ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮನೆ ಬಾಗಿಲಿಗೆ ಪಿಂಚಣಿ; ಉಡುಪಿಯಲ್ಲಿ ಪಾಯೋಗಿಕವಾಗಿ ಜಾರಿ

|
Google Oneindia Kannada News

ಉಡುಪಿ, ಜನವರಿ 19 : ಪಿಂಚಣಿಯನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯನ್ನು ಉಡುಪಿ ಜಿಲ್ಲೆಯಲ್ಲಿ ಜಾರಿಗೊಳಿಸಲಾಗುತ್ತಿದೆ. ಸಮೀಕ್ಷೆಗಳ ಮೂಲಕ 1, 938 ಫಲಾನುಭವಿಗಳನ್ನು ಜಿಲ್ಲೆಯಲ್ಲಿ ಗುರುತಿಸಲಾಗಿದೆ.

ಪಿಂಚಣಿಯನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಆರು ತಿಂಗಳ ಕಾಲ ಯೋಜನೆಯನ್ನು ಜಾರಿಗೊಳಿಸಿ ಸಾಧಕ-ಬಾಧಕಗಳನ್ನು ಅಧ್ಯಯನ ನಡೆಸಿ, ಉಳಿದ ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ.

ಆಸಿಡ್ ದಾಳಿ ಸಂತ್ರಸ್ತೆಯರಿಗೆ ಉತ್ತರಾಖಂಡ್ ಸರ್ಕಾರದಿಂದ ಮಾಸಿಕ ಪಿಂಚಣಿಆಸಿಡ್ ದಾಳಿ ಸಂತ್ರಸ್ತೆಯರಿಗೆ ಉತ್ತರಾಖಂಡ್ ಸರ್ಕಾರದಿಂದ ಮಾಸಿಕ ಪಿಂಚಣಿ

ಉಡುಪಿಯಲ್ಲಿ ಗ್ರಾಮ ಲೆಕ್ಕಿಗರಿಂದ ಸಮೀಕ್ಷೆ ನಡೆಸಿ 1, 938 ಫಲಾನುಭವಿಗಳನ್ನು ಗುರುತಿಸಲಾಗಿದೆ. ಕಂದಾಯ ಇಲಾಖೆಯು ಅರ್ಹ ಫಲಾನುಭವಿಗಳ ಪರವಾಗಿ ಸುಮೊಟೋ ಅರ್ಜಿ ಸಲ್ಲಿಸಿದ ಬಳಿಕ ಅವರ ಮನೆ ಬಾಗಿಲಿಗೆ ಅಂಚೆಯ ಮೂಲಕ ಪಿಂಚಣಿ ಪತ್ರ ಪಡೆಯುವಂತೆ ಸೂಚನೆ ಕಳಿಸಲಾಗುತ್ತದೆ.

ಪಿಂಚಣಿ ಹಣ: ಅರುಣ್ ಜೇಟ್ಲಿ ಪತ್ನಿ ಸಂಗೀತಾ ಜೇಟ್ಲಿ ಮಹತ್ವದ ನಿರ್ಧಾರಪಿಂಚಣಿ ಹಣ: ಅರುಣ್ ಜೇಟ್ಲಿ ಪತ್ನಿ ಸಂಗೀತಾ ಜೇಟ್ಲಿ ಮಹತ್ವದ ನಿರ್ಧಾರ

Udupi

ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನಕ್ಕಾಗಿ ಅರ್ಜಿ ಆಹ್ವಾನಿಸುವುದಿಲ್ಲ. ಆಧಾರ್ ಕಾರ್ಡ್, ವಾರ್ಷಿಕ ವರಮಾನದ ಆಧಾರದಲ್ಲಿ ಸರ್ಕಾರವೇ ಪಿಂಚಣಿಗೆ ಅರ್ಹರನ್ನು ಗುರುತಿಸಿ ಮನೆ ಬಾಗಿಲಿಗೆ ಪಿಂಚಣಿ ತಲುಪಿಸಲಾಗುತ್ತದೆ.

ಸರ್ಕಾರಿ ನೌಕರರ ಪಿಂಚಣಿ ಸೇವೆಗಳ ನಿಯಮಗಳಲ್ಲಿ ಬದಲಾವಣೆಸರ್ಕಾರಿ ನೌಕರರ ಪಿಂಚಣಿ ಸೇವೆಗಳ ನಿಯಮಗಳಲ್ಲಿ ಬದಲಾವಣೆ

ಕಂದಾಯ ಸಚಿವ ಆರ್. ಅಶೋಕ ಈ ಕುರಿತು ಮಾಹಿತಿ ನೀಡಿದ್ದಾರೆ. "ಮನೆ ಬಾಗಿಲಿಗೆ ತೆರಳಿ ಪಿಂಚಣಿ ವಿತರಣೆ ಯೋಜನೆಯನ್ನು ಉಡುಪಿ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದೆ. ಆರು ತಿಂಗಳ ಹಿಂದೆ ಯೋಜನೆ ಕಾರ್ಯ ಆರಂಭವಾಗಿದೆ" ಎಂದು ಹೇಳಿದ್ದಾರೆ.

ಸಾಮಾಜಿಕ ಭದ್ರತೆಯ ವಿವಿಧ ಯೋಜನೆಗಾಗಿ ಸರ್ಕಾರ ವಾರ್ಷಿಕ 7,500 ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಆದರೆ, ಅರ್ಹ ಫಲಾನುಭವಿಗಳಿಗೆ ತಲುಪುವ ಮೊದಲು ಮಧ್ಯವರ್ತಿಗಳ ಕೈಗೆ ಪಿಂಚಣಿ ಹೋಗುತ್ತಿದೆ. ಆದ್ದರಿಂದ ಮನೆ ಬಾಗಿಲಿಗೆ ಪಿಂಚಣಿ ತಲುಪಿಸುವ ಯೋಜನೆ ಜಾರಿಗೆ ತರಲಾಗುತ್ತಿದೆ.

English summary
People will get pension on door step. Pilot project will implement in Udupi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X