ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

By Lekhaka
|
Google Oneindia Kannada News

ಉಡುಪಿ, ಡಿಸೆಂಬರ್ 13: ಸಂಸ್ಕೃತ ವಿದ್ವಾಂಸ, ಮಧ್ವ ಸಿದ್ದಾಂತದ ಪ್ರತಿಪಾದಕರಾಗಿದ್ದ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಪತ್ರಕರ್ತರೂ ಆಗಿದ್ದ ಉಡುಪಿ ಜಿಲ್ಲೆಯ ಡಾ.ಬನ್ನಂಜೆ ಗೋವಿಂದಾಚಾರ್ಯರು ಭಾನುವಾರ (ಡಿ.13) ರಂದು ಇಹಲೋಕ ತ್ಯಜಿಸಿದ್ದು, ಅವರ ಅಕಾಲಿಕ ನಿಧನಕ್ಕೆ ಪ್ರಧಾನಿ ಮೋದಿ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೋಕ ವ್ಯಕ್ತಪಡಿಸಿದ್ದಾರೆ.

ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಪ್ರಧಾನಿ ನರೇಂದ್ರ ಮೋದಿ ಅವರು, ""ಪದ್ಮಶ್ರೀ ಪುರಸ್ಕೃತ ಬನ್ನಂಜೆ ಗೋವಿಂದಾಚಾರ್ಯರು ಸಾಹಿತ್ಯಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು, ಸಂಸ್ಕೃತ ಮತ್ತು ಕನ್ನಡಕ್ಕೆ ಅವರ ಕೊಡುಗೆ ಪ್ರಶಂಸನೀಯವಾಗಿದೆ'' ಎಂದು ತಿಳಿಸಿದ್ದಾರೆ.

Prime Minister Narendra Modi Condoles To The Death Of Bannanje Govindacharya

ಮುಂದಿನ ಪೀಳಿಗೆಗೂ ಅವರ ಕಾರ್ಯಗಳು ಬನ್ನಂಜೆ ಅವರ ಪ್ರಭಾವಕಾರಿಯಾಗಿದ್ದು, ಗೋವಿಂದಾಚಾರ್ಯರ ನಿಧನ ಅತೀವ ನೋವು ತಂದಿದೆ. ಬನ್ನಂಜೆ ಕುಟುಂಬಕ್ಕೆ ಭಗವಂತ ನೋವು ಸಹಿಸುವ ಶಕ್ತಿ ನೀಡಲಿ'' ಎಂದು ಸಂತಾಪ ಸೂಚಿಸಿದ್ದಾರೆ.

ಕನ್ನಡ ಹಾಗೂ ಸಂಸ್ಕೃತ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಹಾಗೂ ರಾಜ್ಯ ಸಚಿವರು, ರಾಜಕೀಯ, ಧಾರ್ಮಿಕ, ಸಾಹಿತ್ಯ ಕ್ಷೇತ್ರದ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

English summary
Prime Minister Narendra Modi has condoled the death of Vidyavachaspati Bannanje Govindacharya, who was a proponent of Madhva Siddhanta.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X