ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ಕಶ ಸೈಲೆನ್ಸರ್ ಮೇಲೆ ರೋಡ್ ರೋಲರ್ ಹತ್ತಿಸಿದ ಪೊಲೀಸರು!

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಫೆಬ್ರವರಿ 5; ಉಡುಪಿ ಮಣಿಪಾಲ ವ್ಯಾಪ್ತಿಯಲ್ಲಿ ಕರ್ಕಶ ಶಬ್ದ ಹೊರಡಿಸುತ್ತಾ ಶಬ್ದ ಮಾಲಿನ್ಯ ಉಂಟು ಮಾಡುವ ದ್ವಿಚಕ್ರ ಸವಾರರ ವಿರುದ್ಧ ಮಣಿಪಾಲ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.

ಅತಿಯಾದ ಶಬ್ದ ಉಂಟು ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ 50 ದ್ವಿ ಚಕ್ರ ವಾಹನದ ಲೆನ್ಸರ್ ಗಳನ್ನು ಕಿತ್ತು, ಅದರ ಮೇಲೆ ರೋಡ್ ರೋಲರ್ ಚಲಾಯಿಸಿ ಅನುಪಯುಕ್ತಗೊಳಿಸಲಾಯಿತು.

ಜನವರಿ 18ರಿಂದ ಫೆಬ್ರವರಿ 17ರ ತನಕ ರಸ್ತೆ ಸುರಕ್ಷತಾ ಸಪ್ತಾಹ ಅಡಿಯಲ್ಲಿ 'ಸಡಕ್ ಸುರಕ್ಷಾ - ಜೀವನ್ ಸುರಕ್ಷಾ' ಎಂಬ ಧ್ಯೇಯ ವಾಕ್ಯದೊಂದಿಗೆ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸವನ್ನು ಮಣಿಪಾಲ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಜಾರಿಗೊಳಿಸಿದ್ದಾರೆ.

Udupi Police Destroy 51 Modified Silencers

ಕಳೆದೊಂದು ತಿಂಗಳಲ್ಲಿ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 50 ದ್ವಿಚಕ್ರ ವಾಹನದ ಸವಾರರು ಹಾಗೂ ಓರ್ವ ನಾಲ್ಕು ಚಕ್ರದ ವಾಹನ ಸವಾರನ ವಿರುದ್ದ ಪ್ರಕರಣ ದಾಖಲಿಸಿ 25,500 ರೂ. ದಂಡ ವಸೂಲಿ ಮಾಡಲಾಗಿದೆ.

ವಾಹನ ಸವಾರರನ್ನು ಹಿಡಿದಾಗ ಸೈಲೆನ್ಸರ್ ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಅವುಗಳನ್ನು ವಾಪಾಸ್ ನೀಡಿದ್ದಲ್ಲಿ ಮರು ಬಳಕೆ ಮಾಡುವ ಸಾಧ್ಯತೆ ಇರುವುದರಿಂದ ಪ್ರಾಯೋಗಿಕವಾಗಿ ಮಣಿಪಾಲ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡ 51 ಸೈಲೆನ್ಸರ್ ಗಳನ್ನು ರೋಡ್ ರೋಲರ್ ನಿಂದ ಅನುಪಯುಕ್ತಗೊಳಿಸಲಾಯಿತು.

Recommended Video

ಏರೋ ಇಂಡಿಯಾ 2021 ಕಾರ್ಯಕ್ರಮಕ್ಕೆ ಇಂದು ತೆರೆ | Oneindia Kannada

"ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯಾದ್ಯಂತ ಈ ರೀತಿ ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಗಳನ್ನು ವಶಪಡಿಸಿಕೊಳ್ಳುವ ಪ್ರಕ್ರಿಯೆ ಎಲ್ಲಾ ಠಾಣೆಯಲ್ಲಿ ಮಾಡಲಾಗುತ್ತದೆ" ಎಂದು ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಹೇಳಿದ್ದಾರೆ.

English summary
Udupi Manipal police destroy the 51 modified silencers of the bike and car. Police have seized bike who used modified silencers and imposed the fine.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X