Santosh Patil Suicide: ಸಚಿವ ಈಶ್ವರಪ್ಪ ವಿರುದ್ಧ ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ

ಉಡುಪಿ, ಏಪ್ರಿಲ್ 12: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್.​​ ಈಶ್ವರಪ್ಪ ವಿರುದ್ಧ ಶೇ.40 ಕಮಿಷನ್‌ ಆರೋಪ ಮಾಡಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಕೆಲವು ದಿನಗಳ ಹಿಂದೆ ಡೆತ್‌ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದರು. ಇದೀಗ ಉಡುಪಿ ಶಾಂಭವಿ ಲಾಡ್ಜ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸಚಿವ ಕೆ.ಎಸ್.​​ ಈಶ್ವರಪ್ಪ ವಿರುದ್ಧದ ಆರೋಪಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ.

ಉಡುಪಿಯ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣ ಸಮೀಪದ ಶಾಂಭವಿ ಲಾಡ್ಜ್‌ನಲ್ಲಿ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ದು, ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಡೆತ್ ನೋಟ್ ಬರೆದಿದ್ದರು.

ಶಾಂಭವಿ ಲಾಡ್ಜ್‌ನ ರೂಮ್ ನಂಬರ್ 207 ರಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್‌ನ ಇಬ್ಬರು ಗೆಳೆಯರು ಪಕ್ಕದ ಕೊಠಡಿಯಲ್ಲಿ ಪತ್ತೆಯಾಗಿದ್ದಾರೆ. ಉಡುಪಿ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Santosh Patil Contractor Who Filed Compliant Against Minister KS Eshwarappa Commits Suicide

ಗುತ್ತಿಗೆದಾರ ಸಂತೋಷ್ ಪಾಟೀಲ್ ಕೆಲ ಮಾಧ್ಯಮ ಪ್ರತಿನಿಧಿಗಳ ಮೊಬೈಲ್‌ಗೆ ಡೆತ್‌ನೋಟ್ ವಾಟ್ಸ​​ಪ್​​ ಮೆಸೇಜ್ ಕಳಿಸಿ ನಾಪತ್ತೆಯಾಗಿದ್ದರು ಎಂದು ತಿಳಿದು ಬಂದಿದೆ.

ವಾಟ್ಸ​​ಪ್​​ ಮೆಸೇಜ್‌ನಲ್ಲಿ ಗುತ್ತಿಗೆದಾರ ಸಂತೋಷ ಪಾಟೀಲ್ ಡೆತ್​ ನೋಟ್ ಕಳಿಸಿದ್ದಾರೆ. ಈ ಡೆತ್‌ನೋಟ್ ಮೆಸೇಜ್ ಮಾಹಿತಿ ಬೆನ್ನಲ್ಲೇ ಸಂತೋಷ ಪಾಟೀಲ್ ಪತ್ತೆಗೆ ಪೊಲೀಸರು ಮುಂದಾಗಿದ್ದರು. ಆಗ ಅವರ ಮೊಬೈಲ್ ಉಡುಪಿಯಲ್ಲಿ ಸಕ್ರಿಯವಾಗಿದೆ ಎಂಬ ಮಾಹಿತಿ ಲಭ್ಯವಾಗಿತ್ತು.

Santosh Patil Contractor Who Filed Compliant Against Minister KS Eshwarappa Commits Suicide

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​ ಸಚಿವ ಕೆ.ಎಸ್. ಈಶ್ವರಪ್ಪ ತಾವು ಮಾಡಿದ 108 ಕಾಮಗಾರಿ ಬಿಲ್ ಪಾವತಿಗೆ 40 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂದು ಗುತ್ತಿಗೆದಾರ ಸಂತೋಷ್ ಪಾಟೀಲ್ ಆರೋಪಿಸಿದ್ದರು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಪತ್ರ ಬರೆದಿದ್ದರು.

ಡೆತ್ ನೋಟ್ ಸಂದೇಶದಲ್ಲೇನಿದೆ?
ನನ್ನ ಸಾವಿಗೆ ನೇರ ಕಾರಣ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್. ಈಶ್ವರಪ್ಪ. ಕರ್ನಾಟಕ ಸರ್ಕಾರದಿಂದ ಇವರಿಗೆ ತಕ್ಕ ಶಿಕ್ಷೆ ಆಗಬೇಕು. ನನ್ನೆಲ್ಲಾ ಆಸೆಗಳನ್ನು ಬದಿಗೊತ್ತಿ ಈ ನಿರ್ಧಾರ ಮಾಡಿರುತ್ತೇನೆ. ನನ್ನ ಹೆಂಡತಿ, ಮಗುವಿಗೆ ಸರ್ಕಾರ ಅಂದರೆ ಮಾನ್ಯ ಪ್ರಧಾನಮಂತ್ರಿಗಳು ಹಾಗೂ ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಮ್ಮ ಹಿರಿಯ ಲಿಂಗಾಯತ ನಾಯಕರಾದ ಬಿ.ಎಸ್. ಯಡಿಯೂರಪ್ಪನವರು ಹಾಗೆ ಅವರಿವರೆನ್ನದೇ ಎಲ್ಲರು ಸಹಾಯಹಸ್ತ ನೀಡಬೇಕೆಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ.

ಮಾಧ್ಯಮ ಮಿತ್ರರಿಗೆ ಕೋಟಿ ಕೋಟಿ ಧನ್ಯವಾದಗಳು. ನನ್ನ ಜೊತೆ ಬಂದ ನನ್ನ ಗೆಳಯರಾದ ಸಂತೋಷ್ ಮತ್ತು ಪ್ರಶಾಂತ್‍ಗೆ ನಾನು ಪ್ರವಾಸ ಹೋಗೋಣ ಎಂದು ನನ್ನ ಜೊತೆಗೆ ಕರೆದುಕೊಂಡ ಬಂದಿರುತ್ತೇನೆ ಅಷ್ಟೇ. ಅವರಿಗೂ ನನ್ನ ಸಾವಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಬರೆದು ಸಂದೇಶ ಕಳಿಸಿದ್ದಾರೆ.

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಬೆಂಗಳೂರಿನಲ್ಲಿ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ SAHAI ಸಹಾಯವಾಣಿ ಇಂತಿದೆ: 080 - 25497777

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+