ ಮತಗಳ ಅಂತರದಲ್ಲಿ ಗೆಲ್ಲಿಸಬೇಕು. ಅದಕ್ಕಾಗಿ ಮೋದಿಯವರನ್ನೇ ಮುಂದೆ ತರಬೇಕು ಮತ್ತು ಬಿಜೆಪಿ ಚಿಹ್ನೆಯಾದ ಕಮಲದ ಗುರುತನ್ನು ಸ್ಪಷ್ಟಪಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.












Click it and Unblock the Notifications