ಉಡುಪಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಡುಪಿ ಜಿಲ್ಲೆಯಲ್ಲಿ ಮನೆ ಕಟ್ಟಲು ಮಳೆ ನೀರು ಕೊಯ್ಲು ಕಡ್ಡಾಯ

|
Google Oneindia Kannada News

ಉಡುಪಿ, ಜುಲೈ 11: ಉಡುಪಿ ಜಿಲ್ಲೆಯ ಎಲ್ಲಾ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮನೆ ನಿರ್ಮಾಣ ಸಂದರ್ಭ ಮಳೆ ನೀರು ಮರುಪೂರಣ ಯೋಜನೆ ಅಳವಡಿಕೆಯನ್ನು ಕಡ್ಡಾಯಗೊಳಿಸಲಾಗಿದೆ. ಇಲ್ಲದಿದ್ದರೆ, ನಿರ್ಮಾಣ ಪೂರ್ಣಗೊಂಡಿದೆ ಎಂದು ನೀಡಲಾಗುವ ಪ್ರಮಾಣಪತ್ರ (ಕಂಪ್ಲೀಷನ್ ಸರ್ಟಿಫಿಕೇಟ್) ಸಿಗುವುದಿಲ್ಲ ಎಂದು ತಿಳಿದುಬಂದಿದೆ.

ಭಾರತ ಸರ್ಕಾರವು ಜಲಭದ್ರತೆಗಾಗಿ ಜಲಶಕ್ತಿ ಅಭಿಯಾನ ಎಂಬ ಕಾರ್ಯಕ್ರಮವನ್ನು ರಾಜ್ಯ ಸರ್ಕಾರದ ಸಹಯೋಗದಲ್ಲಿ ಹಮ್ಮಿಕೊಂಡಿದ್ದು, ಉಡುಪಿ ಜಿಲ್ಲೆಯಲ್ಲಿ ಜಲ ಸಂರಕ್ಷಣೆ ಆಂದೋಲನವನ್ನು ಪರಿಣಾಮಕಾರಿಯಾಗಿ ಕೈಗೊಳ್ಳಲು ನಿನ್ನೆ ಸಂಜೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರ ಅಧ್ಯಕ್ಷತೆಯಲ್ಲಿ ತೀರ್ಮಾನಿಸಲಾಯಿತು.

 ತಂಬಾಕು ಕಂಪನಿಗಳೊಂದಿಗೆ ಸಹಭಾಗಿತ್ವ ಬೇಡ; ಉಡುಪಿ ಡಿಸಿ ಎಚ್ಚರಿಕೆ ತಂಬಾಕು ಕಂಪನಿಗಳೊಂದಿಗೆ ಸಹಭಾಗಿತ್ವ ಬೇಡ; ಉಡುಪಿ ಡಿಸಿ ಎಚ್ಚರಿಕೆ

ಈಗಾಗಲೇ ಪ್ರಗತಿಯಲ್ಲಿರುವ ಮನೆಗಳು, ಕಾಮಗಾರಿ ಪೂರ್ಣಗೊಳ್ಳುವ ಮೊದಲು ಮಳೆ ನೀರು ಕೊಯ್ಲು ಯೋಜನೆಯನ್ನು ಕೈಗೊಳ್ಳಬೇಕು. ಹೊಸದಾಗಿ ನಿರ್ಮಾಣ ಗೊಳ್ಳಲಿರುವ ಮನೆಗಳ ಮೂಲ ಯೋಜನೆಯಲ್ಲಿಯೇ ಮಳೆ ನೀರು ಕೊಯ್ಲು ಯೋಜನೆಯೂ ಸೇರಿರಬೇಕು. ಇಲ್ಲದಿದ್ದರೆ ಅಂತಹ ಮನೆ ನಿರ್ಮಾಣಕ್ಕೆ ಲೈಸೆನ್ಸ್ ನೀಡದಂತೆ ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ಗಳಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಸೂಚಿಸಿದರು.

Rain water harvesting in home is now compulsory in Udupi

ಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ: ಮಾಹಿತಿ ನೀಡಲು ಸೂಚನೆಮಣಿಪಾಲದಲ್ಲಿ ಸುಸ್ಥಿರ ಸಂಚಾರ ವ್ಯವಸ್ಥೆ: ಮಾಹಿತಿ ನೀಡಲು ಸೂಚನೆ

ತೆರೆದ ಬಾವಿ, ಕೊಳವೆ ಬಾವಿ ಅಥವಾ ಪ್ರತ್ಯೇಕ ಇಂಗು ಗುಂಡಿ ಕೊರೆದು ಮಳೆ ನೀರು ಶೇಖರಣೆಗೆ ಯೋಜನೆ ಹಾಕಿಕೊಳ್ಳಬೇಕು. ಇತ್ತೀಚಿನ ಬೇಸಿಗೆಯಲ್ಲಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ತೀವ್ರ ನೀರಿನ ಸಮಸ್ಯೆ ಎದುರಾಗಿದ್ದು, ಈ ಹಿನ್ನೆಲೆಯಲ್ಲಿ ಮಳೆ ನೀರು ಕೊಯ್ಲು ಕಡ್ಡಾಯಗೊಳಿಸಲಾಗುವುದು ಎಂದು ಅವರು ಹೇಳಿದರು.

English summary
Udupi district administration has made rain water harvesting compulsory for construction of houses in Udupi district. Central government has introduced jalashakthi campaign for water security, as a part of this, rain water harvesting is introduced in udupi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X