• search
  • Live TV
ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನರೇಂದ್ರ ಮೋದಿ ಮಂಗಳೂರು ಭೇಟಿ; ಸರ್ಕಾರಿ ಬಸ್ ಸಂಚಾರದಲ್ಲಿ ವ್ಯತ್ಯಯ

|
Google Oneindia Kannada News

ಉಡುಪಿ, ಆಗಸ್ಟ್ 31; ಭಾರತದ ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ, ಜನರು ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಸೆಪ್ಟಂಬರ್ 2ರ ಶುಕ್ರವಾರ ಮಂಗಳೂರಿನಲ್ಲಿ ವಿವಿಧ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಾರೆ. ಮಂಗಳೂರಿನಲ್ಲಿ ನಡೆಯುವ ಸಮಾವೇಶದಲ್ಲಿಯೂ ಮೋದಿ ಪಾಲ್ಗೊಳ್ಳಲಿದ್ದಾರೆ.

 ಸೆ.2ಕ್ಕೆ ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಎಸ್‌ಪಿಜಿಯಿಂದ ಭದ್ರತೆ ಪರಿಶೀಲನೆ ಸೆ.2ಕ್ಕೆ ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಎಸ್‌ಪಿಜಿಯಿಂದ ಭದ್ರತೆ ಪರಿಶೀಲನೆ

ಸಮಾವೇಶದ ಹಿನ್ನಲೆಯಲ್ಲಿ ವಿವಿಧ ಭಾಗಗಳಿಂದ ಕೇಂದ್ರ ಸರ್ಕಾರದ ಫಲಾನುಭವಿಗಳನ್ನು ಕರೆತರಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ವತಿಯಿಂದ ಹೆಚ್ಚಿನ ಸಂಖ್ಯೆಯ ಬಸ್ಸುಗಳನ್ನು ನಿಯೋಜನೆ ಮಾಡಲಾಗುತ್ತದೆ.

 ಮಂಗಳೂರಿನಲ್ಲಿ ಮೋದಿ ಕಾರ್ಯಕ್ರಮ: ಮೈದಾನದ ಸುತ್ತಮುತ್ತಲಿನ ಟೆಂಟ್‌ಗಳ ಎತ್ತಂಗಡಿ ಮಂಗಳೂರಿನಲ್ಲಿ ಮೋದಿ ಕಾರ್ಯಕ್ರಮ: ಮೈದಾನದ ಸುತ್ತಮುತ್ತಲಿನ ಟೆಂಟ್‌ಗಳ ಎತ್ತಂಗಡಿ

ಈ ಹಿನ್ನಲೆಯಲ್ಲಿ ಮಂಗಳೂರು ವಿಭಾಗ ವ್ಯಾಪ್ತಿಯ ಮಂಗಳೂರು ತಾಲೂಕು, ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡು, ಉಡುಪಿ, ಕಾರ್ಕಳ, ಬೈಂದೂರು, ಕುಂದಾಪುರ, ಭಟ್ಕಳ ವ್ಯಾಪ್ತಿಯಲ್ಲಿ ಸಂಚಾರ ನಡೆಸುವ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಜನರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಸಹಕಾರ ನೀಡಬೇಕು ಎಂದು ಕೋರಲಾಗಿದೆ.

 ಮೋದಿ ಮಂಗಳೂರು ಭೇಟಿ: 30 ಎಕರೆಯಲ್ಲಿ ಸಮಾವೇಶ, ಬರದಿಂದ ಸಾಗುತ್ತಿರುವ ಸಿದ್ಧತೆ ಮೋದಿ ಮಂಗಳೂರು ಭೇಟಿ: 30 ಎಕರೆಯಲ್ಲಿ ಸಮಾವೇಶ, ಬರದಿಂದ ಸಾಗುತ್ತಿರುವ ಸಿದ್ಧತೆ

ಪ್ರಧಾನಿ ನರೇಂದ್ರ ಮೋದಿ ಭದ್ರತೆ ನೋಡಿಕೊಳ್ಳುವ ಎಸ್‌ಪಿಜಿ ಅಧಿಕಾರಿಗಳು ಈಗಾಗಲೇ ಮಂಗಳೂರಿಗೆ ಆಗಮಿಸಿ ಒಂದು ಸುತ್ತಿನ ಪರಿಶೀಲನೆ ಮುಗಿಸಿದ್ದಾರೆ. ಪೊಲೀಸ್ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದ್ದಾರೆ.

ಮಂಗಳೂರಿನಲ್ಲಿ ಮೋದಿ ಕಾರ್ಯಕ್ರಮ

ಮಂಗಳೂರಿನಲ್ಲಿ ಮೋದಿ ಕಾರ್ಯಕ್ರಮ

ಸೆಪ್ಟೆಂಬರ್ 2ರ ಶುಕ್ರವಾರ ನರೇಂದ್ರ ಮೋದಿ ಮಂಗಳೂರಿಗೆ ಭೇಟಿ ನೀಡಲಿದ್ದಾರೆ. 12.55ಕ್ಕೆ ವಿಶೇಷ ವಿಮಾನದಲ್ಲಿ ಮೋದಿ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮಧ್ಯಾಹ್ನ 1.30ಕ್ಕೆ ಸಭಾ ಕಾರ್ಯಕ್ರಮ ನಡೆಯುವ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿ ಮೈದಾನಕ್ಕೆ ಆಗಮಿಸುತ್ತಾರೆ. ಸಂಜೆ 4.20ಕ್ಕೆ ಮಂಗಳೂರಿನಿಂದ ಮೋದಿ ವಾಪಸ್ ಆಗಲಿದ್ದಾರೆ.

