ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ; ಕೃತಕ ಉಸಿರಾಟ ವ್ಯವಸ್ಥೆ

ಉಡುಪಿ, ಡಿಸೆಂಬರ್ 20: ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅವರ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿರುವುದಾಗಿ ಕಸ್ತೂರ ಬಾ ಮಣಿಪಾಲ ಆಸ್ಪತ್ರೆ ವೈದ್ಯರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

ಉಸಿರಾಟದ ತೊಂದರೆಯಿಂದಾಗಿ ಮುಂಜಾನೆ 3 ಗಂಟೆ ಸುಮಾರಿಗೆ ಅವರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದೆ. ಕೂಡಲೇ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ನಂತರ ಮುಂಜಾನೆ ಐದರ ಸುಮಾರಿಗೆ ಪೇಜಾವರ ಶ್ರೀ ಅವರನ್ನು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲಕ್ಕೆ ಕರೆದುಕೊಂಡುಬರಲಾಗಿದೆ. ಅವರ ದೇಹಾರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸದ್ಯ ವೆಂಟಿಲೇಟರ್ ಮೂಲಕ‌ ಕೃತಕ ಉಸಿರಾಟ ವ್ಯವಸ್ಥೆ ಮಾಡಲಾಗಿದೆ.

Pejawara Shree Health Condition IS Serious

ಶ್ರೀಗಳ ಈಗಿನ ಆರೋಗ್ಯಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆಯಲ್ಲಿದ್ದಾರೆ. ಅವರಿಗೆ ನ್ಯುಮೋನಿಯಾಗೆ ಚಿಕಿತ್ಸೆ ನೀಡುತ್ತಾ, ಪ್ರತಿರೋಧಕ ಔಷಧಿ ಮತ್ತು ಸಹಾಯಕ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿಗಳ ಬಗ್ಗೆ ಸೂಚನೆ ನೀಡಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.

Pejawara Shree Health Condition IS Serious
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+