ಪೇಜಾವರ ಶ್ರೀ ಆರೋಗ್ಯ ಕ್ಷೀಣ; ಮಠಕ್ಕೆ ಕರೆದುಕೊಂಡು ಹೋಗಲು ನಿರ್ಧಾರ
ಉಡುಪಿ, ಡಿಸೆಂಬರ್ 28: ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಪೇಜಾವರದ ವಿಶ್ವೇಶ ತೀರ್ಥ ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಕ್ಷೀಣಿಸಿದೆ. ಅವರನ್ನು ಭಾನುವಾರ ಬೆಳಿಗ್ಗೆ ಕೃತಕ ಉಸಿರಾಟ ವ್ಯವಸ್ಥೆ ಮೂಲಕವೇ (ವೆಂಟಿಲೇಟರ್) ಪೇಜಾವರ ಮಠಕ್ಕೆ ಕರೆದುಕೊಂಡು ಹೋಗಿ, ಮಠದಲ್ಲೇ ಚಿಕಿತ್ಸೆ ಮುಂದುವರೆಸಲು ವೈದ್ಯರು ತಿರ್ಮಾನಿಸಿದ್ದಾರೆ.
ಸಂಜೆ ಶ್ರೀಗಳ ಹೆಲ್ತ್ ಬುಲಿಟಿನ್ ಬಿಡುಗಡೆ ಮಾಡಿರುವ ಮಣಿಪಾಲ್ ಕೆಎಂಸಿ ಆಸ್ಪತ್ರೆ ವೈದ್ಯರು, ಶ್ರೀಗಳ ಮೆದುಳು ನಿಷ್ಕ್ರೀಯಗೊಂಡಿದ್ದು, ಕ್ತದೊತ್ತಡದಲ್ಲಿ ತೀವ್ರ ಇಳಿಮುಖವಾಗಿದೆ. ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಸಂಜೆ ಕಾರವಾರದಿಂದ ಆಗಮಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಡಿ ವಿ ಸದಾನಂದಗೌಡ ಅವರು ಶ್ರೀಗಳ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡು, ಉಡುಪಿಯಲ್ಲೇ ತಂಗಿದ್ದಾರೆ. ಭಕ್ತರು ಮಠಕ್ಕೆ ಆಗಮಿಸದೇ, ತಾವು ಇದ್ದಲ್ಲೇ ಶ್ರೀಗಳ ಆರೋಗ್ಯಕ್ಕಾಗಿ ಪ್ರಾರ್ಥಿಸಬೇಕು ಎಂದು ಪೇಜಾವರ ಮಠದ ಕಿರಿಯ ಶ್ರೀಗಳು ತಿಳಿಸಿದ್ದಾರೆ.

ಉಸಿರಾಟದ ತೊಂದರೆಯಿಂದಾಗಿ ಡಿ 21 ರ ಶುಕ್ರವಾರ ಮುಂಜಾನೆ 3 ಗಂಟೆ ಸುಮಾರಿಗೆ ಅಮಣಿಪಾಲವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿತ್ತು. ಕೂಡಲೇ ಚಿಕಿತ್ಸೆಗಾಗಿ ದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅವರಿಗೆ ಸದ್ಯ ಐಸಿಯುದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇತ್ತೀಚೆಗೆ ತಮ್ಮ ಇಳಿವಯಸ್ಸಿನಲ್ಲಿಯೂ ಪೇಜಾವರ ಶ್ರೀಗಳು ನಿರಂತರ ಪ್ರವಾಸದಲ್ಲಿದ್ದರು. ಉತ್ತರ ಭಾರತ, ತಿರುಪತಿ ಮತ್ತು ಚೆನ್ನೈಗೆ ಭೇಟಿ ನೀಡಿದ್ದರು. 2017ರಲ್ಲಿ ಪೇಜಾವರ ಶ್ರೀಗಳು ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಒಂದು ತಿಂಗಳ ಬಳಿಕ ಅವರಿಗೆ ಪುನಃ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಚಿಕಿತ್ಸೆ ನೀಡಲಾಗಿತ್ತು.












Click it and Unblock the Notifications