ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ; ಪುಲ್ವಾಮ ಹುತಾತ್ಮರ ಸ್ಮರಣಾರ್ಥ ಯೋಧ ನಮನ

By ಉಡುಪಿ ಪ್ರತಿನಿಧಿ
|
Google Oneindia Kannada News

ಉಡುಪಿ, ಫೆಬ್ರವರಿ 15; ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ವೀರ ಸೈನಿಕರು ರಾಷ್ಟ್ರಕ್ಕಾಗಿ ಮಾಡಿದ ತ್ಯಾಗ ಬಲಿದಾನವನ್ನು ಸ್ಮರಿಸುವ ನಿಟ್ಟಿನಲ್ಲಿ ಸ್ವಚ್ಛ ಭಾರತ್ ಫ್ರೆಂಡ್ಸ್, ಶ್ರೀ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ಉಡುಪಿ, ಉಡುಪ ರತ್ನ ಪ್ರತಿಷ್ಠಾನ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡಿನ ಹುತಾತ್ಮ ಸೈನಿಕ ಯುದ್ಧ ಸ್ಮಾರಕದಲ್ಲಿ ಭಾನುವಾರ ಸಂಜೆ ಯೋಧ ನಮನ ಕಾರ್ಯಕ್ರಮ ನಡೆಯಿತು.

ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕ ಗಣೇಶ್ ರಾವ್ ಮಾತನಾಡಿ, "ಯುವಜನರಿಗೆ ಸೇನೆಗೆ ಸೇರಲು ಇದೊಂದು ಸೂಕ್ತವಾದ ಸಂದರ್ಭ. ಸೇನೆಯಲ್ಲಿ ಸಿಗುವ ಆತ್ಮತೃಪ್ತಿ ಬೇರೆ ಯಾವುದರಲ್ಲಿಯೂ ಸಿಗಲು ಅಸಾಧ್ಯ. ಅರ್ಪಣಾ ಮನೋಭಾವದಿಂದ ರಾಷ್ಟ್ರಕ್ಕಾಗಿ ಸೇವೆ ಸಲ್ಲಿಸಿ ಬದುಕನ್ನು ರಾಷ್ಟ್ರಕ್ಕಾಗಿ ಸಮರ್ಪಿಸಿದ ಹೆಮ್ಮೆಯ ಯೋಧರೇ ನಮಗೆಲ್ಲ ಸ್ಪೂರ್ತಿ. ದೇಶಕ್ಕಾಗಿ ಸೇವೆ ಸಲ್ಲಿಸಲು ಸಿಕ್ಕಿದ ಅವಕಾಶ ಎಂದಿಗೂ ಮರೆಯಲು ಅಸಾಧ್ಯ" ಎಂದರು.

ಜಮ್ಮುಕಾಶ್ಮೀರದಲ್ಲಿ ಪುಲ್ವಾಮಾ ದಾಳಿಯ ಕರಾಳ ದಿನವೇ ಸುಧಾರಿತ ಸ್ಫೋಟಕ ಪತ್ತೆಜಮ್ಮುಕಾಶ್ಮೀರದಲ್ಲಿ ಪುಲ್ವಾಮಾ ದಾಳಿಯ ಕರಾಳ ದಿನವೇ ಸುಧಾರಿತ ಸ್ಫೋಟಕ ಪತ್ತೆ

ಭೂಸೇನೆಯಲ್ಲಿ ಸೇವೆ ಸಲ್ಲಿಸಿದ ಮಾಜಿ ಸೈನಿಕ ವಾದಿರಾಜ ಹೆಗ್ಡೆ ಮಾತನಾಡಿ, "ಜೀವದ ಹಂಗು ತೊರೆದು ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡುವ ಯೋಧರಿಂದ ಕಲಿಯುವುದು ಸಾಕಷ್ಟಿದೆ. ದೇಶದ ವಿಚಾರ ಬಂದಾಗ ಒಗ್ಗಟ್ಟಿನ ಧ್ವನಿ ಇರಬೇಕು" ಎಂದು ಹೇಳಿದರು.

ಪುಲ್ವಾಮಾ ದಾಳಿ; ಹುತಾತ್ಮ ಗುರು ಸಮಾಧಿಗೆ ಪ್ರತ್ಯೇಕ ಪೂಜೆ ಪುಲ್ವಾಮಾ ದಾಳಿ; ಹುತಾತ್ಮ ಗುರು ಸಮಾಧಿಗೆ ಪ್ರತ್ಯೇಕ ಪೂಜೆ

Pulwama Attack Anniversary: Udupi Salutes Bravehearts

Recommended Video

ಎಲ್‌ಪಿಜಿ ಸಿಲಿಂಡರ್‌ ಬೆಲೆ 50ರೂ ಹೆಚ್ಚಳ..!ಇಂದಿನಿಂದಲೇ ಪರಿಷ್ಕ್ರತ ದರ ಜಾರಿಗೆ | Oneindia Kannada

ನೆರೆದ ಎಲ್ಲರೂ ಹುತಾತ್ಮ ಯೋಧರಿಗೆ ಮೊಂಬತ್ತಿ ಬೆಳಗಿಸಿ, ಪುಷ್ಪ ನಮನ ಸಮರ್ಪಿಸಿದರು. ಸಾಮೂಹಿಕ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು. ಸಿದ್ಧಬಸಯ್ಯ ಸ್ವಾಮಿ ಚಿಕ್ಕಮಠ ಪ್ರಸ್ತಾವಿಕವಾಗಿ ಮಾತನಾಡಿದರು. ರಾಘವೇಂದ್ರ ಪ್ರಭು ಕರ್ವಾಲು ಸ್ವಾಗತಿಸಿದರು, ಜನಾರ್ದನ್ ಕೊಡವೂರು ವಂದಿಸಿದರು. ಗಣೇಶ್ ಪ್ರಸಾದ್ ಜಿ. ನಾಯಕ್ ಕಾರ್ಯಕ್ರಮ ನಿರೂಪಿಸಿದರು.

English summary
Various organisations remembered the martyrs of Pulwama attack on Sunday at at Ajjarkad war memorial, Udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X