ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಣಿಪಾಲದ ವಿದ್ಯಾರ್ಥಿ ಬಂಧನ

ಉಡುಪಿ, ಅಕ್ಟೋಬರ್ 5: ಉಡುಪಿ ಐಎಸ್ ಡಿ ಪೊಲೀಸರು ಮತ್ತು ಮಣಿಪಾಲ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಮಣಿಪಾಲದ ಶೀಂದ್ರಾ ಬ್ರಿಡ್ಜ್ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಮಣಿಪಾಲ ಎಂಐಟಿ ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ.

ಬಂಧಿತನನ್ನು ಹಿಮಾಂಶು ಜೋಶಿ ಎಂದು ಗುರುತಿಸಲಾಗಿದೆ. ಈತನಿಂದ 14,94,000 ಮೌಲ್ಯದ ಒಟ್ಟು 498 ನಿಷೇಧಿತ ನಿದ್ರಾಜನಕ ಮಾತ್ರೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯು ಮಣಿಪಾಲ ಎಂಐಟಿ ಕಾಲೇಜಿನ ವಿದ್ಯಾರ್ಥಿ ಆಗಿದ್ದಾನೆ. ಈತ ದ್ವಿಚಕ್ರ ವಾಹನದಲ್ಲಿ ಶೀಂಬ್ರಾ ಬ್ರಿಡ್ಜ್ ಬಳಿ ನಿಷೇಧಿತ ಮಾತ್ರೆಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದಾಗ ಭಾನುವಾರ, ಅ.5ರಂದು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ ಒಂದು ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನನ್ನು ವಶಪಡಿಸಿಕೊಳ್ಳಲಾಗಿದೆ.

Udupi: Police Arrested Manipal Student who Was Selling Drug

ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ್ ಚಂದ್ರ ಅವರ ಮಾರ್ಗದರ್ಶನದಲ್ಲಿ ಉಡುಪಿ ಐಎಸ್ ಡಿ ಘಟಕ ಪೊಲೀಸ್ ನಿರೀಕ್ಷಕ ಪಿ ಎಸ್ ಮಧು, ಉಡುಪಿ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಟಿ ಆರ್ ಜೈಶಂಕರ್ , ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್ ಎಂ ಗೌಡ, ಪೊಲೀಸ್ ಉಪನಿರೀಕ್ಷಕ ರಾಜ್ ಶೇಖರ್ ವಂದಿ, ಉಡುಪಿ ಆಸಿಸ್ಟೆಂಟ್ ಡ್ರಗ್ ಕಂಟ್ರೋಲರ್ ನಾಗರಾಜ್ ಮತ್ತಿತರರು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+