ಮರಳಿನ ಸಮಸ್ಯೆ ಪರಿಹರಿಸದಿದ್ದರೆ ಉಪವಾಸ ಆರಂಭಿಸುವೆ ಎಂದ ಪೇಜಾವರ ಶ್ರೀ
ಉಡುಪಿ, ನವೆಂಬರ್. 02: ಉಡುಪಿ ಜಿಲ್ಲಾ ಮರಳು ಹೋರಾಟ ಸಮಿತಿಯ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಹಮ್ಮಿಕೊಳ್ಳಲಾಗಿರುವ ಅನಿದಿಷ್ಟಾವಧಿ ಅಹೋರಾತ್ರಿ ಧರಣಿ 9 ನೇ ದಿನಕ್ಕೆ ಕಾಲಿರಿಸಿದೆ.
ಈ ನಡುವೆ ಗುರುವಾರ (ನವೆಂಬರ್ 01) ಧರಣಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಪೇಜಾವರ ಮಠಾಧೀಶ ಶ್ರೀವಿಶ್ವೇಶ ತೀರ್ಥ ಸ್ವಾಮೀಜಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದರು. ಈ ಹೋರಾಟ ಸುಖಾಂತ್ಯವಾಗಲೆಂದು ಧರಣಿ ನಿರತರ ನಡುವೆ ವಿಷ್ಣು ಸಹಸ್ರನಾಮ ಪಾರಾಯಣ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಪೇಜಾವರ ಶ್ರೀ, ಮರಳಿನ ಸಮಸ್ಯೆ ನವೆಂಬರ್ 10ರೊಳಗೆ ಪರಿಹರಿಸದಿದ್ದರೆ ಉಪವಾಸ ಆರಂಭಿಸಲಿದ್ದೇನೆ. ಅತಿಯಾದ ಮರಳುಗಾರಿಕೆಗೆ ಪೂರ್ಣ ನಿಷೇಧ ಹೇರುವುದು ಪರಿಸರ ಹಾನಿಕರ. ಆದುದರಿಂದ ಸರಕಾರ ಯೋಗ್ಯವಾದ ನಿಯಂತ್ರಣದೊಂದಿಗೆ ಮರಳುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಉಡುಪಿ ಶಾಸಕ ರಘುಪತಿ ಭಟ್ , ದೋಣಿ ಕಾರ್ಮಿಕ ಸಂಘದ ಅಧ್ಯಕ್ಷ ಸುಧಾಕರ್ ಅಮೀನ್ , ಜಿಪಂ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಮರಳಿಗಾಗಿ ಹೋರಾಟ ಸಮಿತಿಯ ಸಂಚಾಲಕ ಎಂ.ಜಿ.ನಾಗೇಂದ್ರ, ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹ್ಮದ್, ತಾಪಂ ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಬಿಲ್ಡರ್ ಅಸೋಸಿಯೇಶನ್ ಅಧ್ಯಕ್ಷ ಜೆರ್ರಿ ಡಯಸ್, ಚೇಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಕೃಷ್ಣರಾಜ ಕೊಡಂಚ ಮೊದಲಾದವರು ಉಪಸ್ಥಿತರಿದ್ದರು.












Click it and Unblock the Notifications