ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನೆರವೇರಿಸಿದ ಮೋದಿ ಸಹೋದರ ಪ್ರಹ್ಲಾದ್

ಉಡುಪಿ, ಫೆಬ್ರವರಿ 13: ಕರಾವಳಿಯ ತೀರ್ಥಕ್ಷೇತ್ರಗಳ ಯಾತ್ರೆ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ನೆರವೇರಿಸಿದ್ದಾರೆ. ಮಂಗಳವಾರ ಸಂಜೆ (ಫೆ.12) ಕೊಲ್ಲೂರಿಗೆ ಭೇಟಿ ನೀಡಿದ್ದ ಪ್ರಹ್ಲಾದ್ ಮೋದಿ, ಇಂದು ಮುಂಜಾನೆ ಬುಧವಾರ ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ವಿಶೇಷ ಪೂಜೆ ಸಲ್ಲಿಸಿದರು.

ನಂತರ ಕೊಲ್ಲೂರಿನ ಮೂಕಾಂಬಿಕ ದೇವಸ್ಥಾನದಲ್ಲಿ ಚಂಡಿಕಾ ಹೋಮ ನೇರವೇರಿಸಿದರು. ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಪ್ರಹ್ಲಾದ್ ಮೋದಿ, ಬಹಳ ವರ್ಷಗಳಿಂದ ಕೊಲ್ಲೂರು ದೇವಿ ದರ್ಶನ ಪಡೆಯಬೇಕೆಂಬ ಬಯಕೆ ಇತ್ತು. ಇಂದು ದೇವಿ ದರ್ಶನ ಪಡೆಯುವ ಮೂಲಕ ಅದು ಈಡೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು.

Prahlad Modi visits Kolluru temple

ಈ ಸಂದರ್ಭದಲ್ಲಿ ದೇವಸ್ಥಾನದ ಇಓ ಕೃಷ್ಣಮೂರ್ತಿ ಅವರು ಪ್ರಹ್ಲಾದ್ ಮೋದಿ ಅವರನ್ನು ಗೌರವಿಸಿದರು. ನಿನ್ನೆ ಸಂಜೆ ಮಂಗಳೂರಿಗೆ ಆಗಮಿಸಿದ್ದ ಪ್ರಹ್ಲಾದ್ ಮೋದಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ತೀರ್ಥ ಕ್ಷೇತ್ರಗಳ ಭೇಟಿಗೆ ಬಂದಿರುವುದಾಗಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದರು. ಈ ಸಂದರ್ಭದಲ್ಲಿ ಅವರು ಮಹಾಘಟಬಂಧನ್ ಸೇರಿದಂತೆ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+