ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಮುದ್ರದ ಅಲೆಗಳಿಂದ ವಿದ್ಯುತ್ ಉತ್ಪಾದನೆ: ಶೀಘ್ರ ಪ್ರಾಯೋಗಿಕ ಯೋಜನೆ ಅನುಷ್ಠಾನ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ನವೆಂಬರ್ 9: ಉಡುಪಿಯ ಸುಸಿ ಗ್ಲೋಬಲ್ ರಿಸರ್ಚ್ ಸೆಂಟರ್ ಇದರ ಬಹುವರ್ಷಗಳ ಕನಸು ನನಸಾಗುತ್ತಿದೆ. ಸಮುದ್ರದ ಅಲೆಗಳಿಂದ ವಿದ್ಯುತ್ ಉತ್ಪಾದಿಸುವ ಬಗ್ಗೆ ಈ ಸಂಸ್ಥೆಯು ಹಲವು ವರ್ಷಗಳಿಂದ ಕಠಿಣ ಪ್ರಯೋಗದಲ್ಲಿ ತೊಡಗಿತ್ತು.

ಈಗಾಗಲೇ ಸಂಸ್ಥೆಯು ಈ ಪ್ರಯೋಗಗಳಿಗೆ ಕೋಟ್ಯಂತರ ರುಪಾಯಿ ಖರ್ಚು ಮಾಡಿದೆ. ಯೋಜನೆಯ ಭಾಗವಾಗಿ 2015ರಲ್ಲಿ ಸಮುದ್ರ ಕಿನಾರೆಯಲ್ಲಿ ಪ್ರಾಯೋಗಿಕ ಯೋಜನೆಯನ್ನು ಹಮ್ಮಿಕೊಳ್ಳಲಾಗಿತ್ತು, ಅದು ಯಶಸ್ಸನ್ನೂ ಕಂಡಿತ್ತು. ನಂತರದ ದಿನಗಳಲ್ಲಿ ಸಂಶೋಧನೆಗಳನ್ನು ಮಾಡಿ ಮತ್ತಷ್ಟು ಅಭಿವೃದ್ಧಿಪಡಿಸಿ, ಇದೀಗ ಪೂರ್ಣ ಪ್ರಮಾಣದ ವಿದ್ಯುತ್ ಉತ್ಪಾದನಾ ಘಟಕವನ್ನು ಉಡುಪಿ ಜಿಲ್ಲೆಯಲ್ಲಿ ಸ್ಥಾಪಿಸಲು ಸಂಸ್ಥೆ ಮುಂದಾಗಿದೆ.

Power Generation From Ocean Waves: Implementation Of Rapid Experimental Planning

 ಹೆಜಮಾಡಿಯಲ್ಲಿ ಈಜಲು ಹೋದ ಇಬ್ಬರು ನೀರುಪಾಲು: ಓರ್ವನ ರಕ್ಷಣೆ ಹೆಜಮಾಡಿಯಲ್ಲಿ ಈಜಲು ಹೋದ ಇಬ್ಬರು ನೀರುಪಾಲು: ಓರ್ವನ ರಕ್ಷಣೆ

ಇಲ್ಲಿಯ ತನಕ ಸಂಸ್ಥೆಯು ಟೈಡಲ್ ಪವರ್ ಯೋಜನೆಗೆ 30 ಕೋಟಿ ರುಪಾಯಿಗೂ ಅಧಿಕ ಖರ್ಚು ಮಾಡಿದ್ದು, ಘಟಕಕ್ಕೆ ಸರಕಾರದ ಅನುಮತಿ ಮತ್ತು ಅನುದಾನದ ನಿರೀಕ್ಷೆಯಲ್ಲಿತ್ತು. ಇದೀಗ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಅಲೆಗಳಿಂದ ವಿದ್ಯುತ್ ಉತ್ಪಾದಿಸುವ ಘಟಕಕ್ಕೆ ಸಹಕಾರ ನೀಡುವುದಾಗಿ ಹೇಳಿದ್ದಾರೆ ಎಂದು ಸಂಸ್ಥೆಯ ರೂವಾರಿ ವಿಜಯಕುಮಾರ್ ಹೆಗ್ಡೆ ಹೇಳಿದ್ದಾರೆ.

Power Generation From Ocean Waves: Implementation Of Rapid Experimental Planning

ಇನ್ನು ಕೆಲವೇ ದಿನಗಳಲ್ಲಿ ಸಮುದ್ರ ಕಿನಾರೆಯಲ್ಲಿ ವಿದ್ಯುತ್ ಉತ್ಪಾದಿಸುವ ಘಟಕ ಪ್ರಾಯೋಗಿಕವಾಗಿ ವಿದ್ಯುತ್ ಉತ್ಪಾದಿಸಲಿದೆ. ಈ ಯೋಜನೆಯ ರೂವಾರಿ ಸುಸಿ ಗ್ಲೋಬಲ್ ರಿಸರ್ಚ್ ಸೆಂಟರ್ ಜೊತೆ ಪ್ರತಿಷ್ಠಿತ ಈಸ್ಟ್ ವೆಸ್ಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ಕೂಡ ಕೈಜೋಡಿಸಿದೆ ಎಂದು ಯೋಜನೆಯ ರೂವಾರಿ ವಿಜಯಕುಮಾರ್ ಹೆಗ್ಡೆ ಹೇಳಿದ್ದಾರೆ.

English summary
Udupi's Susi Global Research Center is leading the way in generating electricity from ocean waves.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X