ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹೆಜಮಾಡಿ ಟೋಲ್ ವಿನಾಯಿತಿಗೆ ಒತ್ತಾಯಿಸಿ ಮಸಿ ಬಳಿದುಕೊಂಡು ಅರೆಬೆತ್ತಲೆ ಪ್ರತಿಭಟನೆ

|
Google Oneindia Kannada News

ಉಡುಪಿ, ಜನವರಿ 30:ಪಡುಬಿದ್ರೆ ವ್ಯಾಪ್ತಿಯ ವಾಹನಗಳಿಗೆ ಹೆಜಮಾಡಿ ಟೋಲ್ ನಲ್ಲಿ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಿ ನಡೆಸಲಾಗುತ್ತಿರುವ ಹೋರಾಟ 23 ನೇ ದಿನಕ್ಕೆ ಕಾಲಿರಿಸಿದೆ.

ಮದ್ಯ ನಿಷೇಧ ಪಾದಯಾತ್ರೆ ವೇಳೆ ಮಹಿಳೆ ಸಾವು, ತೀವ್ರಗೊಂಡ ಪ್ರತಿಭಟನೆಮದ್ಯ ನಿಷೇಧ ಪಾದಯಾತ್ರೆ ವೇಳೆ ಮಹಿಳೆ ಸಾವು, ತೀವ್ರಗೊಂಡ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಡೆಸಲಾಗುತ್ತಿರುವ ಈ ಪ್ರತಿಭಟನೆ 23ನೇ ದಿನಕ್ಕೆ ಕಾಲಿಟ್ಟಿದ್ದು, ಪ್ರತಿಭಟನಾಕಾರರರು ಇಂದು ಮಸಿ ಬಳಿದುಕೊಂಡು ಅರೆಬೆತ್ತಲೆ ಪ್ರತಿಭಟನೆ ನಡೆಸಿ ಗಮನಸೆಳೆದರು.

 ಮಂಗಳೂರಿನಲ್ಲಿ ಇನ್ನು ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ನೀಡಬೇಕು ಮಂಗಳೂರಿನಲ್ಲಿ ಇನ್ನು ಪ್ರತಿಭಟನೆ ನಡೆಸಬೇಕಾದರೆ ಶುಲ್ಕ ನೀಡಬೇಕು

ಕರವೇ ಜಿಲ್ಲಾಧ್ಯಕ್ಷ ಅನ್ಸಾರ್ ಅಹಮದ್, ತಾಲೂಕು ಅಧ್ಯಕ್ಷ ಸೈಯ್ಯದ್ ನಿಝಾಮುದ್ದೀನ್ ಹಾಗೂ ಆಸೀಫ್ ಮೈಗೆ ಮಸಿ ಬಳಿದುಕೊಂಡು ಅರೆಬೆತ್ತಲೆಯೊಂದಿಗೆ ಭಿಕ್ಷಾ ಪಾತ್ರೆ ಇಟ್ಟುಕೊಂಡು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರರು ಜಿಲ್ಲಾಡಳಿತ, ಜನಪ್ರತಿನಿಧಿಗಳು ಸೇರಿಂದತೆ , ನವಯುಗ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

Protest against Hejamadi toll palza

ಪ್ರತಿಭಟನೆ ನಡೆಯುತ್ತಿರುವ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಭೇಟಿ ನೀಡಿ, ಪ್ರತಿಭಟನಾಕಾರರ ಬೇಡಿಕೆಯ ಬಗ್ಗೆ ನವಯುಗ ಅಧಿಕಾರಿಗೆ ಮೊಬೈಲ್‌ನಲ್ಲಿ ಸಂಪರ್ಕಿಸಿ ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ಇನ್ನೂ ಪೂರ್ಣಗೊಳ್ಳದೆ ಟೋಲ್ ವಸೂಲಿ ಮಾಡುತ್ತಿದ್ದು, ಸ್ಥಳೀಯರಿಗೆ ಸಮಸ್ಯೆ ಉಂಟಾಗಿದೆ. ಈ ನಿಟ್ಟಿನಲ್ಲಿ ಟೋಲ್ ವಿನಾಯಿತಿ ನೀಡಬೇಕು ಎಂದು ಹೇಳಿದರು.

 ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನವಯುಗ ಅಧಿಕಾರಿಗಳೊಂದಿಗೆ ಚರ್ಚಿಸಲಾಗುವುದು. ಇದಕ್ಕೂ ಕಂಪೆನಿ ಒಪ್ಪದಿದ್ದಲ್ಲಿ ಮುಂದಿನ ದಿನಗಳಲ್ಲಿ ಈ ಹೋರಾಟಕ್ಕೆ ತಾನೂ ಕೈ ಜೋಡಿಸುವುದಾಗಿ ಹೇಳಿದರು.

English summary
Karave activist staged protest against Hejamadi toll plaza on january 30 in Padubidre.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X