ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ: ಹತ್ರಾಸ್ ಅತ್ಯಾಚಾರ ಪ್ರಕರಣ ಖಂಡಿಸಿ ಕುಂದಾಪುರದಲ್ಲಿ ಪ್ರತಿಭಟನೆ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಅಕ್ಟೋಬರ್ 9: ಉತ್ತರಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ದಲಿತ ಯುವತಿ ಮನೀಷಾ ವಾಲ್ಮೀಕಿ ಮೇಲಿನ ಅತ್ಯಾಚಾರ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅದೇ ರೀತಿ ಇಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮಘರ್ಜನೆ ಉಡುಪಿ ಜಿಲ್ಲೆ, ಬಹುಜನ್ ಕ್ರಾಂತಿ ಮೋರ್ಚಾ ಉಡುಪಿ ಜಿಲ್ಲೆ ಹಾಗೂ ಮುಸ್ಲಿಂ ಮೋರ್ಚಾ ಉಡುಪಿ ಜಿಲ್ಲೆ ಇವರ ವತಿಯಿಂದ ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಗುರುವಾರದಂದು ಕುಂದಾಪುರದ ಶಾಸ್ತ್ರೀ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭೀಮ ಘರ್ಜನೆ ರಾಜ್ಯ ಸಂಚಾಲಕ ಉದಯ್ ಕುಮಾರ್ ತಲ್ಲೂರು, ರಾಜ್ಯ ಹಾಗೂ ಕೇಂದ್ರ ಸರಕಾರವನ್ನು ಆರ್.ಎಸ್.ಎಸ್. ನಿಯಂತ್ರಿಸುತ್ತಿದೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಆರೋಪಿಸಿದರು.

Udupi: Protest In Kundapura Condemning The Hatras Rape Case

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿಲ್ಲ. ದಲಿತರನ್ನು ಮತ್ತು ಅಲ್ಪಸಂಖ್ಯಾತರನ್ನು ತುಳಿಯುವ ಕೆಲಸವಾಗುತ್ತಿದೆ. ಹತ್ರಾಸ್ ಪ್ರಕರಣದಲ್ಲಿ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರದ ವಿಫಲತೆ ಎದ್ದು ಕಾಣುತ್ತಿದ್ದು, ಯುವತಿಗೆ ನ್ಯಾಯ ಒದಗಿಸಿಕೊಡುವ ನಿಟ್ಟಿನಲ್ಲಿ ರಾಷ್ಟ್ರವ್ಯಾಪಿ ಹೋರಾಟ ನಡೆಯಲಿದೆ ಎಂದು ಎಚ್ಚರಿಕೆ ನೀಡಿದರು.

Recommended Video

RR Nagar ByElection : ಕುಮಾರಣ್ಣ ಸ್ಪಷ್ಟವಾಗಿ ಹೇಳಿದರು | Oneindia Kannada

ಅತ್ಯಾಚಾರ ಖಂಡನೆ ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಪ್ರಮುಖರಾದ ಮೊಹಮ್ಮದ್ ತೌಫಿಕ್, ಚಂದ್ರ ವಾಲ್ತೂರು, ಕೆ.ಎಸ್ ವಿಜಯ್, ಲಿಯಾಕತ್, ನಜೀರ್ ಅಹಮ್ಮದ್ ಬೆಳವಾಯಿ ಮೊದಲಾದವರು ಪಾಲ್ಗೊಂಡಿದ್ದರು.

English summary
A protest was held in Kundapur in Udupi district today, condemning the rape of Dalit girl Manisha Valmiki in Uttar Pradesh's Hathras district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X