ಉಡುಪಿ ಜಿಲ್ಲೆಯಲ್ಲಿ ಏಳು ಪದವಿ ವಿದ್ಯಾರ್ಥಿಗಳಿಗೆ ಕೊರೊನಾ ದೃಢ
ಉಡುಪಿ, ನವೆಂಬರ್ 21: ಅಂತಿಮ ವರ್ಷದ ಕಾಲೇಜು ತರಗತಿಗಳು ಪ್ರಾರಂಭವಾಗುತ್ತಲೇ ಜಿಲ್ಲೆಯಲ್ಲಿ ಏಳು ಪದವಿ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಉಡುಪಿ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಡೆದ ಕೋವಿಡ್ ಪರೀಕ್ಷೆಯಲ್ಲಿ 7 ವಿದ್ಯಾರ್ಥಿಗಳಿಗೆ ಸೋಂಕು ಧೃಢಪಟ್ಟಿದೆ. ಪದವಿ ಕಾಲೇಜು ಆರಂಭದ ಹಿನ್ನೆಲೆಯಲ್ಲಿ ನವೆಂಬರ್ 17ರಿಂದ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈ ಪರೀಕ್ಷೆಯಲ್ಲಿ ಮಣಿಪಾಲದ ಐದು ಹಾಗೂ ಕಾರ್ಕಳ ತಾಲೂಕಿನ ಇಬ್ಬರು ವಿದ್ಯಾರ್ಥಿಗಳಲ್ಲಿ ಸೋಂಕು ಧೃಢಗೊಂಡಿದ್ದು, ಸೋಂಕಿತ ವಿದ್ಯಾರ್ಥಿಗಳಿಗೆ ಹೋಂ ಐಸೋಲೇಶನ್ ಚಿಕಿತ್ಸೆ ನೀಡಲಾಗುತ್ತಿದೆ.
ಚಿತ್ರದುರ್ಗದಲ್ಲಿ 17 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢ
ಜಿಲ್ಲೆಯಲ್ಲಿ ಈವರೆಗೆ ಒಟ್ಟು ಆರು ಸಾವಿರ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ. ನವೆಂಬರ್ 17ರಿಂದ ರಾಜ್ಯಾದ್ಯಂತ ಪದವಿ ತರಗತಿಗಳು ಆರಂಭಗೊಂಡಿದ್ದವು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗೆ ಪರೀಕ್ಷೆಗೆ ಒಳಪಡಿಸಲಾಗಿತ್ತು.
ಉಳಿದಂತೆ ಜಿಲ್ಲೆಯಲ್ಲಿ ಈವರೆಗೆ 22,470 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಸದ್ಯ 211 ಸಕ್ರಿಯ ಪ್ರಕರಣಗಳಷ್ಟೇ ಇವೆ. ಈವರೆಗೆ 187 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.