ಶೋಭಾ ಕರಂದ್ಲಾಜೆಗೆ ಕರವೇ ಘೇರಾವ್ ಯತ್ನ
ಉಡುಪಿ, ಅಕ್ಟೋಬರ್ 5 : ಸಂಸದೆ ಶೋಭಾ ಕರಂದ್ಲಾಜೆ ಅವರು ಇಲ್ಲಿ ಕಾರ್ಯಕ್ರಮವೊಂದಕ್ಕೆ ಭಾಗಿಯಾಗಲು ಬಂದ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಘೇರಾವ್ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಆದರೆ ಈ ಪ್ರಯತ್ನವನ್ನು ಪೊಲೀಸರು ವಿಫಲಗೊಳಿಸಿ, ಕಾರ್ಯಕರ್ತರನ್ನು ಬಂಧಿಸಿದ್ದಾರೆ.
ಕಳೆದ ವಾರ ಮಣಿಪಾಲ-ತೀರ್ಥಹಳ್ಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ವೊಂದು ಜಾರಿ, ಮಗುವೊಂದು ಮೃತಪಟ್ಟಿತ್ತು. ಆ ನಂತರ ಹೆದ್ದಾರಿ ದುರವಸ್ಥೆ ಬಗ್ಗೆ ಸಂಸದೆ ಶೋಭಾ ಕರಂದ್ಲಾಜೆ ಅವರು ಗಮನ ಹರಿಸಿಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಸಂಸದೆ ಶೋಭಾ ಕರಂದ್ಲಾಜೆ ಉಡುಪಿಯಲ್ಲಿ ಗುರುವಾರ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ಬಂದ ಕರವೇ ಕಾರ್ಯಕರ್ತರು ಸಂಸದೆ ಶೋಭಾ ಕರಂದ್ಲಾಜೆಗೆ ಘೇರಾವ್ ಹಾಕಲು ಮುಂದಾದರು. ಆದರೆ ದಾರಿ ಮಧ್ಯೆಯೇ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.












Click it and Unblock the Notifications