ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಲಸಿಕೆಗೆ ಪೂರ್ವ ನೋಂದಣಿ ಅಗತ್ಯ: ಇಲ್ಲವೆಂದರೆ ಲಸಿಕೆ ಇಲ್ಲ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಜನವರಿ 9: ಕೋವಿಡ್ ಲಸಿಕೆಯನ್ನು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕಿದ್ದು, ಇದಕ್ಕಾಗಿ ಉಡುಪಿ ಜಿಲ್ಲೆಯ 105 ಸರಕಾರಿ ಮತ್ತು 762 ಖಾಸಗಿ ಆರೋಗ್ಯ ಸಂಸ್ಥೆಗಳ, 5688 ಸರಕಾರಿ ಮತ್ತು 13874 ಖಾಸಗಿ ಆರೋಗ್ಯ ಸಿಬ್ಬಂದಿ ಸೇರಿದಂತೆ ಒಟ್ಟು 19,562 ಫಲಾನುಭವಿಗಳನ್ನು ನೋಂದಣಿ ಮಾಡಿಕೊಳ್ಳಲಾಗಿದೆ.

ಈ ಫಲಾನಭವಿಗಳಿಗೆ ಕೊರೊನಾ ಲಸಿಕೆ ನೀಡಲು ಸಂಪೂರ್ಣ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಲಸಿಕೆ ನೀಡುವ ಸಿಬ್ಬಂದಿಗಳಿಗೆ ತರಬೇತಿ ಹಾಗೂ ಅಗತ್ಯ ಕೊಠಡಿಗಳ ನಿರ್ಮಾಣ ಮಾಡಿಕೊಂಡಿದ್ದು, ಲಸಿಕೆ ಸಾಗಾಟ, ವಿತರಣೆಗೆ ಅಗತ್ಯ ಯೋಜನೆಗಳನ್ನೂ ಸಹ ರೂಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಉಡುಪಿ; ಲಂಡನ್‌ನಿಂದ ಬಂದ 36 ಜನರ ಕೋವಿಡ್ ವರದಿ ನೆಗೆಟೀವ್ ಉಡುಪಿ; ಲಂಡನ್‌ನಿಂದ ಬಂದ 36 ಜನರ ಕೋವಿಡ್ ವರದಿ ನೆಗೆಟೀವ್

ಈಗ ನಡೆಯುತ್ತಿರುವ ಕೊರೊನಾ ಡ್ರೈ ರನ್ ಕಾರ್ಯಕ್ರಮವು, ಲಸಿಕೆ ವಿತರಣೆ ಸಂದರ್ಭದಲ್ಲಿ ಎದುರಿಸಬಹುದಾದ ಸವಾಲುಗಳನ್ನು ಸರಿಪಡಿಸಿಕೊಳ್ಳಲು ಅನುಕೂಲವಾಗಿದೆ. ಕೋವಿಡ್-19 ಲಸಿಕೆಯ ಕುರಿತಂತೆ ಸೋಷಿಯಲ್ ಮೀಡಿಯಾಗಳಲ್ಲಿ ಬರುವ ಅಪಪ್ರಚಾರಗಳಿಗೆ ಸಾರ್ವಜನಿಕರು ಕಿವಿಗೊಡದೇ, ಮುಕ್ತ ಮನಸ್ಸಿನಿಂದ ಲಸಿಕೆಯನ್ನು ಸ್ವೀಕರಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದರು.

Udupi: Pre Registration Is Required For The Corona Vaccine: DC Jagadish

ಕೊರೊನಾ ಲಸಿಕೆಯನ್ನು ಎರಡನೇ ಹಂತದಲ್ಲಿ ಮುಂಚೂಣಿ ಆರೋಗ್ಯ ಸಿಬ್ಬಂದಿಗಳು ಹಾಗೂ ಮೂರನೇ ಹಂತದಲ್ಲಿ 50 ವರ್ಷ ಮೇಲ್ಪಟ್ಟವರಿಗೆ ವಿತರಿಸಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಲಸಿಕೆ ಪಡೆಯಲು ಪೂರ್ವ ನೋಂದಣಿ ಅಗತ್ಯವಾಗಿದ್ದು, ನೋಂದಣಿ ಮಾಡಿಕೊಳ್ಳದವರಿಗೆ ಲಸಿಕೆ ನೀಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

2ನೇ ಹಂತದ ಲಸಿಕೆ ಪಡೆಯುವವರ ನೋಂದಣಿ ಕಾರ್ಯಕ್ರಮವನ್ನು ಜನವರಿ ಅಂತ್ಯದೊಳಗೆ ಮುಗಿಸಲಾಗುವುದು. ಲಸಿಕೆ ವಿತರಣೆ ಕಾರ್ಯಕ್ರಮವನ್ನು ಚುನಾವಣೆ ರೀತಿಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಈ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಅಧಿಕಾರಿಗಳು ಸಿಬ್ಬಂದಿಗಳು ಅತ್ಯಂತ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

English summary
District Level 2 vaccine recipient registration program will be completed by the end of January, said Udupi District Collector G.Jagdish.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X