ಉಡುಪಿಯಲ್ಲಿ ಹಿರಿಯ ಕಾಂಗ್ರೆಸಿಗ ಕೆಕೆ ಸರಳಾಯ ಆತ್ಮಹತ್ಯೆ

ಉಡುಪಿ, ಫೆಬ್ರವರಿ 29: ಹಿರಿಯ ಕಾಂಗ್ರೆಸ್ ಮುಖಂಡ, ಸಹಕಾರಿ ಕ್ಷೇತ್ರದ ಧುರೀಣ, ಪಟಾಕಿ ಸರಳಾಯರೆಂದೇ ಪ್ರಸಿದ್ಧರಾಗಿದ್ದ ಕೆಕೆ ಸರಳಾಯ (88) ಮಾನಸಿಕ ಖಿನ್ನತೆಯಿಂದ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಮ್ಮ ಪಣಿಯಾಡಿಯ ನಿವಾಸದಲ್ಲಿ ಮಧ್ಯಾಹ್ನ ಊಟ ಮುಗಿಸಿದ್ದ ಸರಳಾಯರು ಮನೆ ಎದುರಿನ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಬ್ಧ ಕೇಳಿದ ನೆರೆ ಮನೆಯವರು ಬಾವಿಗೆ ಬಂದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ.

ಅವರು ಹಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಇವರ ಇಬ್ಬರು ಹೆಣ್ಣುಮಕ್ಕಳು ಮದುವೆಯಾಗಿ ಬೆಂಗಳೂರು ಮತ್ತು ವಿದೇಶದಲ್ಲಿ ನೆಲೆಸಿದ್ದಾರೆ. ಇವರ ಪತ್ನಿ ಹಲವು ವರ್ಷಗಳ ಹಿಂದೆಯೇ ಸಾವನ್ನಪ್ಪಿದ್ದರು. ಸರಳಾಯರು ಮನೆಯಲ್ಲಿ ಒಂಟಿ ಜೀವನ ನಡೆಸುತ್ತಿದ್ದರು. ಇದೇ ಕೊರಗಿನಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

Senior Congress Member KK Saralaya Committed Suicide

ಹಿರಿಯ ಕಾಂಗ್ರೆಸ್ ಮುಖಂಡರಾಗಿದ್ದ ಸರಳಾಯರು 76 ಬಡಗಬೆಟ್ಟು ಬೈಲೂರು ಮಂಡಲ ಪ್ರಧಾನರಾಗಿದ್ದರು. ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಪಕ್ಷದಲ್ಲಿ ಸಕ್ರಿಯರಾಗಿದ್ದರು. ಸಹಕಾರಿ ಕ್ಷೇತ್ರದಲ್ಲಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಸರಳಾಯರು ಕೊರಂಗ್ರಪಾಡಿ ವ್ಯವಸಾಯಿಕ ಸಹಕಾರಿ ಸಂಘ, ಉಡುಪಿ ಟೌನ್ ಕೋ ಅಪರೇಟಿವ್ ಸೊಸೈಟಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ರಥಬೀದಿಯಲ್ಲಿ ಪಟಾಕಿ ವ್ಯಾಪಾರ ಆರಂಭಿಸಿ ಯಶಸ್ವಿಯಾಗಿದ್ದರು. ಹೀಗಾಗಿ ಅವರು ಪಟಾಕಿ ಸರಳಾಯರೆಂದೇ ಖ್ಯಾತರಾಗಿದ್ದರು. ಅಗ್ನಿಶಾಮಕ ದಳ ಕಾರ್ಯಚರಣೆಯ ಮೂಲಕ ಶವವನ್ನು ಬಾವಿಯಿಂದ ಮೇಲಕ್ಕೆ ಎತ್ತಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+