Udupi Rain: ಹೆಬ್ರಿ ಭಾಗಗಳಲ್ಲಿ ಎರಡು ದಿನಗಳಿಂದ ಭರ್ಜರಿ ಮಳೆ, ಜನ ಫುಲ್ ಖುಷ್‌

ಉಡುಪಿ, ಏಪ್ರಿಲ್‌ 13: ಬಿರು ಬಿಸಿಲಿನ ಝಳಕ್ಕೆ ಹೈರಾಣಾಗಿದ್ದ ಉಡುಪಿ ಜನತೆಗೆ ಮಳೆರಾಯ ತಂಪೆರೆದಿದ್ದಾನೆ. ಏಪ್ರಿಲ್‌ 12ರಿಂದ ಏಪ್ರಿಲ್‌ 14ರವರಗೆ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಕಳೆದ ಎರಡು ದಿನಗಳಿಂದ ಕೆಲವು ಭಾಗಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ.

ಉಡುಪಿ ಜಿಲ್ಲೆಯಲ್ಲೂ ಮೊದಲ ಮಳೆಯಾಗಿದ್ದು, ಹೆಬ್ರಿ ತಾಲೂಕಿನ ಕಚ್ಚೂರು ಭಾಗಗಳಲ್ಲಿ ಭರ್ಜರಿ ಮಳೆಯಾಗಿದೆ. ಎರಡು ದಿನಗಳಿಂದ ಮೋಡ ಮುಸುಕಿದ ವಾತಾವರಣವಿದ್ದು, ನಿರೀಕ್ಷೆಯಂತೆ ಸಂಜೆ ವೇಳೆ ಗುಡುಗು ಸಹಿತ ಜೋರು ಮಳೆಯಾಗಿದೆ. ಮನೆಯ ಅಂಗಳಲಲ್ಲಿ ನೀರು ಹರಿದು ಹೋಗುವ ಮಟ್ಟಿಗೆ ಮಳೆಯಾಗಿದ್ದು, ಜನ ಫುಲ್ ಖುಷಿಯಾಗಿದ್ದಾರೆ.

Seasons First Rain Happening In Hebri Udupi District

ಈ ಬಾರಿಯ ಬಿರು ಬೇಸಿಗೆಯಿಂದ ಬಳಲಿದ್ದ ಜನರಿಗೆ ಸದ್ಯ ತಂಪಾದ ವಾತಾವರಣ ನಿರ್ಮಾಣವಾಗಿದೆ. ಇನ್ನು ಉಡುಪಿ ಜಿಲ್ಲೆಯ ಒಂದು ಭಾಗದಲ್ಲಿ ಮಳೆಯಾಗಿದ್ದು, ಕುಂದಾಪುರ, ಬೈಂದೂರು ತಾಲೂಕಿನ ಪ್ರದೇಶದಲ್ಲಿ ಧಗೆ ಮತ್ತಷ್ಟು ಹೆಚ್ಚಾಗಿದೆ. ಹೀಗಾಗಿ ಈ ಭಾಗಗಳಲ್ಲಿಯೂ ರಾತ್ರಿ ಮಳೆಯಾಗುವ ನಿರೀಕ್ಷೆ ಇದೆ.

ಇನ್ನು ದಾವಣಗೆರೆ ಹಾಗೂ ಶಿವಮೊಗ್ಗದ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಡಿಪಿ ಸತೀಶ್ ಎನ್ನುವವರು ಮಳೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಶಿವಮೊಗ್ಗದ ಸುತ್ತಮುತ್ತ ಭಾಗದಲ್ಲಿ ಗುಡುಗು ಸಿಡಿಲಿನೊಂದಿಗೆ ಧಾರಾಕಾರ ವರ್ಷಧಾರೆ ಸುರಿದಿದೆ. ಜನರು ಸುಮಾರು ಎರಡು ಗಂಟೆಗಳ ಕಾಲ ಮಳೆಯಾಗಿದ್ದು, ವರ್ಷದ ಮೊದಲ ಮಳೆಯ ಅಬ್ಬರಕ್ಕೆ ಜನ ಸಂತಸಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+