ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರಾವಳಿ ಜಿಲ್ಲೆಗೆ ಕಳಪೆ ಗುಣಮಟ್ಟದ ಕುಚಲಕ್ಕಿ: ಸಿಎಂಗೆ ದೂರು

|
Google Oneindia Kannada News

ಬೆಂಗಳೂರು, ಫೆ 18: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪಡಿತರದ ಮೂಲಕ ವಿತರಿಸುತ್ತಿರುವ ಕುಚಲಕ್ಕಿ ಅತ್ಯಂತ ಕಳಪೆ ಗುಣಮಟ್ಟದ್ದಾಗಿದ್ದು, ಜನಸಾಮಾನ್ಯರು ಅದರಲ್ಲೂ ಬಡವರು ಅಕ್ಕಿಯನ್ನು ಉಪಯೋಗಿಸದೆ ಕಡಿಮೆ ದರಕ್ಕೆ ಮಾರಾಟ ಮಾಡಿ ಹೆಚ್ಚು ದರದ ಕೆಂಪು ಕುಚಲಕ್ಕಿಯನ್ನು ಖರೀದಿಸುತ್ತಿದ್ದಾರೆ ಎಂದು ಸಚಿವ ಅಂಗಾರ ಅವರು ಸಿಎಂಗೆ ದೂರು ಸಲ್ಲಿಸಿದ್ದಾರೆ.

ಕೆಲವು ಕಡೆ ಪಡಿತರ ಅಕ್ಕಿಯನ್ನೇ ಪಡೆಯುತ್ತಿಲ್ಲ. ಇದರಿಂದಾಗಿ ಪಡಿತರದ ಮೂಲಕ ತೆಗೆದುಕೊಂಡ ಕಳಪೆ ಗುಣಮಟ್ಟದ ಅಕ್ಕಿಯನ್ನು ಮಾರಾಟ ಮಾಡಿದ ಹಿನ್ನಲೆಯಲ್ಲಿ ಕ್ರಿಮಿನಲ್ ಕೇಸುಗಳು ದಾಖಲಾಗುತ್ತಿವೆ.

ಕೃಷ್ಣಾಪುರ ಮಠದ ಪರ್ಯಾಯ ಪೂರ್ವ ಅಕ್ಕಿ ಮುಹೂರ್ತ ಸಂಪನ್ನಕೃಷ್ಣಾಪುರ ಮಠದ ಪರ್ಯಾಯ ಪೂರ್ವ ಅಕ್ಕಿ ಮುಹೂರ್ತ ಸಂಪನ್ನ

ಇದರಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗೆ ಬೇಕಾಗುವ ಕುಚಲಕ್ಕಿಯನ್ನು ಸ್ಥಳೀಯ ರೈತರಿಂದ ಸಂಗ್ರಹಿಸಿ ಅಲ್ಲಿಯ ಪಡಿತರಕ್ಕೆ ಜನಸಾಮಾನ್ಯರಿಗೆ ವಿತರಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಮನವಿ ಸಲ್ಲಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಚಿವರಾದ ಎಸ್. ಅಂಗಾರ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರು ಸಿಎಂಗೆ ಮನವಿ ಮಾಡಿದರು.

Poor Quality Of Red Rice In Dakshina Kannada And Udupi District Ration Shops, An Appeal To CM

ದಕ್ಷಿಣ ಕನ್ನಡ ಜಿಲ್ಲೆಗೆ ಸುಮಾರು 58 ಸಾವಿರ ಕ್ವಿಂಟಲ್ ಪಡಿತರ ಅಕ್ಕಿಯ ಅಗತ್ಯವಿದ್ದು, ಉಡುಪಿ ಜಿಲ್ಲೆಗೆ 40 ಸಾವಿರ ಕ್ವಿಂಟಲ್ ಪಡಿತರ ಅಕ್ಕಿ ಬೇಕಾಗಿದ್ದು, ಒಟ್ಟು ಸರಾಸರಿ ತಿಂಗಳಿಗೆ ಒಂದು ಲಕ್ಷ ಕ್ವಿಂಟಲ್ ಆಗತ್ಯವಿದೆ.

