Rahul Gandhi Udupi Visit: ಏಪ್ರಿಲ್ 27 ರಂದು ಉಡುಪಿ ಜಿಲ್ಲೆಗೆ ರಾಹುಲ್ ಗಾಂಧಿ ಭೇಟಿ: ಕಾರ್ಯಕ್ರಮದ ವಿವರ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಏಪ್ರಿಲ್ 27ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ಏಪ್ರಿಲ್ 27 ರ ಗುರುವಾರ ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಕೊಲ್ಲೂರು ಮೂಕಾಂಬಿಕಾದೇವಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ದೇವರ ದರ್ಶನ ಪಡೆಯಲಿದ್ದಾರೆ.
ವಿಧಾನಸಭಾ ಚುನಾವಣೆಯ ಪ್ರಯುಕ್ತ ಕಾಪು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪರವಾಗಿ ಪ್ರಚಾರ ಮಾಡಲಿದ್ದಾರೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ಉಚ್ಚಿಲದಲ್ಲಿ ಮಹಾಲಕ್ಷ್ಮೀ ದೇಗುಲದ ಸಭಾಂಗಣದಲ್ಲಿ ಮೀನುಗಾರರ ಜೊತೆ ಸಂವಾದ ನಡೆಸಲಿದ್ದು, ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.

ಮೀನುಗಾರ ಜೊತೆ ಸಭೆ ಮುಕ್ತಾಯವಾದ ಬಳಿಕ ಮೂಳೂರು ಭಾಗದಲ್ಲಿ ರೋಡ್ ಶೋ ಕೂಡ ನಡೆಸಲಿದ್ದಾರೆ. ಕಾಪುವಿನ ಕಾರ್ಯಕ್ರಮ ಮುಗಿಸಿ ಸಂಜೆ 5 ಗಂಟೆಗೆ ಮಂಗಳೂರಿಗೆ ತೆರಳಲಿದ್ದಾರೆ. ಸದ್ಯ ರಾಜ್ಯ ರಾಜಕೀಯ ಅಖಾಡ ರಂಗೇರಿದ್ದು, ಎಲ್ಲಾ ಪಕ್ಷಗಳು ಭರ್ಜರಿ ಪ್ರಚಾರದಲ್ಲಿ ತೊಡಗಿಕೊಂಡಿವೆ.
ಕಾಂಗ್ರೆಸ್‌ನ ನಾಯಕಿ ಪ್ರಿಯಾಂಕ ಗಾಂಧಿ ಕೂಡ ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪರವಾಗು ಪ್ರಚಾರ ಮಾಡುತ್ತಿದ್ದಾರೆ. ಚಾಮರಾಜ ನಗರ, ಮೈಸೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರಿಯಾಂಕ ಗಾಂಧಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸೇರಿದಂತೆ ರಾಜ್ಯದ ಹಲವು ನಾಯಕರು ವಿವಿಧ ಭಾಗಗಳಲ್ಲಿ ಅಬ್ಬರದ ಪ್ರಚಾರ ನಡೆಸುತ್ತಿದ್ದಾರೆ.












Click it and Unblock the Notifications