ಪೇಜಾವರ ಶ್ರೀಗಳ ಗುರು ವಂದನಾ ಕಾರ್ಯಕ್ರಮ ಮುಂದೂಡಿಕೆ

ಉಡುಪಿ, ಡಿಸೆಂಬರ್ 26: ಪೇಜಾವರ ಶ್ರೀ ವಿಶ್ವೇಶ ತೀರ್ಥ ಸ್ವಾಮೀಜಿ ಸನ್ಯಾಸ ಸ್ವೀಕರಿಸಿ 80 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಡಿಸೆಂಬರ್ 27 ರಂದು ಆಯೋಜಿಸಲಾಗಿದ್ದ ಪೇಜಾವರ ಶ್ರೀಗಳ ಗುರುವಂದನಾ ಕಾರ್ಯಕ್ರಮ ಮುಂದೂಡಲಾಗಿದೆ. ಪೇಜಾವರ ಶ್ರೀ ಗಳ ಶಿಷ್ಯೆ ಉಮಾಭಾರತಿ ಅವರು ಕಾರ್ಯಕ್ರಮವನ್ನು ಡಿಸೆಂಬರ್ 27 ರಂದು ಉಡುಪಿಯಲ್ಲಿ ಆಯೋಜಿಸಿದ್ದರು .

ಈ ಗುರುವಂದನಾ ಸಾರ್ವಜನಿಕ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಭಾಗವಹಿಸಲಿದ್ದರು. ಆದರೆ ರಾಷ್ಟ್ರಪತಿಗಳ ಶಿಷ್ಟಾಚಾರ ಪ್ರಕಾರ ಸನ್ಮಾನ ಕಾರ್ಯಕ್ರಮಗಳಲ್ಲಿ ರಾಷ್ಟ್ರಪತಿ ಪಾಲ್ಗೊಳ್ಳಲು ಸಾಧ್ಯವಾಗದಿರುವುದು ಹಾಗೂ ಭದ್ರತಾ ಕಾರಣಗಳಿಂದಾಗಿ ಕಾರ್ಯಕ್ರಮ ಮುಂದಕ್ಕೆ ಹಾಕಲಾಗಿದೆ.

ಈ ನಡುವೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಡಿಸೆಂಬರ್ 27 ರಂದು ಉಡುಪಿಗೆ ಬಂದು ಕೃಷ್ಣ ಮಠಕ್ಕೆ ಭೇಟಿ ನೀಡಿ ನೀಡುವುದು ಖಚಿತವಾಗಿದೆ.

Pejawar shree guru vandana program postponed

ಪೇಜಾವರ ಶ್ರೀಗಳು ಸನ್ಯಾಸ ಸ್ವೀಕರಿಸಿ 80 ವರ್ಷ ಸಂದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಡಿಸೆಂಬರ್ 27 ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಆದರೆ ರಾಷ್ಟ್ರಪತಿಗಳ ಶಿಷ್ಟಾಚಾರ ಮತ್ತು ಭದ್ರತಾ ಕಾರಣಗಳಿಂದ ಕಾರ್ಯಕ್ರಮ ಮುಂದೂಡಲಾಗಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಡಿಸೆಂಬರ್ 27 ರಂದು ಉಡುಪಿಗೆ ಭೇಟಿ ನೀಡಲಿದ್ದು ಬೆಳಗ್ಗೆ 11.35ಕ್ಕೆ ಉಡುಪಿ ಹೆಲಿಪ್ಯಾಡ್ ಗೆ ಆಗಮಿಸಲಿದ್ದಾರೆ. ನಂತರ ಪೇಜಾವರ ಶ್ರೀ ಹಾಗೂ ವಿಶ್ವಪ್ರಸನ್ನ ತೀರ್ಥ ಸ್ವಾಮಿಜಿಯವರನ್ನು ಭೇಟಿ ಮಾಡಲಿದ್ದಾರೆ. ನಂತರ 12.45ಕ್ಕೆ ಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಪಲಿಮಾರು ಶ್ರೀ ವಿದ್ಯಾಧೀಶ ತೀರ್ಥ ಸ್ವಾಮಿಜಿಯವರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿ ನಿರ್ಗಮಿಸಲಿದ್ದಾರೆ.

ರಾಷ್ಟ್ರಪತಿಗಳ ಭೇಟಿ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಮಾಧ್ಯಮದವರಿಗೆ ಪೇಜಾವರ ಮಠ , ರಥ ಬೀದಿಗೆ ಪ್ರವೇಶ ನಿರ್ಭಂಧಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+