ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆ

|
Google Oneindia Kannada News

ಉಡುಪಿ, ಡಿಸೆಂಬರ್ 29: ಕರ್ನಾಟಕದ ಯತಿಗಳಲ್ಲಿಯೇ ಅತೀ ಹಿರಿಯ ಯತಿಗಳೆನಿಸಿಕೊಂಡಿದ್ದ ಉಡುಪಿಯ ಪೇಜಾವರ ಮಠದ ವಿಶ್ವೇಶ ತೀರ್ಥ ಶ್ರೀಗಳು ಇಂದು ಮುಂಜಾನೆ ಕೃಷ್ಣೈಕ್ಯರಾಗಿದ್ದಾರೆ.

ಶ್ರೀಗಳವರ ಕೊನೆಯಾಸೆಯಂತೆ ಉಡುಪಿ ಪೇಜಾವರ ಮಠದಲ್ಲಿಯೇ ಕೃಷ್ಣ ಪರಮಾತ್ಮನಲ್ಲಿ ಲೀನರಾಗಿದ್ದಾರೆ. ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಮಧ್ಯಾಹ್ನ 12 ಗಂಟೆಯವರೆಗೂ ಉಡುಪಿಯ ಅಜ್ಜರಕಾಡು ಮೈದಾನದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯೆವಸ್ಥೆ ಮಾಡಲಾಗಿದೆ.

Breaking: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಇನ್ನಿಲ್ಲBreaking: ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ ಇನ್ನಿಲ್ಲ

ನಂತರ ಶ್ರೀಗಳ ಪಾರ್ಥೀವ ಶರೀರವನ್ನು ಏರ್ ಲಿಫ್ಟ್ ಮೂಲಕ ಎಚ್ಎಎಲ್ ಗೆ ಆಗಮಿಸಿ ಬೆಂಗಳೂರಿನ ನ್ಯಾಶನಲ್ ಕಾಲೇಜು ಮೈದಾನದಲ್ಲಿ ಸಂಜೆ 4 ಗಂಟೆಯವರೆಗೂ ಅಂತಿಮ ದರ್ಶನಕ್ಕೆ ಸಿದ್ದತೆ ಮಾಡಲಾಗಿದೆ. ರಾಜ್ಯದಲ್ಲಿ 3 ದಿನಗಳ ಕಾಲ ಶೋಕಾಚರಣೆ ಮಾಡಲಾಗುವುದು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

Preparation To Final Rites Of Pejawar Seer

ಪೇಜಾವರ ಶ್ರೀಗಳ ಅಂತಿಮ ದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಆಗಮಿಸುವ ನಿರೀಕ್ಷೆ ಇದೆ. ಉಡುಪಿ ಮಠಕ್ಕೆ ಸಿಎಂ ಯಡಿಯೂರಪ್ಪ ತೆರಳಲಿದ್ದಾರೆ. ಶ್ರೀಗಳ ನಿಧನಕ್ಕೆ ಸಿಎಂ ಸೇರಿದಂತೆ ನಾಡಿನ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

English summary
The final Rites of Pejavara Seer Is prepared. The funeral will be held till 12 pm at the Ajjarakadu Ground of Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X