ಇದಕ್ಕೆ ಬೇಕಾಗುವಷ್ಟು ಭತ್ತದ ಬೆಳೆ ಅವಳಿ ಜಿಲ್ಲೆಯಲ್ಲಿ ಲಭ್ಯವಿಲ್ಲದೇ ಇರುವುದರಿಂದ ಮೈಸೂರು, ಮಂಡ್ಯ ಮುಂತಾದೆಡೆಯಿಂದ ಜಯ ಮತ್ತು ಇನ್ನಿತರ ಭತ್ತದ ತಳಿಯ ಫಸಲನ್ನು ಸಂಗ್ರಹಿಸಿ ಕುಚಲಕ್ಕಿಯನ್ನು ತಯಾರಿಸುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಸಮರ್ಪಿಸಲಾಗಿದೆ.

ಮನವಿ ಸ್ವೀಕರಿಸಿದ ಮುಖ್ಯಮಂತ್ರಿಗಳು ತಕ್ಷಣ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿ ಸಮಸ್ಯೆ ಬಗೆಹರಿಸುವುದಾಗಿ ತಿಳಿಸಿದ್ದಾರೆ.

Poor Quality Of Red Rice In Dakshina Kannada And Udupi District Ration Shops, An Appeal To CM

ನಂತರ ವಿಧಾನಸೌಧದಲ್ಲಿ ಸಚಿವ ಕೋಟ ಅವರ ಕಛೇರಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ್ ಕತ್ತಿ, ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಅಂಗಾರ, ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷರಾದ ಕಿರಣ್ ಕೊಡ್ಗಿ, ಶಾಸಕರಾದ ಉಮಾನಾಥ್ ಕೋಟ್ಯಾನ್, ಸಂಜೀವ ಮಠಂದೂರು ಮುಂತಾದ ದಕ್ಷಿಣ ಕನ್ನಡ ಜಿಲ್ಲೆಯ ಶಾಸಕರ ಸಮಕ್ಷಮದಲ್ಲಿ ಸಭೆ ನಡೆಯಿತು.

"ರಾಮ ಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ''

ಸಭೆಯಲ್ಲಿ ಮುಂದಿನ ಒಂದು ವಾರಗಳಲ್ಲಿ ಕರಾವಳಿ ಜಿಲ್ಲೆಯ ಅಕ್ಕಿ ಗಿರಣಿ ಮಾಲೀಕರು ಮತ್ತು ಆಹಾರ ನಿಗಮದ ಅಧಿಕಾರಿಗಳು ಮತ್ತು ಅವಳ ಜಿಲ್ಲೆಯ ಜಿಲ್ಲಾಧಿಕಾರಿಗಳ ಸಮಕ್ಷಮ ಸಭೆ ನಡೆಸಿ ಕುಚಲಕ್ಕಿಯ ತಯಾರಿಕೆಗಾಗಿ ಭತ್ತದ ಖರೀದಿ, ಸಂಸ್ಕರಣೆ, ವಿತರಣೆ ಕುರಿತು ಸೂಕ್ತ ಮಾರ್ಗೋಪಾಯ ಕಂಡುಹಿಡಿಯಲು ಅಗತ್ಯ ಕ್ರಮಕೈಗೊಳ್ಳುವಂತೆ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿಗಳಿಗೆ ಸಚಿವ ಉಮೇಶ್ ಕತ್ತಿ ಸೂಚಿಸಿದರು.

Recommended Video

Amit Shah ಸವಾಲೆಸೆದ ಮಮತಾ ಬ್ಯಾನರ್ಜಿ, ಪ.ಬಂಗಾಳದಲ್ಲಿ ಮುಂದುವರೆದ ವಾಕ್‌ ಸಮರ | Oneindia Kannada

ಸಭೆಯಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಹಿರಿಯ ಅಧಿಕಾರಿಗಳು, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಉಪ ನಿರ್ದೇಶಕರು ಉಪಸ್ಥಿತರಿದ್ದರು.

English summary
Poor Quality Of Red Rice In Dakshina Kannada And Udupi District Ration Shops, An Appeal To CM.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X