School Holiday: ನವೆಂಬರ್ 28ರಂದು ರಾಜ್ಯದ ಈ ಭಾಗದಲ್ಲಿನ ಎಲ್ಲಾ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ
School Holiday: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ವೇಳೆ ಭಾರೀ ಮಳೆ ಹಿನ್ನೆಲೆ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಸಾಲು ರಜೆಗಳನ್ನೇ ನೀಡಲಾಗಿತ್ತು. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲೇ ಹೆಚ್ಚು. ಇನ್ನೂ ಇದೀಗ ಮತ್ತೆ ನವೆಂಬರ್ 28 ಶುಕ್ರವಾರ ಈ ಭಾಗದಲೆಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಹಾಗಾದ್ರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಬಾರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂಗಾರು ವೇಳೆ ಭಾರೀ ಮಳೆ ಸುರಿದ ಕಾರಣ ವಿದ್ಯಾರ್ಥಿಗಳ ಆರೋಗ್ಯ ದೃಷ್ಟಿಯಿಂದ ಶಾಲೆಗಳಿಗೆ ಸಾಲು ರಜೆಗಳನ್ನೇ ಘೋಷಣೆ ಮಾಡಲಾಗಿತ್ತು. ಅದರಲ್ಲೂ ಕರವಾಳಿ ಜಿಲ್ಲೆಗಳಲ್ಲಿ ನಿರಂತರವಾಗಿ ಧಾರಾಕಾರ ಮಳೆ ಮುಂದುವರೆದಿದ್ದ ಕಾರಣ ಈ ಭಾಗದಲ್ಲಿ ಶಾಲಾ-ಕಾಲೇಜುಗಳಿಗೆ ಹೆಚ್ಚು ರಜೆಗಳನ್ನು ಘೋಷಿಸಲಾಗಿತ್ತು. ಅಲ್ಲದೆ, ಈ ರಜೆಗಳನ್ನು ಸರಿದೂಗಿಸುವ ಕಾರ್ಯವನ್ನು ಕೂಡ ಮಾಡಲಾಗಿದ್ದು, ಮನೆಯಿಂದಲೇ ಆನ್‌ಲೈನ್‌ನಲ್ಲಿ ತರಗತಿ ನಡೆಸಲಾಗಿತ್ತು. ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಇನ್ನೂ ಇದೀಗ ಕರವಾಳಿ ಜಿಲ್ಲೆಯಾದ ಉಡುಪಿಯ ಈ ಭಾಗಗಳಲ್ಲಿ ನವೆಂಬರ್ 28ರಂದು ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈಗ ಸದ್ಯ ಯಾವುದೇ ಹವಾಮಾನ ವೈಪರಿತ್ಯ ಇಲ್ಲ, ಆದರೆ, ರಜೆ ಘೋಷಣೆ ಮಾಡಿದ್ದು ಯಾಕೆ ಎನ್ನುವ ಪ್ರಶ್ನೆ ಬಹುತೇಕ ಮಂದಿ ತಲೆಯಲ್ಲಿರುತ್ತದೆ. ಅದೆಲ್ಲದಕ್ಕೂ ಉತ್ತರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಲಿದ್ದಾರೆ. ಶ್ರೀಕೃಷ್ಣ ದೇವರ ದರ್ಶನ ಪಡೆದು ಬಳಿಕ ಐತಿಹಾಸಿಕ "ಲಕ್ಷ ಕಂಠ ಗೀತ ಗಾಯನ" ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಹಿನ್ನೆಲೆ ಜಿಲ್ಲೆಯ ಈ ಭಾಗಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಉಡುಪಿ ಭೇಟಿ ಹಿನ್ನೆಲೆ ಉಡುಪಿಯ ಮೂರು ಠಾಣಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ. ಉಡುಪಿ ನಗರ ಠಾಣೆ, ಮಲ್ಪೆ ಠಾಣೆ, ಮಣಿಪಾಲ ಠಾಣಾ ವ್ಯಾಪ್ತಿಯಲ್ಲಿನ ಎಲ್ಲಾ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ನವಂಬರ್ 28ರಂದು ಒಂದು ದಿನ ಮಾತ್ರ ಉಡುಪಿ ಜಿಲ್ಲಾಧಿಕಾರಿ ಸ್ವರೂಪ್ ಅವರು ರಜೆ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಅವರು ಶಾಲಾ ಮಕ್ಕಳ ಸಂಚಾರಕ್ಕೆ ಅಡಚಣೆ ಉಂಟಾಗುವ ಸಾಧ್ಯತೆ ಹಾಗೂ ಸುರಕ್ಷತೆ, ಭದ್ರತೆ ಶಿಷ್ಟಾಚಾರ ಪಾಲನೆ ಮಾಡು ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 28ರಂದು ದೆಹಲಿಯಿಂದ ನೇರವಾಗಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ 11:5 ಗಂಟೆಗೆ ಆಗಮಿಸಲಿದ್ದಾರೆ. ಅಲ್ಲಿಂದ ಬೆಳಗ್ಗೆ 11:10 ಗಂಟೆಗೆ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಪ್ರಯಾಣ ಬೆಳೆಸಲಿದ್ದಾರೆ. ಈ ಹಿನ್ನೆಲೆ ಅಂದ ನಗರದ ಕೆಲ ಮಾರ್ಗಗಳಲ್ಲಿ ಸಂಚಾರ ನಿಷೇಧ, ಇನ್ನೂ ಕೆಲವು ಮಾರ್ಗಗಳಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಶುಕ್ರವಾರ ಬೆಳಗ್ಗೆ 9ರಿಂದ ಸಂಜೆ 3 ಗಂಟೆಯವರೆಗೆ ಈ ನಿಯಮ ಜಾರಿಯಲ್ಲಿರಲಿದೆ ಎಂದು ತಿಳಿದುಬಂದಿದೆ.