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ

ಪ್ರಧಾನಿ ನರೇಂದ್ರ ಮೋದಿ ಮಂಗಳೂರು ಭೇಟಿ ಹಿನ್ನಲೆಯಲ್ಲಿ ಕೇಂದ್ರ ಬಂದರು, ಹಡಗು, ಜಲಮಾರ್ಗ ಸಚಿವರಾದ ಸರ್ಬಾನಂದ ಸೋನೋವಾಲ್ ಗೋಲ್ಡ್ ಫಿಂಚ್ ಮೈದಾನದಲ್ಲಿ ಕಾರ್ಯಕ್ರಮದ ಸಿದ್ಧತೆ ಪರಿಶೀಲನೆ ನಡೆಸಿದರು. ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಶಾಸಕರಾದ ವೈ. ಭರತ್ ಶೆಟ್ಟಿ, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದರು.

3,783 ಕೋಟಿ ಮೊತ್ತದ ಯೋಜನೆಗೆ ಚಾಲನೆ

3,783 ಕೋಟಿ ಮೊತ್ತದ ಯೋಜನೆಗೆ ಚಾಲನೆ

ಮಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ 3,783 ಕೋಟಿ ರೂ. ಮೊತ್ತದ ಯೋಜನೆಗೆ ಚಾಲನೆ ನೀಡಲಿದ್ದಾರೆ. ಎನ್‌ಎಂಪಿಎ ಬಂದರಿನಲ್ಲಿ ಕಂಟೈನರ್ ಹಾಗೂ ಇತರ ಸರಕುಗಳನ್ನು ನಿರ್ವಹಣೆ ಮಾಡುವ 14ನೇ ಸಂಖ್ಯೆಯದಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ. ಈ ಯೋಜನೆಯ ಮೊತ್ತ 281 ಕೋಟಿ ರೂ.ಗಳು.

ಎಲ್‌ಪಿಜಿ ಮತ್ತು ಬಲ್ಕ್ ದ್ರವ ಪಿಒಎಲ್ ಘಟಕ ಶಂಕುಸ್ಥಾಪನೆ, ಖಾದ್ಯ ತೈಲ ಸಂಸ್ಕರಣೆ & ಸಂಗ್ರಹ ಘಟಕಕ್ಕೆ ಶಂಕುಸ್ಥಾಪನೆ, ಸಮುದ್ರ ನೀರಿನಿಂದ ಉಪ್ಪನ್ನು ಬೇರ್ಪಡಿಸಿ ಶುದ್ದೀಕರಿಸಿವ ಘಟಕದ ನಿರ್ಮಾಣಕ್ಕೂ ಮೋದಿ ಚಾಲನೆ ನೀಡಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಸಭೆ

ಜಿಲ್ಲಾ ಉಸ್ತುವಾರಿ ಸಚಿವರ ಸಭೆ

ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಮಂಗಳೂರು ಬಿಜೆಪಿ ಘಟಕ ಸಜ್ಜಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಅಧಿಕಾರಿಗಳ ಜೊತೆ ಮಂಗಳವಾರ ಪೂರ್ವಭಾವಿ ಸಭೆ ನಡೆಸಿದರು. ಈ ಸಭೆಯಲ್ಲಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವೈ. ಭರತ್ ಶೆಟ್ಟಿ, ವೇದವ್ಯಾಸ್ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು, ಮಂಗಳೂರು ಪೊಲೀಸ್ ಆಯುಕ್ತರು ಪಾಲ್ಗೊಂಡಿದ್ದರು.

ಪ್ರಧಾನಿ ಮೋದಿ ಭೇಟಿ ಹಿನ್ನಲೆಯಲ್ಲಿ ಮಂಗಳೂರು ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅಂದು ಗಣೇಶ ವಿಸರ್ಜನೆ ಶೋಭಾಯಾತ್ರೆಗಳು ನಗರದಲ್ಲಿ ನಡೆಯಲಿವೆ. ಈ ಹಿನ್ನಲೆಯಲ್ಲಿ ಜನದಟ್ಟಣೆ ಉಂಟಾಗುವ ಕಾರಣ ರಜೆ ಘೋಷಣೆ ಮಾಡಲಾಗಿದೆ.

ನರೇಂದ್ರ ಮೋದಿ
Know all about
ನರೇಂದ್ರ ಮೋದಿ
English summary
Karnataka State Road Transport Corporation(KSRTC) bus service may disturbed in Udupi and Mangaluru on September 2nd due to prime minister Narendra Modi visit.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X