ಪೇಜಾವರ ಶ್ರೀಗಳಿಗೆ ಪಿತೃ ವಿಯೋಗ, ತುಳು ಲಿಪಿಯ ಪಂಚಾಂಗ ಕರ್ತೃ ನಿಧನ

ಉಡುಪಿ, ನವೆಂಬರ್‌, 06: ದಕ್ಷಿಣ ಕನ್ನಡ ಜಿಲ್ಲೆಯ ಹಳೆಯಂಗಡಿ ಬಳಿಯ ಪಕ್ಷಿಕೆರೆಯಲ್ಲಿ ಪೇಜಾವರ ಮಠದ ಮಠಾಧಿಪತಿಗಳಾದ ಶ್ರೀ ಶ್ರೀವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರ ಪೂರ್ವಾಶ್ರಮದ ತಂದೆಯವರಾದ ಅಂಗಡಿಮಾರು ಕೃಷ್ಣಭಟ್ಟ (103) ವಿಧಿವಶರಾಗಿದ್ದಾರೆ.

ಅಂಗಡಿಮಾರು ಕೃಷ್ಣಭಟ್ಟ ಅವರು ಐವರು ಪುತ್ರರು, 6 ಪುತ್ರಿಯರು, ಬಂಧುವರ್ಗದಿಂದ ಅಗಲಿದ್ದಾರೆ. ಅಂಗಡಿಮಾರು ಕೃಷ್ಣಭಟ್ಟ ಅವರು ಹಿರಿಯ ವಿದ್ವಾಂಸ, ತುಳು ಲಿಪಿ ತುಳು ಸೌರ ಪಂಚಾಂಗ ಕರ್ತೃರಾಗಿದ್ದರು.

Pejevar Vishveshateertha Swamijis father passed away

ಅಂಗಡಿಮಾರ್ ಕೃಷ್ಣಭಟ್ ಹಳೆಯಂಗಡಿ ಸಮೀಪದ ಪಕ್ಷಿಕೆರೆಯಲ್ಲಿರುವ ಪುತ್ರ ವಿಶ್ವೇಶ್ವರ ಭಟ್ ಅವರ ಮನೆಯಲ್ಲಿ ನಿನ್ನೆ ರಾತ್ರಿ ನಿಧನ ಹೊಂದಿದರು. ಅವರಿಗೆ 103 ವರ್ಷ ವಯಸ್ಸಾಗಿತ್ತು. ಸಾಂಪ್ರದಾಯಿಕ ಕೃಷಿಕರೂ, ವೈದಿಕ ವಿದ್ವಾಂಸರೂ ಆಗಿದ್ದ ದಿವಂಗತರು ತುಳು ಲಿಪಿಕಾರರಾಗಿ, ಪಂಚಾಂಗ ಕರ್ತರಾಗಿ ಅನೇಕ ಕನ್ನಡ ಹಾಗೂ ತುಳು ಭಜನೆ, ಪ್ರಾರ್ಥನಾ ಶ್ಲೋಕಗಳನ್ನು ರಚಿಸುವ ಮೂಲಕ ಸಾರಸ್ವತ ಲೋಕಕ್ಕೆ ತನ್ನದೇ ಆದ ಕೊಡುಗೆ ನೀಡಿದ್ದರು.

ಐದು ವೇದಗಳನ್ನು ಅಧ್ಯಯನ ಮಾಡಿರುವ ಇವರು ಸಂಹಿತಾ ಯಾಗಗಳು, ಮತ್ತಿನ್ನಿತರ ಯಾಗಗಳನ್ನು ಮಾಡಿರುವ ಸಾಧಕರೆನಿಸಿದ್ದರು. ದಶಕಗಳ ಹಿಂದೆ ಪತ್ನಿ ಯಮುನಾ ಭಟ್ ಅವರನ್ನು ಕಳೆದುಕೊಂಡಿದ್ದ ಇವರು ತನ್ನ 8ನೇ ಪುತ್ರ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಅವರ ಸಹಿತ ಐದು ಮಂದಿ ಪುತ್ರರು ಹಾಗೂ ಏಳು ಮಂದಿ ಪುತ್ರಿಯರನ್ನು ಅಲ್ಲದೇ ಅಪಾರ ಅಭಿಮಾನಿಗಳನ್ನು ಅಗಲಿರುವರು.

ಇವರು ಗೈದಿರುವ ಜೀವಮಾನ ಸಾಧನೆಗಾಗಿ ಕೃಷ್ಣಾನುಗ್ರಹ ಪ್ರಶಸ್ತಿ, ಕಲ್ಕೂರ ಪ್ರತಿಷ್ಠಾನದಿಂದ ನೀಡಲಾದ ಪೇಜಾವರ ಶ್ರೀ ಜೀವಮಾನ ಪ್ರಶಸ್ತಿ, ಬ್ರಾಹ್ಮಣರ ಸಮ್ಮೇಳನದ ಗೌರವ ಪುರಸ್ಕಾರ ಸಹಿತ ಅನೇಕಾನೇಕ ಗೌರವಾಭಿನಂದನೆಳು ಪ್ರಾಪ್ತವಾಗಿವೆ. ಇನ್ನು ಇಂದು ಮಧ್ಯಾಹ್ನ 12ಕ್ಕೆ ಪಕ್ಷಿಕೆರೆಯ ಪುತ್ರನ ಮನೆಯಲ್ಲಿ ಅಂತ್ಯಕ್ರಿಯೆ ಜರಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+