ಎಲ್ಲೆಲ್ಲಿ ಸಂಚಾರ ನಿಷೇಧ ಹಾಗೂ ಪರ್ಯಾಯ ಮಾರ್ಗಗಳು
* ಆದಿ ಉಡುಪಿ ಹೆಲಿಪ್ಯಾಡ್‌ನಿಂದ ಕರಾವಳಿ ಜಂಕ್ಷನ್‌ವರೆಗೆ, ಬನ್ನಂಜೆ-ಶಿರಿಬೀಡು-ಕಲ್ಸಂಕ-ಶ್ರೀ ಕೃಷ್ಣ ಮಠದ ವರೆಗಿನ ರಸ್ತೆಗಳಲ್ಲಿ ಯಾವುದೇ ವಾಹನಗಳ ಸಂಚಾರ ಹಾಗೂ ಪಾರ್ಕಿಂಗ್‌ಗೆ ನಿಷೇಧ ಹೇರಲಾಗಿದೆ. ಮಣಿಪಾಲದಿಂದ ಉಡುಪಿ ಕಡೆಗೆ ಬರುವ ಎಲ್ಲಾ ವಾಹನಗಳು ಶಾರದಾ ಕಲ್ಯಾಣ ಮಂಟಪ-ಬೀಡಿನಗುಡ್ಡೆ ಮಾರ್ಗವಾಗಿ ಉಡುಪಿಗೆ ಬರುವಂತೆ ಸೂಚಿಸಲಾಗಿದೆ.
* ಕುಂದಾಪುರದಿಂದ ಉಡುಪಿಗೆ ಬರುವ ಎಲ್ಲಾ ವಾಹನಗಳು ಕರಾವಳಿ ಫ್ಲೈ ಓವರ್-ಅಂಬಲಪಾಡಿ-ಬ್ರಹ್ಮಗಿರಿ ಜೋಡುಕಟ್ಟೆ ಮಾರ್ಗವಾಗಿ ಉಡುಪಿಗೆ ಬರಲು ಸೂಚಿಸಲಾಗಿದೆ. ಮಂಗಳೂರಿನಿಂದ ಉಡುಪಿಗೆ ಬರುವ ವಾಹನಗಳು ಕಿನ್ನಿಮುಲ್ಕಿ ಸ್ವಾಗತಗೋಪುರ-ಜೋಡುಕಟ್ಟೆ ಮಾರ್ಗವಾಗಿ ಬರಲು ಸೂಚಿಸಲಾಗಿದೆ.
* ಅಂಬಾಗಿಲು ಗುಂಡಿಬೈಲ್ ಮಾರ್ಗವಾಗಿ ಉಡುಪಿಗೆ ಬರುವ ಎಲ್ಲಾ ವಾಹನಗಳು ಗುಂಡಿಬೈಲ್ ರಸಿಕಾ ಬಾರ್ ಮೂಲಕ ದೊಡ್ಡಣಗುಡ್ಡೆ- ಎಂಜಿಎಂ-ಎಸ್.ಎಂ.ಕೆ.ಎಂ-ಬೀಡಿನಗುಡ್ಡೆ ಮುಖೇನ ಉಡುಪಿಗೆ ಬರಬೇಕು. ಇನ್ನು ಮಲ್ಪೆಯಿಂದ ಬರುವ ಎಲ್ಲಾ ವಾಹನಗಳು ಕುತ್ಪಾಡಿ ಮಾರ್ಗವಾಗಿ ಅಂಬಲಪಾಡಿ ಮೂಲಕ ಉಡುಪಿಗೆ ಬರಲು ಸೂಚಿಲಾಗಿದೆ. ಆದರೆ, ಆಂಬ್ಯುಲೆನ್ಸ್, ಅಗ್ನಿಶಾಮಕ ಸೇರಿದಂತೆ ತುರ್ತು ಸೇವೆಗಳ ವಾಹನಗಳಿಗೆ ಈ ನಿಯಮ ಅನ್ವಯ ಆಗುವುದಿಲ್ಲ ಎಂದು ಉಡುಪಿ ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications