ಉಡುಪಿ; ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಪರಾರಿಯಾಗಿದ್ದ ವ್ಯಕ್ತಿ ಬಂಧನ
ಉಡುಪಿ, ಅಕ್ಟೋಬರ್ 27: ಉಡುಪಿಯಲ್ಲಿ, ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ತಂದು ಬಿಟ್ಟು, ನಂತರ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸಿದ್ದಾರೆ.
ಅ.24ರ ಶನಿವಾರ ಸಂಜೆ ಪ್ರಶಾಂತ್ ಕುಂದರ್ ಎಂಬ ಯುವಕ ಆಟೋದಲ್ಲಿ ಖಾಸಗಿ ಆಸ್ಪತ್ರೆಗೆ ರಕ್ಷಿತಾ ನಾಯಕ್ ಎಂಬ ಯುವತಿಯನ್ನು ಕರೆತಂದಿದ್ದ. ಆಸ್ಪತ್ರೆಗೆ ದಾಖಲಾದ ಕೆಲವೇ ಹೊತ್ತಿನಲ್ಲಿ ರಕ್ಷಿತಾ ಮೃತಪಟ್ಟಿದ್ದಳು. ಈ ವಿಷಯವನ್ನು ಪ್ರಶಾಂತ್ ಆಕೆಯ ಮನೆಯವರಿಗೆ ತಿಳಿಸಿ, ನಂತರ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದ. ರಕ್ಷಿತಾ ನಾಯಕ್, ಹಿರಿಯಡ್ಕ ಪೊಲೀಸ್ ಠಾಣೆ ವ್ಯಾಪ್ತಿಯ ಕುಕ್ಕೇಹಳ್ಳಿ ಗ್ರಾಮದ ದ್ವಿತೀಯ ವರ್ಷದ ಬಿಕಾಂ ಪದವಿ ವಿದ್ಯಾರ್ಥಿನಿ. ಕೊಲ್ಲೂರು ಬಳಿಯ ಜಡ್ಕಲ್ ಮೂಲದ ಪ್ರಶಾಂತ್ ಕುಂದರ್ ಆಕೆಯನ್ನು ಆಟೋ ರಿಕ್ಷಾದಲ್ಲಿ ಆಸ್ಪತ್ರೆಗೆ ಕರೆತಂದು ಬಳಿಕ ನಾಪತ್ತೆಯಾಗಿದ್ದ.

ನಂತರ ಯುವತಿ ಮನೆಯವರು, ತಮ್ಮ ಮಗಳು ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ ಎಂದು ದೂರು ನೀಡಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಪೊಲೀಸರು ನಿನ್ನೆ, ಅ.27ರಂದು ವಶಕ್ಕೆ ಪಡೆದಿದ್ದಾರೆ. ರಕ್ಷಿತಾ ಮರಣೋತ್ತರ ಪರೀಕ್ಷೆಯನ್ನು ಭಾನುವಾರ ರಾತ್ರಿ ನಡೆಸಲಾಗಿದ್ದು, ರಕ್ಷಿತಾಳ ದೇಹದಲ್ಲಿ ಆಲ್ಕೋಹಾಲ್ ಅಂಶ ಹಾಗೂ ಆಕೆಯ ಕುತ್ತಿಗೆ ರಕ್ತ ಹೆಪ್ಪುಗೆಟ್ಟಿದ ಗುರುತುಗಳು ಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದೆ.
ಪ್ರಶಾಂತ್ ಕುಂದರ್ ಗೆ ಈಗಾಗಲೇ ಮದುವೆಯಾಗಿತ್ತು. ರಕ್ಷಿತಾ, ಪ್ರಶಾಂತ್ ನಡುವಿನ ಸಂಬಂಧ ಏನು? ಯುವತಿಯ ಸಾವಿಗೆ ಕಾರಣವೇನು ಎಂಬುದು ಮಾತ್ರ ಇನ್ನೂ ತಿಳಿದುಬಂದಿಲ್ಲ.
Recommended Video
-
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ












Click it and Unblock the Notifications