ಉಡುಪಿ; ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ, ಆಕ್ರೋಶ

ಉಡುಪಿ, ಮೇ 26; ಸುಮಾರು ಎರಡು ವರ್ಷಗಳ ಹಿಂದೆ ಪ್ಲಾಸ್ಟಿಕ್ ಅಕ್ಕಿಯ ಬಗ್ಗೆ ದೊಡ್ಡ ಸುದ್ದಿಯಾಗಿತ್ತು. ಕರ್ನಾಟಕ ಸರಕಾರದ ಆಹಾರ ಇಲಾಖೆ ಮೂಲಕ ವಿತರಣೆ ಮಾಡುವ ಪಡಿತರ ಅಕ್ಕಿಯಲ್ಲಿ ಕಲಬೆರಕೆ ಕುರಿತು ಈ ಹಿಂದೆ ಸಾಕಷ್ಟು ಚರ್ಚೆ ನಡೆದಿತ್ತು.

ಇದೇ ಮೊದಲ ಬಾರಿ ಉಡುಪಿ ಜಿಲ್ಲೆಯಲ್ಲಿ ಪಡಿತರ ಅಕ್ಕಿಯ ಜೊತೆ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಬೆಳ್ಮಣ್ ಪಂಚಾಯತ್ ವ್ಯಾಪ್ತಿಯ ಪಡಿತರ ಅಂಗಡಿಯಲ್ಲಿ ವಿತರಣೆಯಾದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸಿಕ್ಕಿದೆ.

ಸರಕಾರದಿಂದ ಉಚಿತವಾಗಿ ನೀಡಲಾಗಿರುವ ಬೆಳ್ಳಗಿನ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಇದನ್ನು ನೋಡಿದ ಗ್ರಾಮಸ್ಥರು ಕಂಗಾಲಾಗಿ ಗ್ರಾಮ ಪಂಚಾಯತ್‌ಗೆ ದೂರು ನೀಡಿದ್ದಾರೆ.

Plastic Rice Found In Udupi Ration Shop People Seeks Probe

ಅಕ್ಕಿಯನ್ನು ತೆಗೆದುಕೊಂಡು ಹೋದ ಗ್ರಾಮದ ಜನರು ಅಕ್ಕಿಯನ್ನು ನೀರಿನಲ್ಲಿ ತೊಳೆಯುವಾಗ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ. ಸದ್ಯ ಅಧಿಕಾರಿಗಳಿಗೂ ಅಕ್ಕಿಯನ್ನು ಪರಿಶೀಲಿಸಿದಾಗ ಅದು ಪ್ಲಾಸ್ಟಿಕ್ ಅಕ್ಕಿಯೇ ಇರಬಹುದು ಎನ್ನುವ ಅನುಮಾನ ವ್ಯಕ್ತವಾಗಿದೆ.

ಪ್ಲಾಸ್ಟಿಕ್ ಅಕ್ಕಿ ಪತ್ತೆಯಾದರೆ ಅದನ್ನು ವಾಪಸ್ ನೀಡುವಂತೆ ಅಧಿಕಾರಿಗಳು ಜನರಿಗೆ ಮನವಿ ಮಾಡಿದ್ದಾರೆ. ಕಾರ್ಕಳ ತಹಶೀಲ್ದಾರ್ ಪುರಂದರ ಹೆಗ್ಡೆ ಪಡಿತರ ಅಂಗಡಿಗೆ ಭೇಟಿ ನೀಡಿ ಅಕ್ಕಿ ದಾಸ್ತಾನು ಪರಿಶೀಲನೆ ನಡೆಸಿದರು. ಸುಮಾರು 10 ಗ್ರಾಂ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ.

"8 ದಿನಗಳ ಹಿಂದೆ ಒಂದಿಬ್ಬರು ಗ್ರಾಹಕರಿಗೆ ವಿತರಣೆ ಮಾಡಿದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ದೊರೆತಿದ್ದು, ಈ ಕುರಿತು ತಕ್ಷಣ ಆಹಾರ ನಿರೀಕ್ಷಕರಿಗೆ ದೂರು ನೀಡಲಾಗಿದೆ. ಒಂದು ಗೋಣಿ ಚೀಲದಲ್ಲಿ ಇಂತಹ ಅಕ್ಕಿ ಪತ್ತೆಯಾಗಿದೆ. ಪ್ಲಾಸ್ಟಿಕ್ ಅಕ್ಕಿ ಪತ್ತೆಯಾದರೆ ತಕ್ಷಣ ವಾಪಸ್ ನೀಡಬೇಕು" ಎಂದು ಬೆಳ್ಮಣ್ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ನಿತ್ಯಾನಂದ ಶೆಟ್ಟಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+