ಖಾಸಗಿ ಬಸ್ ನಲ್ಲಿ ಅಕ್ರಮ ದನದ ಮಾಂಸ ಸಾಗಾಟ ಪತ್ತೆ
ಉಡುಪಿ, ಡಿಸೆಂಬರ್ 08: ಖಾಸಗಿ ಬಸ್ ನಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ಪ್ರಕರಣ ಉಡುಪಿಯಲ್ಲಿ ಬೆಳಕಿಗೆ ಬಂದಿದೆ. ಎಸ್ ವಿ ಆರ್ಎಂ ಶಿವಮೊಗ್ಗ- ಮಂಗಳೂರು ನಡುವೆ ಓಡಾಡುವ ಬಸ್ಸಿನಲ್ಲಿ ಭಾರೀ ಪ್ರಮಾಣದಲ್ಲಿ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡಲಾಗುತ್ತಿರುವ ಮಾಹಿತಿ ಪೊಲೀಸರಿಗೆ ದೊರೆತಿತ್ತು.
ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಹೆಬ್ರಿ ಠಾಣಾ ಪೊಲೀಸರು ತಡರಾತ್ರಿ ಕಾರ್ಯಾಚರಣೆ ನಡೆಸಿದ್ದಾರೆ. ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿದ್ದ ಬಸ್ಸನ್ನು ತಡೆದ ಪೊಲೀಸರು ಬಸ್ ನಲ್ಲಿ ತಪಾಸಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಬಸ್ ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 15 ಕೆಜಿ ಮಾಂಸ ವನ್ನು ವಶಕ್ಕೆ ಪಡೆಯಲಾಗಿದೆ.
ಪ್ರತಿದಿನವೂ ಈ ಬಸ್ ನಲ್ಲಿ ದನದ ಮಾಂಸ ಸಾಗಾಟ ಮಾಡಲಾಗುತ್ತಿತ್ತು ಎಂದು ಹೇಳಲಾಗಿದೆ.

ಬಸ್ ಸೀಜ್ ಮಾಡಿದ ಪೊಲೀಸರು ತಪಾಸಣೆ ಸಂದರ್ಭದಲ್ಲಿ ವಶಪಡಿಸಿಕೊಂಡಿರುವ ಮಾಂಸವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ. ಹೆಬ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.












Click it and Unblock the Notifications