• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ನಾಲ್ಕನೇ ದಿನವೂ ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರ

By ಉಡುಪಿ ಪ್ರತಿನಿಧಿ
|

ಉಡುಪಿ, ಡಿಸೆಂಬರ್ 23: ಅನಾರೋಗ್ಯದಿಂದ ಬಳಲುತ್ತಿರುವ ಪೇಜಾವರ ಶ್ರೀಗಳಿಗೆ ಕೆಎಂಸಿ ಆಸ್ಪತ್ರೆಯಲ್ಲಿ ಕಳೆದ ಮೂರು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಆಸ್ಪತ್ರೆಯ ವೈದ್ಯರು ಏಳನೇ ಪ್ರಕಟಣೆ ಹೊರಡಿಸಿದ್ದು, ಸ್ವಾಮೀಜಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ನಿರಂತರ ಚಿಕಿತ್ಸೆ ನೀಡುತ್ತಿರುವುದರಿಂದ ಸ್ಥಿರವಾಗಿರುವುದಾಗಿ ತಿಳಿಸಿದ್ದಾರೆ.

ಪೇಜಾವರ ಶ್ರೀಗಳು ಕೆಎಂಸಿ ಆಸ್ಪತ್ರೆಗೆ ದಾಖಲಾಗಿ ಇಂದಿಗೆ ನಾಲ್ಕು ದಿನಗಳಾಗಿವೆ. ನಾಲ್ಕು ದಿನಗಳ ಬಳಿಕವೂ ಅವರ ಸ್ಥಿತಿ ಹಾಗೇ ಮುಂದುವರೆದಿದೆ. ಶ್ರೀಗಳು ವೆಂಟಿಲೇಟರ್ ಮೂಲಕ ಉಸಿರಾಡುತ್ತಿದ್ದು, ಸ್ವತಃ ಉಸಿರಾಡಲು ಪ್ರಯತ್ನಿಸುತ್ತಿರುವುದಾಗಿ ವೈದ್ಯಕೀಯ ಅಧೀಕ್ಷಕರು ಮಾಹಿತಿ ನೀಡಿದ್ದಾರೆ. ಈ ನಡುವೆ

ಪೇಜಾವರ ಶ್ರೀ ಚಿಕಿತ್ಸಾ ಕ್ರಮ ಬದಲು ಮಾಡಲಾಗಿದೆ. ಚಿಕಿತ್ಸಾ ವಿಧಾನ ಬದಲಿಸಿ ನೋಡಲು ಮುಂದಾಗಿದ್ದು, ಈ ಕುರಿತು ಕಿರಿಯ ಶ್ರೀಗಳ ಜೊತೆ ವೈದ್ಯರ ತಂಡ ಚರ್ಚೆ ಮಾಡಿದೆ. ಕಫ ಕರಗಿಸಲು ಹೆಚ್ಚಿನ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

"ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಆರೋಗ್ಯ ಸ್ಥಿರ"

ಪೇಜಾವರ ಮಠಾಧೀಶ ವಿಶ್ವೇಶತೀರ್ಥ ಸ್ವಾಮೀಜಿ ಉಸಿರಾಟ ತೊಂದರೆಯಿಂದ ಬಳಲುತ್ತಿದ್ದು, ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಕೆಎಂಸಿ ವೈದ್ಯಕೀಯ ಅಧೀಕ್ಷಕರಿಗೆ ಕರೆ ಮಾಡಿ ಸ್ವಾಮೀಜಿಗಳ ಆರೋಗ್ಯದ ಕುರಿತು ವಿಚಾರಿಸಿದ್ದಾರೆ. ಇನ್ನೊಂದೆಡೆ ಭಕ್ತರಿಂದ ಪೂಜೆ ಪುನಸ್ಕಾರಗಳೂ ಮುಂದುವರೆದಿವೆ. ಇವತ್ತು ಪೇಜಾವರರ ಶಿಷ್ಯೆ, ಮಾಜಿ ಸಿಎಂ ಉಮಾಭಾರತಿ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ. ಮದ್ಯಾಹ್ನದ ನಂತರ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರೂ ಆಸ್ಪತ್ರೆಗೆ ಧಾವಿಸುತ್ತಿದ್ದಾರೆ.

English summary
Pejawara Shree Health Still Continues To Be Critical
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X