ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೂ. 21ರಿಂದ ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಎಲ್ಲ ಸೇವೆ ಲಭ್ಯ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜೂನ್ 18; ಸೋಮವಾರದಿಂದ ಮಣಿಪಾಲದ ಕೆಎಂಸಿ ಆಸ್ಪತ್ರೆಯ ಹೊರರೋಗಿ, ಒಳರೋಗಿ ಸೇವೆಗಳು, ನಾನ್ ಓಪಿಡಿ ವಿಶೇಷ ಸೇವೆಗಳು ಮತ್ತು ಆರೋಗ್ಯ ತಪಾಸಣೆ ಪ್ಯಾಕೇಜ್ ಸೇರಿದಂತೆ ಎಲ್ಲ ವಿಭಾಗಗಳು ಸಾರ್ವಜನಿಕರ ಸೇವೆಗೆ ಮುಕ್ತವಾಗಲಿದೆ.

ಹೊರರೋಗಿ ವಿಭಾಗ ಸೇವೆಗಳು ಇಡೀ ದಿನ ಅಂದರೆ ಬೆಳಗ್ಗೆ 8 ರಿಂದ ಸಂಜೆ 5ರ ವರೆಗೆ ಲಭ್ಯವಾಗಲಿದೆ ಎಂದು ಕಸ್ತೂರ್ಬಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಅವಿನಾಶ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಲ್ಲ ರೀತಿಯ ಶಸ್ತ್ರಚಿಕಿತ್ಸಾ ಸೌಲಭ್ಯಗಳು ಕೂಡ ದೊರೆಯಲಿವೆ. ಆದರೆ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ಸೇರ್ಪಡೆಯಾಗಲು ಕೋವಿಡ್ ಆರ್‌ಟಿಪಿಸಿಆರ್ ಪರೀಕ್ಷೆ ಕಡ್ಡಾಯವಾಗಿದೆ.

ದೆಹಲಿಗೆ ತೆರಳಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ 19 ದಾದಿಯರ ಮೊದಲ ತಂಡ ದೆಹಲಿಗೆ ತೆರಳಿದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ 19 ದಾದಿಯರ ಮೊದಲ ತಂಡ

ಒಂದು ವೇಳೆ ತಮ್ಮ ಊರಿನಲ್ಲಿಯೇ ಆರ್‌ಟಿಪಿಸಿಆರ್ ಪರೀಕ್ಷೆ ಮಾಡಿಸಿದ್ದರೆ ಗಂಟಲ ದ್ರವ ತೆಗೆದ 72 ಗಂಟೆಗಳ ತನಕ ಉರ್ಜಿತವಾಗಿರುತ್ತದೆ. ಇಲ್ಲವಾದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳರೋಗಿಯಾಗಿ ಸೇರ್ಪಡೆಗೊಳಿಸುವ ಮೊದಲು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಲಾಗುವುದು.

ಉಡುಪಿಯ ಮಣಿಪಾಲ ಕೆಎಂಸಿಯಲ್ಲಿ ಒಪಿಡಿ ಸೇವೆ ಸ್ಥಗಿತಉಡುಪಿಯ ಮಣಿಪಾಲ ಕೆಎಂಸಿಯಲ್ಲಿ ಒಪಿಡಿ ಸೇವೆ ಸ್ಥಗಿತ

Out Patient And Other Service Open In KMC Manipal From June 21

ಈ ಸೇವೆಯನ್ನು ಪಡೆದುಕೊಳ್ಳಲು ಬರುವ ಪ್ರತಿಯೊಂದು ರೋಗಿಯು ಆಸ್ಪತ್ರೆಯ ಹೊರಾಂಗಣದಲ್ಲಿ ಹಾಕಿರುವ ತಾತ್ಕಾಲಿಕ ಜ್ವರದ ಚಿಕಿತ್ಸಾಲಯಕ್ಕೆ ಭೇಟಿ ನೀಡಬೇಕು. ನಂತರ ಸಂಬಂಧಪಟ್ಟ ವಿಭಾಗಗಳಿಗೆ ಕಳುಹಿಸಿಕೊಡಲಾಗುವುದು.

ಕೊರೊನಾ ಎಫೆಕ್ಟ್: ವಿದ್ಯಾಕಾಶಿ ಮಣಿಪಾಲ ಅಕ್ಷರಶಃ ಬಂದ್ಕೊರೊನಾ ಎಫೆಕ್ಟ್: ವಿದ್ಯಾಕಾಶಿ ಮಣಿಪಾಲ ಅಕ್ಷರಶಃ ಬಂದ್

ಎಲ್ಲ ರೋಗಿಗಳು ಮತ್ತು ಆಸ್ಪತ್ರೆಗೆ ಭೇಟಿ ನೀಡುವ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಪ್ರತಿ ರೋಗಿಯೊಂದಿಗೆ ಒಬ್ಬ ಸಹಾಯಕರಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು ಎಂದು ಸ್ಪಷ್ಟಪಡಿಸಲಾಗಿದೆ.

Recommended Video

WTC ಮೊದಲ ದಿನ ದಿನದ ಪಂದ್ಯ ನಡೆಯೋದಿಲ್ಲ | Oneindia Kannada

English summary
Out patient, health check up package and all other service will open in KMC Manipal from June 21, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X