• search
 • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಉಡುಪಿಯಲ್ಲಿ 72 ಡ್ರಗ್ಸ್ ಆರೋಪಿಗಳ ಪರೇಡ್: ಎಸ್ಪಿ ಎಚ್ಚರಿಕೆ

By ಉಡುಪಿ ಪ್ರತಿನಿಧಿ
|

ಉಡುಪಿ, ಅಕ್ಟೋಬರ್ 28: ರಾಜ್ಯದಲ್ಲಿ ಡ್ರಗ್ಸ್ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ಮಾದಕ ವಸ್ತು ಸಾಗಾಟ ಮತ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳನ್ನು ನಗರದ ಚಂದು ಮೈದಾನದಲ್ಲಿ ಪರೇಡ್ ನಡೆಸಲಾಯಿತು.

ಪರೇಡ್ ನಲ್ಲಿ ಬೈಂದೂರು ಠಾಣಾ ವ್ಯಾಪ್ತಿಯಿಂದ ಇಬ್ಬರು, ಕುಂದಾಪುರ ಠಾಣಾ ವ್ಯಾಪ್ತಿಯಿಂದ 18 ಜನ, ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಿಂದ 4 ಜನ, ಕೋಟ ಠಾಣಾ ವ್ಯಾಪ್ತಿಯಿಂದ ಇಬ್ಬರು, ಉಡುಪಿ ನಗರ ಠಾಣಾ ವ್ಯಾಪ್ತಿಯಿಂದ 12 ಜನ, ಮಲ್ಪೆ ಠಾಣಾ ವ್ಯಾಪ್ತಿಯಿಂದ 5 ಜನ ಬಂದಿದ್ದರು.

ಉಡುಪಿಯಲ್ಲಿ ಕಿಡಿಗೇಡಿಗಳಿಂದ ಮಾರ್ವಾಡಿ ಹಟಾವೋ ಅಭಿಯಾನ: ತೀವ್ರ ಆಕ್ಷೇಪ

ಇನ್ನು ಮಣಿಪಾಲ ಠಾಣಾ ವ್ಯಾಪ್ತಿಯಿಂದ 16 ಜನ, ಸೆನ್ ಠಾಣಾ ವ್ಯಾಪ್ತಿಯಿಂದ ಇಬ್ಬರು, ಕಾರ್ಕಳ ನಗರ ಠಾಣಾ ವ್ಯಾಪ್ತಿಯಿಂದ ಇಬ್ಬರು, ಪಡುಬಿದ್ರಿ ಠಾಣಾ ವ್ಯಾಪ್ತಿಯಿಂದ 5 ಜನ, ಕಾಪು ಠಾಣಾ ವ್ಯಾಪ್ತಿಯಿಂದ 3 ಜನ ಹಾಗೂ ಹಿರಿಯಡ್ಕ ಠಾಣಾ ವ್ಯಾಪ್ತಿಯಿಂದ ಓರ್ವ ಹೀಗೆ ಒಟ್ಟು 72 ಜನ ಆರೋಪಿಗಳು ಪರೇಡ್ ನಲ್ಲಿ ಭಾಗವಹಿಸಿದ್ದರು.

   Munirathna : ನಮ್ ಅಮ್ಮ ಸತ್ತು 25 ವರುಷ ಆಗಿದೆ | Oneindia Kannada

   ಪರೇಡ್ ನಲ್ಲಿ ಭಾಗವಹಿಸಿದ್ದ ಆರೋಪಿಗಳನ್ನು ಉದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ""ಸಮಾಜದ ಸ್ವಾಸ್ತ್ಯ ಕಾಪಾಡುವ ನಿಟ್ಟಿನಲ್ಲಿ ಇನ್ಮುಂದೆ ಇಂತಹ ಸಮಾಜದ್ರೋಹಿ ಚಟುವಟಿಕೆಗಳಲ್ಲಿ ಭಾಗವಹಿಸದೇ, ಉತ್ತಮ ರೀತಿಯಲ್ಲಿ ಜೀವನ ನಡೆಸಬೇಕೆಂದು'' ಕರೆ ನೀಡಿದರು. ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು

   English summary
   A parade was held at Chandu Ground in the city on charges of drug trafficking and selling in Udupi district.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X