ಕಂಟೇನರ್ ಲಾರಿಯಲ್ಲಿ ಗಾಂಜಾ ಸಾಗಾಟ: ಉಡುಪಿಯಲ್ಲಿ ಇಬ್ಬರ ಬಂಧನ
ಉಡುಪಿ, ಆಗಸ್ಟ್ 22: ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೇರೂರಿನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಉತ್ತರ ಪ್ರದೇಶದಿಂದ ಬಂದಿದ್ದ ಕಂಟೇನರ್ ಲಾರಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಪಡೆದ ಡಿಸಿಐಬಿ ಪೊಲೀಸರು 49 ಕೆ.ಜಿ ಗಾಂಜಾ ವಶಪಡಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಉತ್ತರಪ್ರದೇಶದಿಂದ ಬಂದಿದ್ದ ಕಂಟೇನರ್ ಲಾರಿಯಲ್ಲಿ ಬಿದಿರಿನ ಒಳಗೆ ಅಪಾರ ಪ್ರಮಾಣದ ಗಾಂಜಾವನ್ನು ಸಾಗಿಸಲಾಗುತ್ತಿತ್ತು. ಲಾರಿಯಲ್ಲಿ ಲಾರಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರು.

ರಾಶಿ ರಾಶಿ ಬಿದಿರು ಕೋಲಿನ ಮಧ್ಯೆ ಆರೋಪಿಗಳು ಗಾಂಜಾ ಸಾಗಣೆ ಮಾಡುತ್ತಿದ್ದುದನ್ನು ನೋಡಿ ಬೆಚ್ಚಿ ಬೀಳುವ ಸರದಿ ಪೊಲೀಸರದ್ದಾಗಿತ್ತು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.












Click it and Unblock the Notifications